Homeಕರ್ನಾಟಕ2ಎ ಮೀಸಲಾತಿ ಹೋರಾಟ | ಕಲ್ಲು ಎಸೆದ ಆರೋಪಿಗಳ ವಿರುದ್ಧ ಎಫ್‌ಐಆರ್‌

2ಎ ಮೀಸಲಾತಿ ಹೋರಾಟ | ಕಲ್ಲು ಎಸೆದ ಆರೋಪಿಗಳ ವಿರುದ್ಧ ಎಫ್‌ಐಆರ್‌

2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯ ಬೆಳಗಾವಿಯ ಸುವರ್ಣಸೌಧ ಪಕ್ಕದಲ್ಲಿ ನಡೆಸುತ್ತಿರು ಹೋರಾಟ ತೀವ್ರ ಸ್ವರೂಪ ಪಡೆದು, ಕಲ್ಲು ತೂರಾಟದ ವೇಳೆ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ 17 ಜನರಿಗೆ ಗಾಯವಾಗಿದೆ. ಘಟನೆಯಲ್ಲಿ ಏಳು ಸರ್ಕಾರಿ ಬಸ್, ಮೂರು ಪೊಲೀಸ್ ವಾಹನ ಜಖಂಗೊಂಡ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಮಸಾಲಿ ಸಮುದಾಯ ಬೆಳಗಾವಿಯಲ್ಲಿ ಮಂಗಳವಾರ ನಡೆದ ಹೋರಾಟ ನಗರವನ್ನು ಉದ್ವಿಗ್ನಗೊಳಿಸಿತ್ತು. ಕಲ್ಲು ಎಸೆದ ಆರೋಪದ ಮೇಲೆ ನಿಂಗಪ್ಪ ಬಣದ್, ರಾಮಗೌಡ ಫಕೀರಗೌಡ, ಉಮೇಶ್ ಇಂಗಳೆವಾರ್, ಮಂಜುನಾಥ್ ಬೆಂಡಿಗೇರಿ, ಮಂಜುನಾಥ್ ಗುಮ್ಮಗೋಳ ಹಾಗೂ ಇತರರ ಮೇಲೆ ಎಫ್​ಐಆರ್​ ದಾಖಲಾಗಿದೆ.

ಆರೋಪಿತರು ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ಮಾಡಿ ಗಂಭೀರ ಗಾಯಗೊಳಿಸಿದ್ದಾರೆ. ಅಲ್ಲದೇ ಕೊಲೆ ಮಾಡಲು ಯತ್ನಸಿದ್ದಾರೆ. ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಮಾಡಿದ್ದಾರೆ ಎಂದು ಬಿಎನ್‌ಎಸ್ ಕಲಂ 115(2), 109(1), 118(2), 117(2), 352, 351(2), 132, 121, 223, 324,189, 189(3), 191(2), 190 ಅಡಿ ಕೇಸ್ ದಾಖಲಿಸಿಕೊಂಡಿದ್ದಾರೆ.

ಮಂಗಳವಾರದ ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭಾಗವಹಿಸಿದ್ದರು. ಹೋರಾಟಗಾರರು ಮಂಗಳವಾರ ಟ್ರ್ಯಾಕ್ಟರ್​ ಮೂಲಕ ಸುವರ್ಣಸೌಧ ಮುತ್ತಿಗೆ ಹಾಕಲು ನಿರ್ಧರಿಸಿದ್ದರು. ಆದರೆ, ಜಿಲ್ಲಾಧಿಕಾರಿಯವ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಟ್ರ್ಯಾಕ್ಟರ್ ​ರ್‍ಯಾಲಿ ಕೈಬಿಡಲಾಗಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments