Homeಕರ್ನಾಟಕಜು.8ರಿಂದ ವಿ ಸಿ ನಾಲೆಗೆ 15 ದಿನ ನೀರು: ಸಚಿವ ಚಲುವರಾಯಸ್ವಾಮಿ

ಜು.8ರಿಂದ ವಿ ಸಿ ನಾಲೆಗೆ 15 ದಿನ ನೀರು: ಸಚಿವ ಚಲುವರಾಯಸ್ವಾಮಿ

ಕಳೆದ 10 ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮವಾಗಿ ಮಳೆಯಾಗುತ್ತಿರುವ ಹಿನ್ನಲೆ ಕೆ.ಆರ್.ಎಸ್ ಅಣೆಕಟ್ಟು 100 ಅಡಿ ತುಂಬಿದೆ, ಶಾಸಕರ ಒತ್ತಾಯದ ಮೇರೆಗೆ ಜುಲೈ 8 ರ ಸಂಜೆಯಿಂದ ಹದಿನೈದು ದಿನಗಳ ಕಾಲ ವಿ.ಸಿ.ನಾಲೆಗೆ ನೀರು ಹರಿಸಲಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.‌

ಕೃಷ್ಣರಾಜಸಾಗರ ಜಲಾಶಯದ ಅಚ್ಚುಕಟ್ಟು ಪ್ರದೇಶದ ನೀರಾವರಿ ಸಲಹಾ ಸಮಿತಿ ಸಭೆಯ ನಂತರ ಸುದ್ಧಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವರು, “ಸಾಮಾನ್ಯವಾಗಿ ಪ್ರತಿವರ್ಷ ಕೆಆರ್ ಎಸ್ ಅಣೆಕಟ್ಟಿನಿಂದ ಜುಲೈ ಎರಡನೇ ವಾರದಿಂದ ವಿ.ಸಿ.ನಾಲೆಗೆ ನೀರು ಹರಿಸಲಾಗುತ್ತಿತ್ತು.. ಆದರೆ ಈ ಬಾರಿ ಮಾರ್ಚ್ ನಲ್ಲಿ ನಾಲೆಗೆ ನೀರು ಹರಿಸದ ಹಿನ್ನಲೆಯಲ್ಲಿ ಜುಲೈ 8 ರ ಸಂಜೆಯಿಂದ ಮುಂದಿನ 15 ದಿನಗಳ ಕಾಲ ವಿ.ಸಿ.ನಾಲೆಗೆ ನೀರು ಹರಿಸಲಾಗುವುದು” ಎಂದು ಹೇಳಿದರು.

“ಇದು ಕೇವಲ ಕೆರೆ ಕಟ್ಟೆ ತುಂಬಿಸಲು ಹಾಗು ಜಾನುವಾರುಗಳ ಹಿತದೃಷ್ಟಿಯಿಂದ ನಾಲೆಗೆ ನೀರು ಹರಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಮುಂದಿನ 15 ದಿನಗಳ ನಂತರ ಮುಂಗಾರು ಮಳೆಯ ಪರಿಸ್ಥಿತಿ ಹಾಗು ಕೆಆರ್ ಎಸ್ ಅಣೆಕಟ್ಟಿನ ಒಳಹರಿವು ಗಮನಿಸಿಕೊಂಡು ರೈತರ ಬೆಳೆಗಳಿಗೂ ನೀರು ಹರಿಸಲು ತೀರ್ಮಾನ ತೆಗೆದುಕೊಳ್ಳಲಾಗುವುದು” ಎಂದರು.

“ವಿ.ಸಿ.ನಾಲೆಯ 36 ಕಿಮೀ ಕಾಮಗಾರಿ ಈಗಾಗಲೇ ಮುಕ್ತಾಯವಾಗಿದ್ದು, ಬಾಕಿ 16 ಕಿಮೀ ಕಾಮಗಾರಿ ನಾಲೆಗೆ ನೀರು ಹರಿಸುವುದನ್ನು ನಿಲ್ಲಿಸಿದ ನಂತರ ಮುಕ್ತಾಯಗೊಳಿಸಲಾಗುವುದು. ಟ್ರಯಲ್ ಬ್ಲಾಸ್ ಬಗ್ಗೆ ಸಿ.ಎಂ. ಸಿದ್ದರಾಮಯ್ಯ ಹಾಗು ಹೈಕೋರ್ಟ್ ಅಡ್ವೋಕೆಟ್ ಜನರಲ್ ಜೊತೆ ಚರ್ಚೆ ಮಾಡಿ ಜುಲೈ 15 ರೊಳಗೆ ತೀರ್ಮಾನ ಕೈಗೊಳ್ಳಲಾಗುವುದು. ಇಂದು‌ ಮಂಡ್ಯದಲ್ಲಿ ಟ್ರಯಲ್ ಬ್ಲಾಸ್ಟ್ ಸಾಧಕ ಬಾದಕ ಬಗ್ಗೆ ರೈತರ ಜೊತೆ ಚರ್ಚೆ ನಡೆಸಿದ್ದೇನೆ” ಚಲುವರಾಯಸ್ವಾಮಿ ಹೇಳಿದರು‌‌..

ಸಭೆಯಲ್ಲಿ ಮಳವಳ್ಳಿ ಶಾಸಕ ನರೇಂದ್ರ ಸ್ವಾಮಿ, ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ, ಮದ್ದೂರು ಶಾಸಕ ಉದಯ್ ಗೌಡ, ಮಂಡ್ಯ ಶಾಸಕ ರವಿಕುಮಾರ್ ಗಣಿಗ, ವಿಧಾನಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಧು ಮಾದೇಗೌಡ, ಮಂಜೇಗೌಡ, ಮಂಡ್ಯ ಜಿಲ್ಲಾಧಿಕಾರಿ ಕುಮಾರ್ ಸೇರಿದಂತೆ ಇತರೆ ಅಧಿಕಾರಿಗಳು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments