Homeಕರ್ನಾಟಕಮಾದಾರ ಮಹಾಸಭಾಗೆ 11 ಎಕರೆ ಜಮೀನು: ಸಚಿವ ಕೆ.ಎಚ್.ಮುನಿಯಪ್ಪ

ಮಾದಾರ ಮಹಾಸಭಾಗೆ 11 ಎಕರೆ ಜಮೀನು: ಸಚಿವ ಕೆ.ಎಚ್.ಮುನಿಯಪ್ಪ

ಪೌರ ಕಾರ್ಮಿಕರ ಸೇವೆ ಸಮಾಜಕ್ಕೆ ಅತ್ಯಂತ ಮಹತ್ವದ್ದಾಗಿದ್ದು, ಅವರ ಕುಟುಂಬಗಳ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಲಿದೆ ಎಂದು ಸಮಾಜ ಕಲ್ಯಾಣ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ನಗರಾಭಿವೃದ್ಧಿ ಇಲಾಖೆ ಹಾಗೂ ಪೌರಾಡಳಿತ ನಿರ್ದೇಶನಾಲಯದ ವತಿಯಿಂದ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಸ್ವಚ್ಛತೆಯಲ್ಲಿ ಪೌರ ಕಾರ್ಮಿಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದರು.

ಪೌರ ಕಾರ್ಮಿಕರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಿ, ಅವರು ಭವಿಷ್ಯದಲ್ಲಿ ವೈದ್ಯರು, ಎಂಜಿನಿಯರ್‌ಗಳು, ಐಎಎಸ್ ಹಾಗೂ ಕೆಎಎಸ್ ಅಧಿಕಾರಿಗಳಾಗುವಂತೆ ಅಗತ್ಯ ಅವಕಾಶಗಳನ್ನು ಕಲ್ಪಿಸಲಾಗುವುದು ಎಂದು ಹೇಳಿದರು.

ಪೌರ ಕಾರ್ಮಿಕರ ಹಲವು ವರ್ಷಗಳ ಹೋರಾಟದ ಫಲವಾಗಿ ಸಾವಿರಾರು ಕಾರ್ಮಿಕರನ್ನು ಕಾಯಂಗೊಳಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಉಳಿದಿರುವ ಲೋಡರ್‌ಗಳು, ಕ್ಲೀನರ್‌ಗಳು, ಚಾಲಕರು ಸೇರಿದಂತೆ ಸಂಬಂಧಿತ ಸಿಬ್ಬಂದಿಯ ಕಾಯಂಗೊಳಿಸುವಿಕೆ ಹಾಗೂ ಇತರ ಬೇಡಿಕೆಗಳ ಕುರಿತು ಸರ್ಕಾರದ ಗಮನಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಪೌರ ಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಬೆಳಗಿನ ಉಪಹಾರ ಭತ್ಯೆ ಹೆಚ್ಚಿಸುವುದು ಸೇರಿದಂತೆ ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ಸರ್ಕಾರ ಜಾರಿಗೊಳಿಸಿದೆ. ಕಾರ್ಮಿಕರ ಕುಟುಂಬಗಳ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗೆ ಇನ್ನಷ್ಟು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಶಿಕ್ಷಣ, ವಸತಿ ಹಾಗೂ ಉದ್ಯೋಗಾವಕಾಶಗಳ ಮೂಲಕ ಸಾಮಾಜಿಕ ಸಮಾನತೆ ಸಾಧಿಸಲು ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.

ಮಾದಾರ ಮಹಾಸಭಾಗೆ 11 ಎಕರೆ ಜಮೀನು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಾದಾರ ಮಹಾಸಭಾದ ಮೂಲಕ ಮಕ್ಕಳ ಶೈಕ್ಷಣಿಕ ಹಾಗೂ ಸಾಮಾಜಿಕ ಅಭಿವೃದ್ಧಿಗಾಗಿ 11 ಎಕರೆ ಜಮೀನು ಒದಗಿಸಿರುವುದು ಸಮುದಾಯದ ಅಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಿದೆ. ಈ ಜಮೀನನ್ನು ಶೈಕ್ಷಣಿಕ ಹಾಗೂ ಸಾಮಾಜಿಕ ಉದ್ದೇಶಗಳಿಗೆ ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಸಚಿವ ಮುನಿಯಪ್ಪ ಹೇಳಿದರು.

ಡಾ. ಬಿ.ಆರ್.ಅಂಬೇಡ್ಕರ್ ಅವರ ಆಶಯದಂತೆ ವಿವಿಧೆಡೆ ಹೊಸ ವಸತಿ ಶಾಲೆಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರತಿಯೊಬ್ಬ ಮಗುವಿಗೂ ಉತ್ತಮ ಶಿಕ್ಷಣ ದೊರೆಯಬೇಕು ಹಾಗೂ ಯಾವುದೇ ಭೇದಭಾವವಿಲ್ಲದೆ ಸಮಾನ ಅವಕಾಶಗಳು ಸಿಗಬೇಕು ಎಂಬುದು ಸರ್ಕಾರದ ಆಶಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸಚಿವರಾದ ಎಚ್.ಸಿ.ಬಾಲಕೃಷ್ಣ, ಯತೀಂದ್ರ ಸಿದ್ದರಾಮಯ್ಯ, ಬಸವಂತಪ್ಪ, ಮಾಜಿ ಸಚಿವ ಎಚ್.ಆಂಜನೇಯ, ಶಾಸಕರು, ಅಧ್ಯಕ್ಷ ಅಶೋಕ ಸಾಲಪ್ಪ, ಮಾಜಿ ಮೇಯರ್ ನಾರಾಯಣ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments