Homeಕರ್ನಾಟಕಜುಲೈ 1ಕ್ಕೆ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಕೆ ವಿ ಪ್ರಭಾಕರ್

ಜುಲೈ 1ಕ್ಕೆ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಕೆ ವಿ ಪ್ರಭಾಕರ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತರ ವೃತ್ತಿ ಮತ್ತು ಬದುಕಿನ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸುತ್ತಿದ್ದಾರೆ. ಜುಲೈ 1 ಕ್ಕೆ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆಯನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್ ತಿಳಿಸಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಮಲೆಮಹದೇಶ್ವರ ಬೆಟ್ಟದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿ, “ಹಾಗೆಯೇ 5 ಲಕ್ಷ ರೂಪಾಯಿ ವರೆಗಿನ ಆರೋಗ್ಯ ಚಿಕಿತ್ಸಾ ವೆಚ್ಚವನ್ನು ಒದಗಿಸುವ ಪತ್ರಕರ್ತರ ಆರೋಗ್ಯ ಕಾರ್ಡ್ ವ್ಯವಸ್ಥೆಯನ್ನೂ ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದು, ಆರೋಗ್ಯ ಸಂಜೀವಿನಿ ಕಾರ್ಡ್ ಕೂಡ ಜುಲೈ 1 ರಂದು ನೀಡಲಾಗುವುದು” ಎಂದು ಭರವಸೆ ನೀಡಿದರು.

“ಜಿಲ್ಲಾ ಪತ್ರಕರ್ತರ ಭವನ ಮತ್ತು ತಾಲ್ಲೂಕು ಪತ್ರಕರ್ತರ ಭವನದ ನಿರ್ಮಾಣಕ್ಕೂ ಸರ್ಕಾರದ ಜೊತೆ ಮಾತನಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದರು.

“ಕಲಿಯುವ ವಯಸ್ಸಿನಲ್ಲಿ ವಿದ್ಯಾರ್ಥಿಗಳಲ್ಲಿ ಜ್ಞಾನದ ದಾಹ ಮತ್ತು ಕಲಿಕೆಯ ಹಂಬಲ ಜ್ವರದಂತೆ ಕಾಡಬೇಕು. ಪ್ರತಿಭೆ ಅಂದರೆ ಕೇವಲ ಪರೀಕ್ಷಾ ಫಲಿತಾಂಶ ಅಲ್ಲ. ಜ್ಞಾನ ಮತ್ತು ನಿರಂತರ ಸಾಧನೆ ಮತ್ತು ನೀವು ಪಟ್ಟ ಪರಿಶ್ರಮ ಮೂರೂ ಬೆರೆತ ಮಿಶ್ರಣ. ಇಂದು ಪ್ರತಿಭಾ ಪುರಸ್ಕಾರ ಸ್ವೀಕರಿಸುತ್ತಿರುವ ಎಲ್ಲಾ ಮಕ್ಕಳಿಗೂ ಎಲ್ಲಾ ಪೋಷಕರ ಪರವಾಗಿ ನಾನು ಅಭಿನಂದನೆ ಸಲ್ಲಿಸುತ್ತೇನೆ” ಎಂದು ಹೇಳಿದರು.

“ಸಮಾಜ ಎಂದರೆ ಶರೀರ ಇದ್ದ ಹಾಗೆ. ನಾವು ಈ ಶರೀರದೊಳಗೆ ಬದುಕುತ್ತಿದ್ದೇವೆ. ನಾವು ಇರುವ ಶರೀರವನ್ನು ಕಟ್ಟುಮಸ್ತಾಗಿ, ಆರೋಗ್ಯಕರವಾಗಿ, ಆನಂದಮಯವಾಗಿ ಇಟ್ಟುಕೊಳ್ಳುವುದೇ ನಮ್ಮ ಪ್ರತಿಭೆಗೆ, ನಮ್ಮ ಸಾಧನೆಗೆ ಸಿಗುವ ನಿಜವಾದ ಪುರಸ್ಕಾರ ಎಂದು ಭಾವಿಸುತ್ತೇನೆ. ಎರಡು, ಇಂದು ಸಮಾಜದಲ್ಲಿ ಭ್ರಷ್ಟಾಚಾರ ಇರುವುದಕ್ಕೆ ಮುಖ್ಯ ಕಾರಣ ಆರೋಗ್ಯ ಮತ್ತು ಶಿಕ್ಷಣ ಅತ್ಯಂತ ದುಬಾರಿ ಆಗಿರುವುದೇ ಕಾರಣ ಆಗಿದೆ. ಮಕ್ಕಳ ಓದಿನ ಖರ್ಚು, ಹಿರಿಯರ ಆಸ್ಪತ್ರೆ ಖರ್ಚು ನಮ್ಮ ನಿದ್ದೆಗೆಡಿಸುತ್ತದೆ. ಸಮಾಜದಲ್ಲಿ ಇದು ಬದಲಾಗಬೇಕು” ಎಂದು ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸತತ ಐದನೇ ವರ್ಷ ಈ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಿದೆ. ಇದಕ್ಕಾಗಿ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪದಾಧಿಕಾರಿಗಳನ್ನೂ ನಾನು ಅಭಿನಂದಿಸುತ್ತೇನೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments