Homeಕರ್ನಾಟಕಬಿ.ಕೆ.ಹರಿಪ್ರಸಾದ್ ಜೊತೆಗೆ ಸಿಎಂ ಉಪಾಹಾರ ಭೇಟಿ, ಗರಿಗೆದರಿದ ರಾಜಕೀಯ ಚರ್ಚೆ

ಬಿ.ಕೆ.ಹರಿಪ್ರಸಾದ್ ಜೊತೆಗೆ ಸಿಎಂ ಉಪಾಹಾರ ಭೇಟಿ, ಗರಿಗೆದರಿದ ರಾಜಕೀಯ ಚರ್ಚೆ

ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ನಿವಾಸಕ್ಕೆ ಇಂದು (ಮೇ 29) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿಢೀರ್‌ ಭೇಟಿ ಸಮಾಲೋಚನೆ ನಡೆಸಿದರು.

ಸದಾಶಿವ ನಗರದಲ್ಲಿರು ಬಿ ಕೆ ಹರಿಪ್ರಸಾದ್‌ ನಿವಾಸಕ್ಕೆ ತೆರಳಿಮ ಉಪಹಾರ ಸೇವಿಸಿದರು. ವಸತಿ ಸಚಿವ ಜಮೀರ್ ಅಹಮದ್ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರು ಸಿಎಂ ಜೊತೆ ಹಾಜರಿದ್ದರು.

ಹರಿಪ್ರಸಾದ್‌ ನಿವಾಸದಲ್ಲಿ ಸಿಎಂ ಮತ್ತು ಕಾಂಗ್ರೆಸ್‌ ನಾಯಕರ ಬ್ರೇಕ್‌ ಫಾಸ್ಟ್‌ ಮೀಟಿಂಗ್‌ ಸಹಜವಾಗಿಯೇ ಕುತೂಹಲ ಸೃಷ್ಟಿಸಿದೆ. ಕರಾವಳಿ ಕೊಲೆಗೆಗಳ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ, “ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಇಂದು ಬೆಳಗಿನ ಉಪಾಹಾರ ಮಾಡಿದ್ದು, ಸಾಮಾನ್ಯ ವಿಷಯಗಳ ಜೊತೆಗೆ ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು, ದ್ವೇಷ ಯಾವುದೇ ಕಾರಣಕ್ಕೂ ಇರಬಾರದು ಎಂಬ ಬಗ್ಗೆ ಚರ್ಚಿಸಲಾಗಿದೆ” ಎಂದು ಸಿದ್ದರಾಮಯ್ಯ ತಿಳಿಸಿದರು.

“ಕೋಮು ಗಲಭೆಗಳನ್ನು ಉಂಟುಮಾಡುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕೂಡ ಕಾನೂನಿನ ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು.ಯಾರೂ ಕಾನೂನಿಗಿಂತ ದೊಡ್ಡವರಲ್ಲ” ಎಂದರು.‌

ಸಿಎಂ-ಹರಿಪ್ರಸಾದ್_

ಮಳೆ: ಡಿಸಿ ಸಿಇಒಗಳೊಂದಿಗೆ ಎರಡು ದಿನ ಸಭೆ

“ನಾಳೆ ಮತ್ತು ನಾಡಿದ್ದು ಎರಡು ದಿನಗಳ ಕಾಲ ನಡೆಯಲಿರುವ ಡಿ.ಸಿ.ಹಾಗೂ ಸಿಇಒ ಗಳ ಸಭೆಯಲ್ಲಿ ಮುಂಗಾರು ಮಳೆ ಪರಿಸ್ಥಿತಿಗಳ ಬಗ್ಗೆ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಚರ್ಚಿಸಲಾಗುವುದು” ಎಂದು ಇದೇ ವೇಳೆ ಮುಖ್ಯಮಂತ್ರಿಗಳು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments