HomeSportಚಾಂಪಿಯನ್ಸ್‌ ಟ್ರೋಫಿ ಗೆದ್ದ ಭಾರತ ತಂಡಕ್ಕೆ 58 ಕೋಟಿ ರೂ. ಘೋಷಣೆ

ಚಾಂಪಿಯನ್ಸ್‌ ಟ್ರೋಫಿ ಗೆದ್ದ ಭಾರತ ತಂಡಕ್ಕೆ 58 ಕೋಟಿ ರೂ. ಘೋಷಣೆ

ಚಾಂಪಿಯನ್ಸ್‌ ಟ್ರೋಫಿ 2025ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಟೀಮ್ ಇಂಡಿಯಾಗೆ ಬಿಸಿಸಿಐ 58 ಕೋಟಿ ರೂ.ಗಳ ಬೃಹತ್ ನಗದು ಬಹುಮಾನ ಘೋಷಿಸಿದೆ.

ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು ಸೋಲಿಸಿ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಟ್ರೋಫಿ ಮುಡಿಗೇರಿಸಿಕೊಂಡಿತ್ತು. ಈ ಶ್ರೇಷ್ಠ ಸಾಧನೆಯನ್ನು ಗೌರವಿಸುವ ಸಲುವಾಗಿ ಇದೀಗ 58 ಕೋಟಿ ರೂ. ನಗದು ಬಹುಮಾನ ಘೋಷಿಸಲಾಗಿದೆ. ಈ ಮೊತ್ತವನ್ನು ಆಟಗಾರರು, ತರಬೇತಿ ಹಾಗೂ ಸಹಾಯಕ ಸಿಬ್ಬಂದಿಗಳು ಹಂಚಿಕೊಳ್ಳಲಿದ್ದಾರೆ.

ಈ ಹಿಂದೆ 2024 ರಲ್ಲಿ ಟಿ-20 ವಿಶ್ವಕಪ್ ಗೆದ್ದಿದ್ದ ಭಾರತ ತಂಡಕ್ಕೆ ಬಿಸಿಸಿಐ 125 ಕೋಟಿ ರೂ. ಬಹುಮಾನ ಮೊತ್ತ ನೀಡಿತ್ತು. ಈ ಬಹುಮಾನ ಮೊತ್ತವನ್ನು ಆಟಗಾರರು ಹಾಗೂ ಸಿಬ್ಬಂದಿಗಳಿಗೆ ಹಂಚಲಾಗಿದೆ. ಇಲ್ಲಿ ಟೀಮ್ ಇಂಡಿಯಾ ಆಟಗಾರರಿಗೆ ಹಾಗೂ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ತಲಾ 5 ಕೋಟಿ ರೂ. ನೀಡಲಾಗಿದೆ. ಇನ್ನುಳಿದ ಸಿಬ್ಬಂದಿಗಳಿಗೆ ತಲಾ 2.5 ಕೋಟಿ ರೂ. ನಿಗದಿ ಮಾಡಲಾಗಿತ್ತು. ಇದೇ ಮಾದರಿಯಲ್ಲಿ ಈ ಬಾರಿ 58 ಕೋಟಿ ರೂ. ಅನ್ನು ಟೀಮ್ ಇಂಡಿಯಾ ಸದಸ್ಯರಿಗೆ ಹಂಚಲಾಗುತ್ತದೆ.

ಚಾಂಪಿಯನ್ಸ್ ಟ್ರೋಫಿಯ ಭಾರತ ತಂಡದ ಸದಸ್ಯರು

ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್. ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments