ಪೋಕ್ಸೋ ಪ್ರಕರಣವಾಗಿ ವಿಚಾರವಾಗಿ ಶನಿವಾರ (ಮಾ.15) ಕೋರ್ಟ್‌ಗೆ ಹಾಜರಾಗಬೇಕಿದ್ದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.
ಪೋಕ್ಸೋ ಕೇಸ್‌ನಲ್ಲಿ ಮಾರ್ಚ್ 15 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಯಡಿಯೂಪ್ಪರಿಗೆ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಈ ಸಮ್ಸನ್‌ನ ವಿರುದ್ದ ಎರಡು ದಿನಗಳ ಹಿಂದೆ ಯಡಿಯೂರಪ್ಪ ಹೈಕೋರ್ಟ್ ಮೊರೆ ಹೋಗಿದ್ದರು. ಶುಕ್ರವಾರ ಹೈಕೋರ್ಟ್ ಅರ್ಜಿ ವಿಚಾರಣೆ ನಡೆಸಿ ಕೆಳ ಹಂತದ ನ್ಯಾಯಾಲಯ ನೀಡಿದ್ದ ಸಮನ್ಸ್‌ಗೆ ತಡೆ ನೀಡಿದೆ.
ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರ ಏಕಸದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಿದೆ. ಬಿಎಸ್‌ವೈ ಮತ್ತು ಇತರ ಆರೋಪಿಗಳ ಪರ ಹಿರಿಯ ವಕೀಲ ಸಿ ವಿ ನಾಗೇಶ್ ವಾದ ಮಂಡಿಸಿದ್ದರು. ರಾಜ್ಯ ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ ಮತ್ತು ವಿಶೇಷ ಸರ್ಕಾರಿ ಅಭಿಯೋಜಕರಾದ ಅಶೋಕ್ ನಾಯ್ಕ್ ಹಾಜರಾಗಿದ್ದರು. ಹೈಕೋರ್ಟ್ ಸಮನ್ಸ್‌ಗೆ ತಡೆ ನೀಡಿದ್ದರಿಂದ ಯಡಿಯೂರಪ್ಪ ಕೆಳ ಹಂತದ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದು ತಪ್ಪಿದೆ.
2024ರ ಫೆಬ್ರವರಿ 2ರಂದು ಸಹಾಯ ಯಾಚಿಸಿ ಮನೆಗೆ ತೆರಳಿದ್ದ ವೇಳೆ 17 ವರ್ಷದ ತಮ್ಮ ಮಗಳಿಗೆ ಯಡಿಯೂರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಸಂತ್ರಸ್ತೆ ತಾಯಿ ಸದಾಶಿವನಗರ ಠಾಣೆಗೆ ಮಾರ್ಚ್ 14 ರಂದು ದೂರು ನೀಡಿದ್ದರು. ಈ ದೂರಿನನ್ವಯ ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು.
ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್‌ನ ಆದೇಶಗಳನ್ನು ಗಮನದಲ್ಲಿರಿಸಿಕೊಂಡು ಹೊಸದಾಗಿ ಕಾಗ್ನಿಜೆನ್ಸ್ ತೆಗೆದುಕೊಂಡು ಕಾನೂನು ಪ್ರಕಾರ ಆದೇಶ ಹೊರಡಿಸಬೇಕೆಂದು ಸೂಚಿಸಿತ್ತು. ನಂತರ ಸಿಐಡಿ ಸಲ್ಲಿಸಿರುವ ಆರೋಪಪಟ್ಟಿ ಆಧರಿಸಿ ವಿಶೇಷ ನ್ಯಾಯಾಲಯವು ಕಾಗ್ನಿಜೆನ್ಸ್ ತೆಗೆದುಕೊಂಡು ಯಡಿಯೂರಪ್ಪಗೆ ಸಮನ್ಸ್ ನೀಡಿತ್ತು ಹಾಗೂ ಮಾ.15ರಂದು ವಿಚಾರಣೆಗೆ ಹಾಜರಾಗಲು ಸೂಚಿಸಿತ್ತು. ಅದನ್ನು ಪ್ರಶ್ನಿಸಿ ಇದೀಗ ಬಿಎಸ್‌ವೈ ಹೈಕೋರ್ಟ್ ಮೊರೆ ಹೋಗಿದ್ದರು.