Homeಕರ್ನಾಟಕಬಿಜೆಪಿಯಿಂದ ಶಿವರಾಮ್ ಹೆಬ್ಬಾರ್ & ಎಸ್.ಟಿ. ಸೋಮಶೇಖರ್ ಉಚ್ಚಾಟನೆ

ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್ & ಎಸ್.ಟಿ. ಸೋಮಶೇಖರ್ ಉಚ್ಚಾಟನೆ

ಬಿಜೆಪಿ ನಾಯಕರಾದ ಶಿವರಾಮ್ ಹೆಬ್ಬಾರ್ ಮತ್ತು ಎಸ್.ಟಿ. ಸೋಮಶೇಖರ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಬಿಜೆಪಿ ಹೈಕಮಾಂಡ್ ಮೇಲೆ ಆರು ವರ್ಷಗಳ ಕಾಲ ಉಚ್ಚಾಟಿಸಿದೆ.

ಇಬ್ಬರೂ ಕಾಂಗ್ರೆಸ್ ಪಕ್ಷದೊಂದಿಗೆ ಹೆಚ್ಚು ಗುರುತಿಸಿಕೊಂಡಿದ್ದರು ಎಂಬ ಆರೋಪವಿದೆ. ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ನಿರ್ಧಾರ ಕೈಗೊಂಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಈ ಉಚ್ಚಾಟನೆಯನ್ನು ಸ್ವಾಗತಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರವನ್ನು ಶಿವರಾಮ್ ಹೆಬ್ಬಾರ್ ಪ್ರತಿನಿಧಿಸುತ್ತಿದ್ದಾರೆ. ಬೆಂಗಳೂರಿನ ಯಶವಂತಪುರ ಕ್ಷೇತ್ರದಿಂದ ಎಸ್.ಟಿ.ಸೋಮಶೇಖರ್ ಮೂರನೇ ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಈ ಮೊದಲು ಇಬ್ಬರೂ ಕಾಂಗ್ರೆಸ್​ನಲ್ಲಿ ಗುರುತಿಸಿಕೊಂಡಿದ್ದರು. ಈ ಹಿಂದೆ ಇಬ್ಬರೂ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿವರಾಮ್ ಹೆಬ್ಬಾರ್ ಅವರು ಕಾರ್ಮಿಕ ಸಚಿವರಾದರೆ, ಸೋಮಶೇಖರ್ ಅವರು ಸಹಕಾರ ಸಚಿವರಾಗಿದ್ದರು.

2023ರಲ್ಲಿ ಇಬ್ಬರೂ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದು ಬಂದರು. ಆದರೆ, ಈಗ ಶಿವರಾಮ್ ಹೆಬ್ಬಾರ್ ಹಾಗೂ ಸೋಮಶೇಖರ್ ಕಾಂಗ್ರೆಸ್ ಪಕ್ಷದ ಜೊತೆ ಹೆಚ್ಚು ಗುರುತಿಸಿಕೊಳ್ಳುತ್ತಿದ್ದರು. ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಕ್ಕಾಗಿ ಇಬ್ಬರೂ ಉಚ್ಚಾಟನೆ ಮಾಡಿ ಹೈ ಕಮಾಂಡ್ ಆದೇಶ ಹೊರಡಿಸಿದೆ.

ಬಿಜೆಪಿಯಿಂದ ಉಚ್ಚಾಟನೆಗೊಂಡ ಇತರೆ ನಾಯಕರು

  • ಶರತ್ ಬಚ್ಚೇಗೌಡ – ಹೊಸಕೋಟೆ
  • ಕವಿರಾಜ್ ಅರಸ್ – ವಿಜಯನಗರ
  • ಅಶೋಕ್ ಪೂಜಾರಿ – ಗೋಕಾಕ್
  • ಕೆಎಸ್ ಈಶ್ವರಪ್ಪ – ಶಿವಮೊಗ್ಗ
  • ಬಸನಗೌಡ ಪಾಟೀಲ್ ಯತ್ನಾಳ್ – ವಿಜಯಪುರ
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments