Homeಕರ್ನಾಟಕಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ನೂರಕ್ಕೆ ನೂರರಷ್ಟು ಗೆಲುವು ಪಕ್ಕಾ: ಸಿದ್ದರಾಮಯ್ಯ

ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ನೂರಕ್ಕೆ ನೂರರಷ್ಟು ಗೆಲುವು ಪಕ್ಕಾ: ಸಿದ್ದರಾಮಯ್ಯ

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದ್ದು, ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಸೋಮವಾರ ಚಳ್ಳಕೆರೆ ನಗರದಲ್ಲಿ ಮಾಧ್ಯಮದವರೊಂದಿಗ ಮಾತನಾಡಿದರು.

ಬಿಜೆಪಿ ಶಾಸಕ ಯತ್ನಾಳ್ ಅವರು ಅಹಿಂದ ವರ್ಗದ ಹಣವನ್ನು ಕಾಂಗ್ರೆಸ್ ಲೂಟಿ ಮಾಡಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, “1000 ಕೋಟಿ ಬಳಸಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲಿದೆ ಎಂದು ಯತ್ನಾಳ್ ಅವರು ಹೇಳಿದ್ದರು. ಅವರು ಹೇಳುವ ಸಾವಿರ ಕೋಟಿ ಯಾರ ಹಣ, ಇದು ಕಪ್ಪು ಹಣ ಇರಬಹುದಲ್ಲವೇ. ಬಿಜೆಪಿಯವರು ಲಂಚದಿಂದ ಬರುವ ಈ ಕಪ್ಪು ಹಣ ಬಳಸಿ ಸರ್ಕಾರ ಉರುಳಿಸುತ್ತೇವೆ ಎಂದಿದ್ದಾರೆ” ಎಂದು ತಿಳಿಸಿದರು.

ಚನ್ನಪಟ್ಟಣ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷ ಸಿ ಪಿ ಯೋಗೇಶ್ವರ್ ಅವರನ್ನು ಸೆಳೆಯಲು ಪ್ರಯತ್ನಿಸುತ್ತಿದೆ ಎಂದು ಜೆಡಿಎಸ್ ಅವರು ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಮೊದಲು ಚನ್ನಪಟ್ಟಣ ಕ್ಷೇತ್ರಕ್ಕೆ ಬಿಜೆಪಿ ಜೆಡಿಎಸ್ ನವರು ಅಭ್ಯರ್ಥಿಯನ್ನು ಆಯ್ಕೆ ಮಾಡಲಿ. ಚನ್ನಪಟ್ಟಣ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಸಧ್ಯದಲ್ಲಿಯೇ ಆಯ್ಕೆ ಅಂತಿಮ ಗೊಳಿಸಲಾಗುವುದು” ಎಂದರು.

“ಬೆಂಗಳೂರಿನಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ” ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments