Homeದೇಶವಕ್ಫ್ ತಿದ್ದುಪಡಿ ಮಸೂದೆಗೆ ರಾಜ್ಯಸಭೆಯಲ್ಲಿಯೂ ಅನುಮೋದನೆ

ವಕ್ಫ್ ತಿದ್ದುಪಡಿ ಮಸೂದೆಗೆ ರಾಜ್ಯಸಭೆಯಲ್ಲಿಯೂ ಅನುಮೋದನೆ

ವಕ್ಫ್ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲಿಯೂ ಅನುಮೋದನೆ ಪಡೆದಿದೆ. ಈ ಮೂಲಕ ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಗುರುವಾರ ತಡರಾತ್ರಿ ವಕ್ಫ್ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಮತಕ್ಕೆ ಹಾಕಲಾಯಿತು. ಮಸೂದೆಯ ಪರವಾಗಿ 138 ಮತಗಳು ಮತ್ತು ವಿರುದ್ಧವಾಗಿ 95 ಮತಗಳು ಚಲಾವಣೆಯಾದವು. ಇನ್ನು ಮಸೂದೆ ಕಾನೂನಾಗಲು ಕೇವಲ ಒಂದು ಹೆಜ್ಜೆ ಬಾಕಿ ಇದೆ. ಮಸೂದೆಯನ್ನು ರಾಷ್ಟ್ರಪತಿಗಳಿಗೆ ಕಳುಹಿಸಲಾಗುತ್ತದೆ ಮತ್ತು ಅವರು ಸಹಿ ಹಾಕಿದ ತಕ್ಷಣ ಕಾನೂನಿನ ರೂಪವನ್ನು ಪಡೆಯುತ್ತದೆ.

ರಾಜ್ಯಸಭೆಗೂ ಮುನ್ನ, ಸರ್ಕಾರವು ಬುಧವಾರ ಲೋಕಸಭೆಯಲ್ಲಿ ಈ ಮಸೂದೆಯನ್ನು ಮಂಡಿಸಿತ್ತು. ಅಲ್ಲಿ, ಸುಮಾರು 12 ಗಂಟೆಗಳ ಚರ್ಚೆಯ ನಂತರ, ಸರ್ಕಾರವು ಅದನ್ನು ಅಂಗೀಕರಿಸುವಲ್ಲಿ ಯಶಸ್ವಿಯಾಗಿತ್ತು. ಲೋಕಸಭೆಯಲ್ಲಿ ಈ ಮಸೂದೆಯ ಪರವಾಗಿ 288 ಮತಗಳು ಮತ್ತು ವಿರುದ್ಧವಾಗಿ 232 ಮತಗಳು ಚಲಾವಣೆಯಾಗಿದ್ದವು.

ರಾಜ್ಯಸಭೆಯಲ್ಲಿ ಚರ್ಚೆಯ ಸಮಯದಲ್ಲಿ, ವಿರೋಧ ಪಕ್ಷಗಳು ಮಸೂದೆಯನ್ನು ಬಲವಾಗಿ ವಿರೋಧಿಸಿದವು. ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ನಾಯಕರು ಮಸೂದೆಯನ್ನು ಅಸಾಂವಿಧಾನಿಕ ಎಂದು ಕರೆದರು.

ಮುಸ್ಲಿಮರಿಗೆ ಕಿರುಕುಳ ನೀಡಲು ವಕ್ಫ್ ಮಸೂದೆ: ಖರ್ಗೆ

ವಕ್ಫ್ ಮಸೂದೆಯಲ್ಲಿ ಹಲವು ನ್ಯೂನತೆಗಳು ಮತ್ತು ದೋಷಗಳಿವೆ. ಮುಸ್ಲಿಂ ಸಮುದಾಕ್ಕೆ ಕಿರುಕುಳ ನೀಡಲು ಸರ್ಕಾರ ಈ ಮಸೂದೆಯನ್ನು ತಂದಿದೆ. ವಕ್ಫ್ ಮಂಡಳಿಗೆ ಸಂಬಂಧಿಸಿದಂತೆ ಈಗಾಗಲೇ ಕಾನೂನು ಇದ್ದು, ಅದನ್ನು ಬದಲಾಯಿಸಬಹುದು. ಹೊಸ ಮಸೂದೆಯ ಅಗತ್ಯವಿಲ್ಲ. ಮಸೂದೆಯನ್ನು ಹಿಂಪಡೆಯಬೇಕು” ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ದೇವೇಗೌಡ ಬೆಂಬಲ

ವಕ್ಫ್ ತಿದ್ದುಪಡಿ ಮಸೂದೆಯು ಮುಸ್ಲಿಮ್ ಸಮುದಾಯದಲ್ಲಿ ಅತ್ಯಂತ ತುಳಿತಕ್ಕೆ ಒಳಗಾಗಿರುವ ಬಡ, ದುರ್ಬಲ ಜನರಿಗೆ ವರದಾನವಾಗಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಪ್ರತಿಪಾದಿಸಿದರು.

ರಾಜ್ಯಸಭೆಯಲ್ಲಿ ಮಸೂದೆಯನ್ನು ಬೆಂಬಲಿಸಿ ಮಾತನಾಡಿದ ಅವರು, “ದೇಶದಲ್ಲಿರುವ ವಕ್ಫ್ ಬೋರ್ಡ್‌ ಗಳ ಆಸ್ತಿ ಸುಮಾರು ₹1.2 ಲಕ್ಷ ಕೋಟಿ ಬೆಲೆ ಬಾಳುತ್ತದೆ. ಇಂತಹ ಬೆಲೆ ಬಾಳುವ ಆಸ್ತಿಯನ್ನು ದಾನಿಗಳು ನೀಡಿದ್ದಾರೆ. ಈ ಆಸ್ತಿಯನ್ನು ರಕ್ಷಣೆ ಮಾಡಿ ಬಡ ಮುಸ್ಲಿಮರಿಗೆ ಅನುಕೂಲ ಆಗುವ ಕೆಲಸವನ್ನು ಈ ವಿಧೇಯಕ ಮಾಡುತ್ತಿದೆ. ತುಳಿತಕ್ಕೆ ಒಳಗಾದ ದುರ್ಬಲರ ಪರವಾಗಿ ನಾನು ವಕ್ಫ್ ಮಸೂದೆ ಮತ್ತು ಮೋದಿ ಅವರ ಸರ್ಕಾರವನ್ನು ಬೆಂಬಲಿಸುತ್ತೇನೆ” ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments