Homeಕರ್ನಾಟಕ6 ವರ್ಷದಲ್ಲಿ ರಾಜ್ಯಕ್ಕೆ 19.2 ಗಿ.ವ್ಯಾ. ನವೀಕರಿಸಬಹುದಾದ ಇಂಧನ ಸೇರ್ಪಡೆ: ಗೌರವ್‌ಗುಪ್ತಾ

6 ವರ್ಷದಲ್ಲಿ ರಾಜ್ಯಕ್ಕೆ 19.2 ಗಿ.ವ್ಯಾ. ನವೀಕರಿಸಬಹುದಾದ ಇಂಧನ ಸೇರ್ಪಡೆ: ಗೌರವ್‌ಗುಪ್ತಾ

ರಾಜ್ಯದ ನವೀಕರಿಸಬಹುದಾದ ಇಂಧನದ ಈಗಿನ 18 ಗಿ.ವ್ಯಾ. ಸಾಮರ್ಥ್ಯದ ಜತೆಗೆ ಮುಂದಿನ 6 ವರ್ಷಗಳಲ್ಲಿ 19.2 ಗಿ.ವ್ಯಾ. ಸೇರ್ಪಡೆಗೊಳಿಸಲಾಗುವುದು ಎಂದು ಇಂಧನ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಗೌರವ್‌ ಗುಪ್ತಾ ಹೇಳಿದ್ದಾರೆ.

ಗುಜರಾತಿನ ಗಾಂಧಿನಗರದ ಮಹಾತ್ಮ ಮಂದಿರ ಸಭಾಂಗಣದಲ್ಲಿ ನಡೆಯುತ್ತಿರುವ 3 ದಿನಗಳ ‘ನವೀಕರಿಸಬಹುದಾದ ಇಂಧನ ಹೂಡಿಕೆ ಸಮಾವೇಶ’ದಲ್ಲಿ ಸೋಮವಾರ ಪಾಲ್ಗೊಂಡು ಅವರು ಮಾತನಾಡಿದರು.

“2030ರ ವೇಳೆಗೆ ದೇಶದ ನವೀಕರಿಸಬಹುದಾದ ಇಂಧನ ಉತ್ಪಾದನೆಯ ಸಾಮರ್ಥ್ಯವನ್ನು 500 ಗಿ.ಗ್ಯಾ. ಹೆಚ್ಚಿಸಬೇಕೆಂಬ ಸಂಕಲ್ಪಕ್ಕೆ ಬದ್ಧವಾಗಿ ರಾಜ್ಯದ ಹಸಿರು ಇಂಧನ ಉತ್ಪಾದನೆ ಸಾಮರ್ಥ್ಯಕ್ಕೆ ಮುಂದಿನ 6 ವರ್ಷಗಳಲ್ಲಿ 19.2 ಗಿ.ವ್ಯಾ. ಹೆಚ್ಚುವರಿಯಾಗಿ ಸೇರ್ಪಡೆಗೊಳಿಸಲಾಗುವುದು. ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರ ಮಾರ್ಗದರ್ಶನದಲ್ಲಿ ಈ ಹೊಸ ಸಂಕಲ್ಪ ಸಾಕಾರಗೊಳಿಸಲಾಗುವುದು” ಎಂದರು.

“ಪಾವಗಡ ಸೋಲಾರ್‌ ಪಾರ್ಕ್‌ ಎರಡನೇ ಅತಿ ದೊಡ್ಡ ಸೋಲಾರ್ ಪಾರ್ಕ್‌ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಪವನ ವಿದ್ಯುತ್‌ ಸಾಮರ್ಥ್ಯದಲ್ಲಿ ರಾಜ್ಯ ಮೂರನೇ ಸ್ಥಾನದಲ್ಲಿದ್ದು, ಒಟ್ಟಾರೆ ಸೌರ ವಿದ್ಯುತ್‌ ಸಾಮರ್ಥ್ಯದಲ್ಲೂ ರಾಜ್ಯ ಮೂರನೇ ಸ್ಥಾನದಲ್ಲಿದೆ. ಒಟ್ಟಾರೆ ಜಲವಿದ್ಯುತ್‌ ಸಾಮರ್ಥ್ಯದಲ್ಲಿ ಎರಡನೇ ಸ್ಥಾನದಲ್ಲಿದ್ದೇವೆ” ಎಂದು ಹೇಳಿದರು.

ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪಯ್ಯ ಮಾತನಾಡಿ, “2023-24ರ ಆರ್ಥಿಕ ವರ್ಷದಲ್ಲಿಯೇ ನಾವು 1,027 ಮೆಗಾವ್ಯಾಟ್‌ ಸಾಮರ್ಥ್ಯದ ಪವನ ಯೋಜನೆಗಳನ್ನು ನಿಯೋಜಿಸಿದ್ದೇವೆ. ಸ್ಥಿರ ಮತ್ತು ವಿಶ್ವಾಸಾರ್ಹ ಇಂಧನ ಪೂರೈಕೆಯ ಖಾತ್ರಿಗಾಗಿ ಸೌರ ಮತ್ತು ಪವನ ಶಕ್ತಿಯನ್ನು ಸಂಯೋಜಿಸಲಾಗುತ್ತಿದೆ. ಉದ್ಯಮಗಳು ಮತ್ತು ಹೂಡಿಕೆದಾರರಿಗೆ ರಾಜ್ಯದಲ್ಲಿ ಅನುಕೂಲಕರ ವಾತಾವರಣವಿದೆ”ಎಂದು ತಿಳಿಸಿದರು.

ಪ್ರಧಾನಿ ಮೋದಿ ಭೇಟಿ

ಹೊಯ್ಸಳ ವಾಸ್ತು ಶೈಲಿ”ಯಲ್ಲಿ ನಿರ್ಮಿಸಿರುವ ಕರ್ನಾಟಕ ಪೆವಿಲಿಯನ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿದರು. ನವೀಕರಿಸಬಹುದಾದದ ಇಂಧನ- ಸೌರ (ಪಾವಗಡ ಸೋಲಾರ್‌ ಪಾರ್ಕ್‌), ರಾಜ್ಯದ ಪವನ ವಿದ್ಯುತ್‌, ಜೈವಿಕ ಇಂಧನ, ಕಿರು ಜಲ ವಿದ್ಯುತ್‌ ಯೋಜನೆಗಳ ಬಗ್ಗೆ ಪ್ರಧಾನಿಗೆ ಗೌರವ ಗುಪ್ತಾ ವಿವರಿಸಿದರು. ಪ್ರಧಾನಿ ಮೋದಿ ಅವರ ಜತ ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಲ್ಹಾದ್‌ ಜೋಶಿ ಅವರು ನಮ್ಮ ಪೆವಿಲಿಯನ್‌ಗೆ ಭೇಟಿ ನೀಡಿ ರಾಜ್ಯದಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರದ ಸಾಧನೆಗಳ ಕುರಿತಂತೆ ಮಾಹಿತಿ ಪಡೆದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments