Homeಕರ್ನಾಟಕಬಾಪೂಜಿ ಸೇವಾ ಕೇಂದ್ರಗಳಲ್ಲಿ ಶೀಘ್ರದಲ್ಲೇ ಇನ್ನೂ 208 ಸೇವೆಗಳು ಲಭ್ಯ: ಪ್ರಿಯಾಂಕ್ ಖರ್ಗೆ

ಬಾಪೂಜಿ ಸೇವಾ ಕೇಂದ್ರಗಳಲ್ಲಿ ಶೀಘ್ರದಲ್ಲೇ ಇನ್ನೂ 208 ಸೇವೆಗಳು ಲಭ್ಯ: ಪ್ರಿಯಾಂಕ್ ಖರ್ಗೆ

ರಾಜ್ಯದಾದ್ಯಂತ ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಈಗ ನೀಡಲಾಗುತ್ತಿರುವ 81 ಸೇವೆಗಳ ಜೊತೆ ಇನ್ನೂ 208 ಸೇವೆಗಳನ್ನು ಬಾಪೂಜಿ ಸೇವಾ ಕೇಂದ್ರಗಳ ಸೇವಾಸಿಂಧು ಪೋರ್ಟಲ್ ಮೂಲಕ ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

2024-25 ನೇ ಸಾಲಿನ ಆಯವ್ಯಯದಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಒದಗಿಸಲಾಗುತ್ತಿರುವ ಎಲ್ಲಾ ಸೇವೆಗಳನ್ನು ಬಾಪೂಜಿ ಸೇವಾ ಕೇಂದ್ರಗಳಲ್ಲೂ ಪ್ರಾರಂಭಿಸಲಾಗುವುದು ಎಂದು ಘೋಷಿಸಲಾಗಿತ್ತು, ಅದರಂತೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯು ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದೊಂದಿಗೆ ಒಪ್ಪಂದವನ್ನು ಮಾಡಿಕೊಂಡಿದ್ದು, ಗ್ರಾಮೀಣ ಭಾಗದ ನಾಗರಿಕರಿಗೆ ಅನುಕೂಲವಾಗುವಂತೆ ಮೊದಲ ಹಂತದಲ್ಲಿ 208 ಸೇವೆಗಳನ್ನು ಬಳಸುವ ಸೌಲಭ್ಯವನ್ನು ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಸೇವಾ ಸಿಂಧು ಪೋರ್ಟಲ್ ಮೂಲಕ ಒದಗಿಸಲಾಗುತ್ತಿರುವ 46 ವಿವಿಧ ಇಲಾಖೆಗಳ 800ಕ್ಕಿಂತಲೂ ಹೆಚ್ಚು ಸೇವೆಗಳಲ್ಲಿ ಗ್ರಾಮೀಣ ಜನತೆಗೆ ಉಪಯೋಗವಾಗುವಂತಹ ಸೇವೆಗಳನ್ನು ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಒದಗಿಸಲಿರುವುದರಿಂದ ಗ್ರಾಮೀಣ ಜನತೆಗೆ ಒಂದೇ ಸೂರಿನಡಿ ಎಲ್ಲಾ ಇಲಾಖೆಗಳ ಸೇವೆಗಳನ್ನು ನೀಡಿದಂತಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಇ-ಆಡಳಿತ) ಆಧೀನದಲ್ಲಿ ಬರುವ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳ ಮೂಲಕ ಸೇವಾ ಸಿಂಧು ಪೋರ್ಟಲ್ ನಲ್ಲಿ 800 ಕ್ಕಿಂತ ಹೆಚ್ಚು ಸೇವೆಗಳನ್ನುಈಗ ಒದಗಿಸಲಾಗುತ್ತಿದೆ. ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ವಿವಿಧ ಇಲಾಖೆಗಳ ಸುಮಾರು 300 ಸೇವೆಗಳನ್ನು ಒದಗಿಸಿದಂತಾಗುವುದು ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments