Homeಕರ್ನಾಟಕ414ನೇ ದಸರಾ | ಮೈಸೂರಿನತ್ತ ಹೆಜ್ಜೆ ಹಾಕಿದ ಗಜಪಡೆ

414ನೇ ದಸರಾ | ಮೈಸೂರಿನತ್ತ ಹೆಜ್ಜೆ ಹಾಕಿದ ಗಜಪಡೆ

ನಾಡಹಬ್ಬ ದಸರಾದಲ್ಲಿ ಪಾಲ್ಗೊಳ್ಳುವ ಗಜಪಡೆಯ 9 ಆನೆಗಳಿಗೆ ಹುಣಸೂರು ಬಳಿಯ ವೀರನಹೊಸಹಳ್ಳಿಯಲ್ಲಿ ಅರಣ್ಯ ಸಚಿವ ಈಶ್ವರ್‌ ಖಂಡ್ರೆ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್ ಸಿ ಮಹದೇವಪ್ಪ, ಸಚಿವ ವೆಂಕಟೇಶ್ ಉಪಸ್ಥಿತಿಯಲ್ಲಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ, ಕಾಡಿನಿಂದ ನಾಡಿಗೆ ಆನೆಗಳ ಪಯಣಕ್ಕೆ ವಿಧ್ಯುಕ್ತ ಚಾಲನೆ ನೀಡಲಾಯಿತು.

ಮೊದಲ ಹಂತದಲ್ಲಿ ಒಟ್ಟು ಒಂಭತ್ತು ಆನೆಗಳು ಗಜಪಯಣದ ಮೂಲಕ ಮೈಸೂರಿಗೆ ತೆರಳುತ್ತಿದ್ದು, ವಿಶ್ವ ವಿಖ್ಯಾತ 414ನೇ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲಿವೆ.

ದಸರಾದಲ್ಲಿ ಒಟ್ಟು 14 ಆನೆಗಳು ಭಾಗಿ

ಈ ಬಾರಿ ನಾಡ ಹಬ್ಬ ದಸರಾದಲ್ಲಿ ಒಟ್ಟು 14 ಆನೆಗಳು ಭಾಗವಹಿಸಲಿವೆ. ಮೊದಲ ಹಂತದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳು ಹಾಗೂ 2ನೇ ಹಂತದಲ್ಲಿ 5 ಆನೆಗಳು ಮೈಸೂರಿಗೆ ಆಗಮಿಸಲಿವೆ. ಅಲ್ಲದೆ ಹೆಚ್ಚುವರಿಯಾಗಿ 4 ಮೀಸಲು ಆನೆಗಳನ್ನು ಆಯ್ಕೆ ಮಾಡಲಾಗಿದೆ.
ಅಗತ್ಯವಿದ್ದರೆ ಮೀಸಲು ಆನೆಗಳನ್ನ ಬಳಸಿಕೊಳ್ಳಲು ಇಲಾಖೆ ತೀರ್ಮಾನಿಸಿದೆ.

ಆಗಸ್ಟ್‌ 23 ರಂದು ಈ 9 ಆನೆಗಳನ್ನು ಅರಮನೆಗೆ ಬರಮಾಡಿಕೊಳ್ಳಲಾಗುತ್ತಿದೆ. ಆಗಸ್ಟ್ 21 ರಿಂದ 23ರ ವರೆಗೆ ಅಂದ್ರೆ 2 ದಿನಗಳ ಕಾಲ 9 ಆನೆಗಳು ಮೈಸೂರಿನ ಅರಣ್ಯ ಭವನದಲ್ಲಿ ವಾಸ್ತವ್ಯ ಹೊಡಲಿವೆ.

ನಾಡಹಬ್ಬಕ್ಕೆ ಆಗಮಿಸುವ ಆನೆಗಳ ವಿವರ

ಅಭಿಮನ್ಯು (58), ಭೀಮ (24), ಗೋಪಿ (41), ಧನಂಜಯ (43), ಕಂಜನ್‌ (25), ರೋಹಿಣಿ (22), ಲಕ್ಷ್ಮೀ (53), ವರಲಕ್ಷ್ಮಿ (67), ಏಕಲವ್ಯ (38) ಆನೆಗಳು ಮೊದಲ ಗಜಪಯಣದಲ್ಲಿ ಮೈಸೂರಿಗೆ ಬರಲಿವೆ.

“ಈ ಬಾರಿಯೂ 58 ವರ್ಷ ವಯಸ್ಸಿನ ಅಭಿಮನ್ಯು ನಾಡದೇವಿ ಚಾಮುಂಡೇಶ್ವರಿ ವಿರಾಜಮಾನರಾದ ಚಿನ್ನದ ಅಂಬಾರಿ ಹೊರಲಿದ್ದಾನೆ. ಕಳೆದ ವರ್ಷ ನಿಶಾನೆ ಆನೆಯಾಗಿದ್ದ ಅರ್ಜುನ ಈ ಬಾರಿ ನಮ್ಮೊಂದಿಗಿಲ್ಲ ಎಂಬ ನೋವು ನಮಗಿದೆ” ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.

“ಕಳೆದ ತಿಂಗಳು ನಾನು ಅರ್ಜುನ ಕಾಡಾನೆಯೊಂದಿಗೆ ಹೋರಾಡಿ ಮಡಿದ ಹಾಸನ ಜಿಲ್ಲೆ, ಯಸಳೂರು ಬಳಿ ಅರ್ಜುನನ ಸ್ಮಾರಕಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದೇನೆ. ಅರ್ಜುನ ಆನೆ ಇದ್ದ ಆನೆ ಶಿಬಿರ ಬಳ್ಳೆಯಲ್ಲಿ ಕೂಡ ಒಂದು ಸ್ಮಾರಕ ನಿರ್ಮಿಸಲು ಸರ್ಕಾರ ತೀರ್ಮಾನಿಸಿದೆ” ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments