Homeಕರ್ನಾಟಕ263 ಕೋಟಿ ರೂ. ಅನುದಾನದಲ್ಲಿ 6,599 ಹೊಸ ಗ್ರಾಮ ಗ್ರಂಥಾಲಯ ಪ್ರಾರಂಭ: ಪ್ರಿಯಾಂಕ್ ಖರ್ಗೆ

263 ಕೋಟಿ ರೂ. ಅನುದಾನದಲ್ಲಿ 6,599 ಹೊಸ ಗ್ರಾಮ ಗ್ರಂಥಾಲಯ ಪ್ರಾರಂಭ: ಪ್ರಿಯಾಂಕ್ ಖರ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಈಗಾಗಲೇ 5,895 ಗ್ರಂಥಾಲಯಗಳನ್ನು ಸಜ್ಜುಗೊಳಿಸಿದ್ದು, ಇದರೊಂದಿಗೆ ಈ ವರ್ಷ 263.96 ಕೋಟಿ ರೂ. ಅನುದಾನದಲ್ಲಿ ರಾಜ್ಯದಲ್ಲಿ 6,599 ಹೊಸ ಗ್ರಾಮ ಗ್ರಂಥಾಲಯಗಳನ್ನು ಪ್ರಾರಂಭಿಸಲಾಗುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ‌ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, “ಭಾರತದ ಗ್ರಂಥಾಲಯ ಚಳವಳಿಯ ಪಿತಾಮಹ ಡಾ.ಎಸ್.ಆರ್.ರಂಗನಾಥನ್ ರವರ ಜನ್ಮದಿನದಂದು ರಾಷ್ಟ್ರಮಟ್ಟದಲ್ಲಿ ಗ್ರಂಥಪಾಲಕರ ದಿನ ಆಚರಿಸಲಾಗುತ್ತಿದೆ. ಗ್ರಂಥಪಾಲಕರ ದಿನಾಚರಣೆಯಲ್ಲಿ ಹೊಸ ಗ್ರಾಮ ಗ್ರಂಥಾಲಯಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.

“ಅರಿವು ಕೇಂದ್ರಗಳ ಮಾದರಿ ಕಟ್ಟಡ ವಿನ್ಯಾಸವನ್ನು ಮುಖ್ಯಮಂತ್ರಿಗಳು ಅನಾವರಣಗೊಳಿಸಿದ್ದಾರೆ. ನ್ಯಾಷನಲ್ ಬುಕ್ ಟ್ರಸ್ಟ್ ಆಫ್ ಇಂಡಿಯಾ ಸಂಸ್ಥೆಯಿಂದ ರಾಜ್ಯದಲ್ಲಿ ಹೊಸದಾಗಿ ಆರಂಭಿಸಲಾಗುತ್ತಿರುವ 6,599 ಗ್ರಾಮೀಣ ಗ್ರಂಥಾಲಯಗಳಿಗೆ ತಲಾ 2 ಲಕ್ಷ ರೂ. ಮೌಲ್ಯದ ಪುಸ್ತಕಗಳನ್ನು ಖರೀದಿಸಲಾಗಿದೆ. ಇದಕ್ಕಾಗಿ 131.98 ಕೋಟಿ ರೂ. ವೆಚ್ಚ ಮಾಡಲಾಗಿದೆ. ಪ್ರತಿ ಗ್ರಂಥಾಲಯಕ್ಕೆ ಪೀಠೋಪಕರಣಗಳು ಹಾಗೂ ಡಿಜಿಟಲ್ ಪರಿಕರಗಳನ್ನು ನಿಯಮಾನುಸಾರ ಖರೀದಿಸಿ ಪೂರೈಸಲಾಗುವುದು” ಎಂದು ಹೇಳಿದ್ದಾರೆ.

“6,599 ಹೊಸ ಗ್ರಾಮ ಗ್ರಂಥಾಲಯಗಳಿಗೆ ಮಕ್ಕಳ ಪುಸ್ತಕಗಳನ್ನು ಅಜೀಂ ಪ್ರೇಮ್ ಜಿ ಫೌಂಡೇಶನ್ ಕೊಡುಗೆಯಾಗಿ ನೀಡುತ್ತಿದೆ. ಗ್ರಾಮೀಣ ಗ್ರಂಥಾಲಯಗಳನ್ನು 2019 ರಲ್ಲಿ ಶಿಕ್ಷಣ ಇಲಾಖೆಯಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಹಸ್ತಾಂತರಿಸಲಾಗಿರುತ್ತದೆ. ಪ್ರಸ್ತುತ, ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳನ್ನು ಅರಿವು ಕೇಂದ್ರ’ಗಳಾಗಿ ಮೇಲ್ದರ್ಜೆಗೇರಿಸಲಾಗಿದೆ” ಎಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments