Homeಕರ್ನಾಟಕ27 ಕುಟುಂಬಗಳು ಸ್ವಯಂ ಪ್ರೇರಿತರಾಗಿ ಸಮಾಜದ ಮುಖ್ಯವಾಹಿನಿಗೆ: ಈಶ್ವರ ಖಂಡ್ರೆ

27 ಕುಟುಂಬಗಳು ಸ್ವಯಂ ಪ್ರೇರಿತರಾಗಿ ಸಮಾಜದ ಮುಖ್ಯವಾಹಿನಿಗೆ: ಈಶ್ವರ ಖಂಡ್ರೆ

ಅರಣ್ಯ ಸಂರಕ್ಷಣೆಯಲ್ಲಿ ಅರಣ್ಯವಾಸಿಗಳ ಪಾತ್ರ ಹಿರಿದಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.

ಬೆಳಗಾವಿ ಜಿಲ್ಲೆ, ಖಾನಾಪುರ ತಾಲೂಕು ಹೆಮ್ಮಡಗಾದಲ್ಲಿಂದು ಭೀಮಗಢ ಅರಣ್ಯ ವಲಯದ ತಳೇವಾಡಿ (ಗೌವಳಿ) ಗ್ರಾಮದಿಂದ ಸ್ವಯಂ ಪ್ರೇರಿತವಾಗಿ ಕಾಡಿನಿಂದ ಹೊರಗೆ ಬರಲು ಇಚ್ಛಿಸಿರುವ 27 ಕುಟುಂಬಗಳಿಗೆ ಚೆಕ್ ವಿತರಿಸಿ ಮಾತನಾಡಿದ ಅವರು, “ಅರಣ್ಯ ಸಂರಕ್ಷಣೆಯಲ್ಲಿ ಅರಣ್ಯ ಸಿಬ್ಬಂದಿಯ ಜೊತೆಗೆ ಅರಣ್ಯವಾಸಿಗಳೂ ಮಹತ್ವದ ಪಾತ್ರ ವಹಿಸಿದ್ದಾರೆ” ಎಂದರು.

“ಭೀಮಗಢದ ಅರಣ್ಯ ವ್ಯಾಪ್ತಿಯಲ್ಲಿ 13 ಗ್ರಾಮಗಳಿದ್ದು ಇಲ್ಲಿ ಸುಮಾರು 754 ಕುಟುಂಬಗಳು ವಾಸಿಸುತ್ತಿವೆ. ಈ ಪೈಕಿ ತಳೇವಾಡಿಯ 27 ಕುಟುಂಬಗಳು ಸ್ವಯಂ ಪ್ರೇರಿತರಾಗಿ ಸಮಾಜದ ಮುಖ್ಯವಾಹಿನಿಗೆ ಬರಲು ತೀರ್ಮಾನಿಸಿದೆ” ಎಂದು ಹೇಳಿದರು.

“ಹಿಂದಿನ ತಲೆಮಾರಿನ ಅರಣ್ಯವಾಸಿಗಳಿಗೆ ವನ್ಯಜೀವಿಗಳೊಂದಿಗೆ ಸಹಬಾಳ್ವೆ ನಡೆಸುವುದು ಚೆನ್ನಾಗಿ ತಿಳಿದಿತ್ತು, ಆದರೆ ಇಂದಿನ ಪೀಳಿಗೆಯ ಅರಣ್ಯವಾಸಿಗಳಿಗೆ ಅಷ್ಟು ಪರಿಣತಿ ಇಲ್ಲ. ಹೀಗಾಗಿ ನಾಗರಿಕ ಸಮಾಜದಲ್ಲಿ ಅವರು ಬದುಕು ಕಟ್ಟಿಕೊಳ್ಳಲು ಈ ಸ್ಥಳಾಂತರ ಸಹಕಾರಿಯಾಗಲಿದೆ” ಎಂದರು.

“ಅರಣ್ಯದೊಳಗಿಂದ ಅರಣ್ಯದ ಹೊರಕ್ಕೆ ವಸತಿ ಪ್ರದೇಶಗಳನ್ನು ಸ್ಥಳಾಂತರ ಮಾಡುವುದರಿಂದ ಅರಣ್ಯ ಮತ್ತು ಅರಣ್ಯ ಸಂಪತ್ತು ವೃದ್ಧಿಸುತ್ತದೆ. ಅರಣ್ಯವಾಗಿಸಿಗಳ ಬದುಕೂ ಹಸನಾಗುತ್ತದೆ. ಕಳೆದ ಡಿಸೆಂಬರ್ ತಿಂಗಳಲ್ಲಿ ವಿಧಾನಮಂಡಳದ ಅಧಿವೇಶನ ವೇಳೆ ಭೀಮಗಢಕ್ಕೆ ಭೇಟಿ ನೀಡಿದ್ದಾಗ, ಅರಣ್ಯದೊಳಗೆ ತಲೆಯ ಮೇಲೆ ದಿನಸಿ ಹೊತ್ತು ಬರುತ್ತಿದ್ದ ಮಹಿಳೆಯರನ್ನು ನೋಡಿ, ಕಾರು ನಿಲ್ಲಿಸಿ ಮಾತನಾಡಿಸಿದಾಗ, ಒಬ್ಬರು ತಮ್ಮ ಪತಿಯನ್ನು ಹುಲಿ ಕೊಂದು ಹಾಕಿತು ಎಂದು ದುಃಖ ತೋಡಿಕೊಂಡರೆ, ಮತ್ತೊಬ್ಬ ಮಹಿಳೆ ತಮ್ಮ ಪತಿಯ ಮೇಲೆ ಕರಡಿ ದಾಳಿ ಮಾಡಿ ಶಾಶ್ವತ ಅಂಗವೈಕಲ್ಯ ಉಂಟಾಗಿದೆ. ಈ ಘಟನೆ ತಮ್ಮ ಮನ ಕಲಕಿತು” ಎಂದು ಹೇಳಿದರು.

“ತಳೇವಾಡಿಗೆ ಭೇಟಿ ನೀಡಿದಾಗ ಅಲ್ಲಿನ ಕುಟುಂಬದ ಸದಸ್ಯರು ಸ್ವಯಂ ಇಚ್ಛೆಯಿಂದ ಕಾಡಿನಿಂದ ಹೊರಗೆ ಹೋಗಲು ತಾವು ಸಿದ್ಧವಿರುವುದಾಗಿ ತಿಳಿಸಿದರು. ನಿಯಮಾನುಸಾರ ಕ್ರಮ ಕೈಗೊಳ್ಳಲು ಸೂಚಿಸಿದ್ದೆ. ಇದು ಅದು ಸಾಕಾರವಾಗಿದೆ” ಎಂದರು.

“ಪ್ರಥಮ ಹಂತದಲ್ಲಿ ಇಂದು 27 ಕುಟುಂಬಗಳಿಗೆ ನಿಯಮಾನುಸಾರ ಮತ್ತು ಕಾನೂನು ಬದ್ಧವಾಗಿ ಪ್ರಥಮ ಹಂತದಲ್ಲಿ ಒಂದು ಪರಿವಾರದ ಘಟಕಕ್ಕೆ ತಲಾ 10 ಲಕ್ಷ ರೂಪಾಯಿ ನೀಡಲಾಗುತ್ತಿದೆ. ಉಳಿದ 5 ಲಕ್ಷ ರೂಪಾಯಿಗಳನ್ನು ಅವರು ಸ್ಥಳಾಂತರ ಪ್ರಕ್ರಿಯೆ ಪೂರ್ಣಗೊಳಿಸಿದ ತರುವಾಯ ನೀಡಲಾಗುವುದು” ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments