Homeಕರ್ನಾಟಕಮೊದಲ ಹಂತದಲ್ಲಿ 2,248 ಕಿ.ಮೀ. ಗ್ರಾಮೀಣ ರಸ್ತೆ ಅಭಿವೃದ್ಧಿ: ಈಶ್ವರ ಖಂಡ್ರೆ

ಮೊದಲ ಹಂತದಲ್ಲಿ 2,248 ಕಿ.ಮೀ. ಗ್ರಾಮೀಣ ರಸ್ತೆ ಅಭಿವೃದ್ಧಿ: ಈಶ್ವರ ಖಂಡ್ರೆ

ರಾಜ್ಯದ 202 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಪ್ರಗತಿಪಥ ಯೋಜನೆಯಡಿ 5,400 ಕಿ.ಮೀ. ಗ್ರಾಮೀಣ ರಸ್ತೆ ಅಭಿವೃದ್ಧಿಪಡಿಸಲಾಗುತ್ತಿದ್ದು, ಮೊದಲ ಹಂತದಲ್ಲಿ 1,692 ಕೋಟಿ ರೂ. ವೆಚ್ಚದಲ್ಲಿ 2,248 ಕಿ.ಮೀ. ರಸ್ತೆ ಕಾಮಗಾರಿ ಕೈಗೊಳ್ಳಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಸೂಚಿಸಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಮೊದಲ ಹಂತದಲ್ಲಿ ಆಯ್ಕೆ ಮಾಡಿರುವ 562 ರಸ್ತೆ ಕಾಮಗಾರಿಗಳ ಗುಣಮಟ್ಟ ಖಚಿತಪಡಿಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಏಷ್ಯಾ ಅಭಿವೃದ್ಧಿ ಬ್ಯಾಂಕ್‌ನ ನೆರವಿನೊಂದಿಗೆ ಅನುಷ್ಠಾನಗೊಳ್ಳುತ್ತಿರುವ ಈ ಯೋಜನೆಗೆ ಬ್ಯಾಂಕ್ ಶೇ.70ರಷ್ಟು ಹಾಗೂ ರಾಜ್ಯ ಸರ್ಕಾರ ಶೇ.30ರಷ್ಟು ಅನುದಾನ ಒದಗಿಸಲಿದೆ. ಮೊದಲ ಹಂತದ ಕಾಮಗಾರಿಗಳಿಗೆ ನವೆಂಬರ್ ಮೊದಲ ವಾರದಲ್ಲಿ ಚಾಲನೆ ನೀಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆಯೂ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಗ್ರಾಮೀಣಾಭಿವೃದ್ಧಿ ಇಲಾಖೆಯ ನಿರ್ದೇಶಕ ದೇವರಾಜೇಗೌಡ, ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆಯ ಮುಖ್ಯ ಎಂಜಿನಿಯರ್ ಮುರಳೀಧರ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments