Homeಕರ್ನಾಟಕಹಾಲು ಒಕ್ಕೂಟಗಳು ಇರುವುದು ಲಾಭಕ್ಕಾಗಿ ಅಲ್ಲ: ಸಿಎಂ ಸಿದ್ದರಾಮಯ್ಯ

ಹಾಲು ಒಕ್ಕೂಟಗಳು ಇರುವುದು ಲಾಭಕ್ಕಾಗಿ ಅಲ್ಲ: ಸಿಎಂ ಸಿದ್ದರಾಮಯ್ಯ

ಹಾಲು ಒಕ್ಕೂಟಗಳು ಇರುವುದು ರೈತರಿಗೆ ಅನುಕೂಲ ಮಾಡುವುದಕ್ಕೆ ಮಾತ್ರ, ಲಾಭ ಮಾಡುವುದಕ್ಕಲ್ಲ ಎಂದು ಸಿ.ಎಂ ಸಿದ್ದರಾಮಯ್ಯ ಖಡಕ್ ಆಗಿ ನುಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತದ ಅಧ್ಯಕ್ಷರು ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರ ಹಾಗೂ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಕಾವೇರಿಯಲ್ಲಿ ಸೋಮವಾರ ಸಭೆ ನಡೆಸಿದರು.

ಒಕ್ಕೂಟಗಳ ದರ ಏರಿಕೆಯ ಒತ್ತಡಕ್ಕೆ ಮಣಿಯದ ಸಿಎಂ ಅವರು, ಸಚಿವ ಸಂಪುಟಕ್ಕೆ ವಿಷಯ ರವಾನೆ ಮಾಡಿದ್ದಾರೆ. ಹೆಚ್ಚಳದ ಹಣ ಸಂಪೂರ್ಣವಾಗಿ ರೈತರಿಗೆ ವರ್ಗಾಯಿಸಲೇಬೇಕು ಎನ್ನುವ ನಿಲುವಿಗೆ ಅಂಟಿಕೊಂಡ ಸಿಎಂ, ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ಬಳಿಕ ದರ ಹೆಚ್ಚಳದ ಬಗ್ಗೆ ತೀರ್ಮಾನ ಮಾಡುವುದಾಗಿ ತಿಳಿಸಿದ್ದಾರೆ.

“ಹಾಲಿನ ದರ ಹೆಚ್ಚಳ ಕುರಿತು ಒಕ್ಕೂಟಗಳ ಅಭಿಪ್ರಾಯ ಸಂಗ್ರಹ ಮಾಡಲಾಯಿತು. ಹಾಲಿನದರ ಹೆಚ್ಚಳ ಮಾಡಿದರೆ ಮೊತ್ತವನ್ನು ಸಂಪೂರ್ಣವಾಗಿ ರೈತರಿಗೆ ವರ್ಗಾವಣೆಯಾಗಬೇಕು ಎಂಬುವುದು ಸರ್ಕಾರದ ದೃಢ ನಿಲುವು” ಮುಖ್ಯಮಂತ್ರಿ ಅವರು ಸ್ಪಷ್ಟಪಡಿಸಿದ್ದಾರೆ.

“ಹಾಲು ಒಕ್ಕೂಟಗಳು ಖರ್ಚು ವೆಚ್ಚ ಕಡಿಮೆ ಮಾಡಬೇಕು. ಪಾರದರ್ಶಕತೆಯನ್ನು ಪಾಲಿಸಬೇಕು. ಒಕ್ಕೂಟಗಳು ಅಗತ್ಯಕ್ಕಿಂತ ಹೆಚ್ಚು ಜನರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಬಾರದು. ಇದರಿಂದಾಗಿಯೇ ವೆಚ್ಚ ಹೆಚ್ಚಾಗುತ್ತಿದೆ. ಅನಗತ್ಯ ಆಡಳಿತಾತ್ಮಕ ವೆಚ್ಚಗಳಿಂದಾಗಿಯೇ ಕೆಲವು ಒಕ್ಕೂಟಗಳು ನಷ್ಟ ಅನುಭವಿಸುವಂತಾಗಿದೆ. ಆಡಳಿತಾತ್ಮಕ ವೆಚ್ಚ ಯಾವುದೇ ಕಾರಣಕ್ಕೂ ಶೇ.2ಕ್ಕಿಂತ ಹೆಚ್ಚಾಗಬಾರದು. ಮುಂದಿನ ಮೂರು ತಿಂಗಳಲ್ಲಿ ಆಡಳಿತಾತ್ಮಕ ವೆಚ್ಚವನ್ನು 2.5% ಕಡ್ಡಾಯವಾಗಿ ಇಳಿಸಬೇಕು. ಅಲ್ಲಿಂದ ಮುಂದಿನ ಮೂರು ತಿಂಗಳ ಒಳಗಾಗಿ ಎಲ್ಲಾ ಒಕ್ಕೂಟಗಳು ಆಡಳಿತಾತ್ಮಕ ವೆಚ್ಚವನ್ನು ಶೇ.2ಕ್ಕಿಂತ ಕೆಳಗೆ ಇಳಿಸಲೇಬೇಕು” ಎಂದು ಸಿಎಂ ಸೂಚಿಸಿದರು.

“ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹಾಲಿನ ದರ ಕಡಿಮೆಯಿದೆ. ಹಾಲಿನ ದರ ಹೆಚ್ಚಳ ಮಾಡಿದರೆ ಉತ್ಪಾದನೆ ಹೆಚ್ಚಾಗುತ್ತದೆ. ಇದರ ಲಾಭ ಪೂರ್ಣವಾಗಿ ರೈತರಿಗೆ ತಲುಪಬೇಕು ಎಂಬುವುದು ಸರ್ಕಾರದ ನಿಲುವು” ಎಂದು ಮುಖ್ಯಮಂತ್ರಿ ಹೇಳಿದರು.

ಬಳ್ಳಾರಿ ಹಾಲಿನ ಒಕ್ಕೂಟ 1.43 ಕೋಟಿಯಷ್ಟು ನಷ್ಟದಲ್ಲಿದ್ದು, ಫೆಬ್ರವರಿ ಅಂತ್ಯಕ್ಕೆ ಒಟ್ಟು 3 ಒಕ್ಕೂಟಗಳು ನಷ್ಟದಲ್ಲಿವೆ. ನಿರ್ವಹಣಾ ವೆಚ್ಚ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಲಿನ ದರ ಹೆಚ್ಚಳ ಮಾಡಿದರೆ ಸ್ವಲ್ಪ ಮೊತ್ತವನ್ನು ಒಕ್ಕೂಟಗಳಿಗೆ ವರ್ಗಾಯಿಸಲು ಒಕ್ಕೂಟಗಗಳು ಮನವಿ ಮಾಡಿಕೊಂಡವು. ಇದಕ್ಕೆ ಸಿಎಂ ಒಪ್ಪಿಗೆ ನೀಡಿಲ್ಲ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments