ರಾಜ್ಯ ಸರ್ಕಾರ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಕೀಳುಮಟ್ಟದ ಪದ ಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್ಗೆ ಜುಲೈ 8ರ ವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.
ಎಫ್ಐಆರ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಇಂದು (ಜು.04) ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ತನಿಖೆಗೆ ಸಹಕರಿಸಲು ರವಿಕುಮಾರ್ಗೆ ಖಡಕ್ ಸೂಚನೆಯನ್ನು ಸಹ ನೀಡಿದೆ.
“ರಾಜಕಾರಣಿಗಳು ಬಳಸು ಭಾಷೆ ಕೆಳಮಟ್ಟಕ್ಕಿಳಿದಿದೆ ಎಂದು ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಪೀಠ” ಇದೇ ವೇಳೆ ಅಸಮಾಧಾನ ವ್ಯಕ್ತಪಡಿಸಿದೆ.
ಮತ್ತೊಂದೆಡೆ ರವಿಕುಮಾರ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮದ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ. ಪ್ರಕರಣ ಸಂಬಂಧ ರವಿಕುಮಾರ್ ಅವರು ಇಂದು (ಜುಲೈ 04) ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ರವಿಕುಮಾರ್ಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.