Homeಕರ್ನಾಟಕಅತ್ಯಾಚಾರ ಪ್ರಕರಣ | ಪ್ರಜ್ವಲ್ ರೇವಣ್ಣ ಅಪರಾಧಿ, ನ್ಯಾಯಾಲಯದಿಂದ ತೀರ್ಪು

ಅತ್ಯಾಚಾರ ಪ್ರಕರಣ | ಪ್ರಜ್ವಲ್ ರೇವಣ್ಣ ಅಪರಾಧಿ, ನ್ಯಾಯಾಲಯದಿಂದ ತೀರ್ಪು

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನು ದೋಷಿ ಎಂದು ಜನಪ್ರತಿನಿಧಿಗಳ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.

ಅಶ್ಲೀಲ ವಿಡಿಯೋ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ 26 ಸಾಕ್ಷಿಗಳ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಪರಾಧಿ ಎಂದು ಶುಕ್ರವಾರ ತೀರ್ಪು ನೀಡಿದೆ.

ನ್ಯಾಯಾಧೀಶ ಸಂತೋಷ ಗಜಾನನ ಭಟ್ ತೀರ್ಪು ಪ್ರಕಟಿಸಿದರು. ಶಿಕ್ಷೆಯ ಪ್ರಮಾಣ ನಾಳೆ ಪ್ರಕಟ ಆಗಲಿದೆ. ಈ ವೇಳೆ ಕಣ್ಣೀರಿಡುತ್ತಾ ಕೋರ್ಟ್ ಹಾಲ್ ನಿಂದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹೊರ ನಡೆದರು.

ನ್ಯಾಯಧೀಶರಾದ ಸಂತೋಷ್ ಗಜಾನನ ಭಟ್ ಅವರು ವಿಚಾರಣೆ ಪೂರ್ಣಗೊಳಿಸಿ ಇಂದಿಗೆ ತೀರ್ಪು ಕಾಯ್ದಿರಿಸಿದ್ದರು. ಅದರಂತೆ ಇಂದು ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದಾರೆ.

14 ತಿಂಗಳಿಂದ ಪ್ರಜ್ವಲ್​ ರೇವಣ್ಣ ಸೆರೆಮನೆವಾಸ!

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜಲ್ವ್ ರೇವಣ್ಣ ಕಳೆದ ಕಳೆದ 14 ತಿಂಗಳಿನಿಂದ ಸೆರೆಮನೆಯಲ್ಲಿ ಬಂಧಿಯಾಗಿದ್ದಾರೆ. ಪ್ರಜ್ವಲ್​ ರೇವಣ್ಣ ವಿರುದ್ಧ ಹಲವು ಸೆಕ್ಷನ್​​ಗಳ ಅಡಿಯಲ್ಲಿ ಕೇಸ್ ದಾಖಲಾಗಿತ್ತು.

ಐಪಿಸಿ ಸೆಕ್ಷನ್ 376 (2)(k) ಅಡಿ ಮಹಿಳೆಯ ಮೇಲೆ ಹಕ್ಕು ಚಲಾಯಿಸುವ ಸ್ಥಿತಿಯಲ್ಲಿದ್ದು ಅತ್ಯಾಚಾರ ಎಸಗಲಾಗಿದೆ. 376 (2) (n) ಅಡಿ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ. 354(A) ಲೈಂಗಿಕತೆ ಬೇಡಿಕೆ ಇಡುವುದು. 354 (B) ಮಹಿಳೆಯನ್ನು ವಿವಸ್ತ್ರಗೊಳಿಸುವುದು. 354 (c) ಮಹಿಳೆಯ ಅಶ್ಲೀಲ ದೃಶ್ಯ ಚಿತ್ರೀಕರಿಸುವುದು. 506 ಜೀವ ಬೆದರಿಕೆ, 201 ಸಾಕ್ಷ್ಯನಾಶದ ಅಡಿ ದೋಷಾರೋಪ ಹೊರಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments