Homeಕರ್ನಾಟಕವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ಕನ್ನಡ ಕಡ್ಡಾಯ, ನೆಲದ ನಿಯಮ ಪಾಲಿಸಿ: ಸಿದ್ದರಾಮಯ್ಯ ಮನವಿ

ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ಕನ್ನಡ ಕಡ್ಡಾಯ, ನೆಲದ ನಿಯಮ ಪಾಲಿಸಿ: ಸಿದ್ದರಾಮಯ್ಯ ಮನವಿ

ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರುವರಿ 28 ಕಡೆಯ ದಿನವಾಗಿದ್ದು, ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಈ ನಿಯಮ ತರಲಾಗಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಮನವಿ ಮಾಡಿರುವ ಅವರು, “ಕನ್ನಡ ನೆಲದಲ್ಲಿ ಕನ್ನಡಕ್ಕೇ ಮೊದಲ ಪ್ರಾಶಸ್ತ್ಯ, ಅನ್ನ ಕೊಡುವ ಈ ನೆಲದ ನಿಯಮ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ ಕೂಡ” ಎಂದಿದ್ದಾರೆ.

“ಕರ್ನಾಟಕದಲ್ಲಿ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಇಲ್ಲಿಗೆ ಬಂದು ಬದುಕು ಕಟ್ಟಿಕೊಂಡವರನ್ನು ನಾವು “ಕನ್ನಡಿಗ”ರೇ ಎಂದು ಭಾವಿಸಿದ್ದೇವೆ. ನಾಮಫಲಕದಲ್ಲಿ ಶೇ.60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರವರಿ 28 ಕಡೆಯ ದಿನವಾಗಿದ್ದು, ನಿಯಮ ಪಾಲನೆ ಮಾಡಿ “ಹೆಮ್ಮೆಯ ಕನ್ನಡಿಗ”ರಾಗಿ” ಎಂದು ಕರೆ ನೀಡಿದ್ದಾರೆ.

ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ಈ ಹಿಂದೆ ಮನವಿ ಮಾಡಿದ್ದರು. ಈ ಕುರಿತಂತೆ ಸಭೆ ನಡೆಸಿದ್ದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ‘ಕನ್ನಡ ನಾಮಫಲಕ ಹಾಕದೇ ಇರುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಸರ್ಕಾರದ ಆದೇಶ ಹಾಗೂ ಪಾಲಿಕೆ ಸುತ್ತೋಲೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುವುದು’ ಎಂದು ಭರವಸೆ ನೀಡಿದ್ದರು.

ನಿಯಮ ಉಲ್ಲಂಘಟನೆಗೆ ಏನು ಕ್ರಮ?

‘ನಾಮಫಲಕಗಳಲ್ಲಿ ಕನ್ನಡ ಬಳಸದ ಅಂಗಡಿಗಳನ್ನು ಕಾನೂನಿನ ಪ್ರಕಾರ ಅಮಾನತಿನಲ್ಲಿಟ್ಟು, ಪರವಾನಗಿ ರದ್ದುಗೊಳಿಸಲಾಗುವುದು. ಈ ಬಗ್ಗೆ ಸರಿಯಾಗಿ ಕಾರ್ಯನಿರ್ವಹಿಸದ ಅಧಿಕಾರಿಯ ಮೇಲೂ ಶಿಸ್ತು ಕ್ರಮ ಜರುಗಿಸಲಾಗುವುದೆಂದು’ ಎಂದು ತುಷಾರ್ ಗಿರಿನಾಥ್ ತಿಳಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments