Homeಕರ್ನಾಟಕಆರು ತಿಂಗಳಿಗೊಮ್ಮೆ 5 ರೂ. ವರೆಗೂ ಹಾಲಿನ ದರ‌ ಹೆಚ್ಚಿಸಲು ಸಿಎಂಗೆ ಪ್ರಸ್ತಾವ

ಆರು ತಿಂಗಳಿಗೊಮ್ಮೆ 5 ರೂ. ವರೆಗೂ ಹಾಲಿನ ದರ‌ ಹೆಚ್ಚಿಸಲು ಸಿಎಂಗೆ ಪ್ರಸ್ತಾವ

ಪ್ರತಿ ಆರು ತಿಂಗಳಿಗೊಮ್ಮೆ ಗರಿಷ್ಠ ಶೇ. 5ರವರೆಗೂ ಹಾಲಿನ ದರ‌ ಹೆಚ್ಚಳಕ್ಕೆ ಅವಕಾಶ ನೀಡಬೇಕು ಎಂಬ ಹೊಸ ಪ್ರಸ್ತಾವನೆಯನ್ನ ಪಶುಸಂಗೋಪನಾ ಇಲಾಖೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ.

ಅಲ್ಲದೇ “ಹಾಲಿನ ದರ ಹೆಚ್ಚಳದ ನಿರ್ಧಾರವನ್ನು ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ಹಂತದಲ್ಲೇ ಮಾಡಲು ಅನುಮತಿ‌ ನೀಡಬೇಕು” ಎಂದು ಪ್ರಸ್ತಾವದಲ್ಲಿ ಕೋರಲಾಗಿದೆ.

ಪ್ರತಿ ಆರು ತಿಂಗಳಿಗೊಮ್ಮೆ ಆರ್ಥಿಕ‌ ಸ್ಥಿತಿಗತಿಗಳನ್ನು ಆಧರಿಸಿ ಹಾಲಿನ ದರ ಹೆಚ್ಚಳಕ್ಕೆ ಅವಕಾಶ ಕಲ್ಪಿಸಬೇಕು. ಕ್ಷೀರ ಭಾಗ್ಯ ಯೋಜನೆಗೆ ಕೆಎಂಎಫ್ ಪೂರೈಸುತ್ತಿರುವ ಹಾಲಿನಪುಡಿಯ ದರವನ್ನು ಪ್ರತಿ ಕೆ.ಜಿ.ಗೆ ₹400+ ಸರಕು ಮತ್ತು ಸೇವಾ ತೆರಿಗೆ ಎಂಬುದಾಗಿ ನಿಗದಿಪಡಿಸಬೇಕು. ಈಗ ಪ್ರತಿ ಕೆ.ಜಿ. ಹಾಲಿನ ಪುಡಿಗೆ ₹300+ ತೆರಿಗೆ ನೀಡಲಾಗುತ್ತಿದೆ. ಇದರಿಂದ ಕೆಎಂಎಫ್ ಗೆ ನಷ್ಟವಾಗುತ್ತಿದೆ” ಎಂದು ತಿಳಿಸಿದೆ.

ಈ ಬಗ್ಗೆ ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರು ಸುದ್ದಿಗಾರರ ಜೊತೆ ಶುಕ್ರವಾರ ಮಾತನಾಡಿ, “ಹಾಲಿನ ದರ ಏರಿಕೆ ಮಾಡುವಂತೆ ರೈತರು ಮತ್ತು ಹಾಲು ಒಕ್ಕೂಟಗಳಿಂದ ಒತ್ತಡವಿದೆ. ಆದರೆ, ಸದ್ಯಕ್ಕೆ ದರ ಹೆಚ್ಚಳ ಇಲ್ಲ” ಎಂದು ಹೇಳಿದರು.

ಕೆಎಂಎಫ್ ನಂದಿನ ಹಾಲಿನ ದರವನ್ನು ಸೆಪ್ಟೆಂಬರ್ 1 ರಂದು ಪ್ರತಿ ಲೀಟರ್ ಗೆ ₹3ರಷ್ಟು ಹೆಚ್ಚಳ ಮಾಡಲಾಗಿದೆ. ಆದರೆ, ಅಮೂಲ್ 2022ರ ಮಾರ್ಚ್ ನಿಂದ 2023ರ ಫೆಬ್ರುವರಿಯವರೆಗೆ ಹತ್ತು ತಿಂಗಳ ಅವಧಿಯಲ್ಲಿ ಲೀಟರ್ ಗೆ 12 ಹೆಚ್ಚಳ‌ ಮಾಡಿದೆ” ಎಂದರು.

“ಉತ್ಪಾದನಾ ವೆಚ್ಚ ಹೆಚ್ಚಳದಿಂದ ಆಗುತ್ತಿರುವ ಹೊರೆ ಕುರಿತು ಹಾಲು ಉತ್ಪಾದಕರ ಒಕ್ಕೂಟಗಳು ಸಭೆಯಲ್ಲಿ ಅಹವಾಲು ಸಲ್ಲಿಸಿವೆ. ನಂದಿನಿ ಹಾಲಿನ‌ ದರ ಪ್ರತಿ ಲೀಟರ್‌ಗೆ ₹47 ಇದೆ. ಇತರ ರಾಜ್ಯಗಳಲ್ಲಿ ಹಾಲಿನ ದರ ಇನ್ನೂ ಹೆಚ್ಚಾಗಿದೆ” ಎಂದುತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments