Homeದೇಶ'ಒಬ್ಬ ವ್ಯಕ್ತಿ – ಒಂದು ಮತ' ತತ್ವ ರಕ್ಷಿಸಲು ನಿರ್ಣಾಯಕ ಹೋರಾಟ: ರಾಹುಲ್‌ ಗಾಂಧಿ

‘ಒಬ್ಬ ವ್ಯಕ್ತಿ – ಒಂದು ಮತ’ ತತ್ವ ರಕ್ಷಿಸಲು ನಿರ್ಣಾಯಕ ಹೋರಾಟ: ರಾಹುಲ್‌ ಗಾಂಧಿ

ಕಾಂಗ್ರೆಸ್‌ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಬಿಹಾರದಲ್ಲಿ ಆಗಸ್ಟ್ 17ರಿಂದ ಆರಂಭಗೊಳ್ಳುವ ‘ಮತದಾರ ಅಧಿಕಾರ ಯಾತ್ರೆ’ ಮೂಲಕ ದೇಶವ್ಯಾಪಿ “ಮತದಾನ ಕಳ್ಳತನ’ ವಿರುದ್ಧ ನೇರ ಹೋರಾಟಕ್ಕೆ ಇಳಿಯುತ್ತಿರುವುದಾಗಿ ಘೋಷಿಸಿದ್ದಾರೆ.

“ಇದು ಕೇವಲ ಚುನಾವಣೆಯ ವಿಷಯವಲ್ಲ. ಪ್ರಜಾಪ್ರಭುತ್ವ ಸಂವಿಧಾನ ಹಾಗೂ ‘ಒಬ್ಬ ವ್ಯಕ್ತಿ – ಒಂದು ಮತ’ ತತ್ವವನ್ನು ರಕ್ಷಿಸಲು ನಡೆಯುತ್ತಿರುವ ನಿರ್ಣಾಯಕ ಹೋರಾಟ” ಎಂದು ರಾಹುಲ್ ಗಾಂಧಿ ಗುರುವಾರ ಎಕ್ಸ್‌ ನಲ್ಲಿನ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

“ಇದು ಕೇವಲ ಚುನಾವಣೆಯ ವಿಷಯವಲ್ಲ. ಪ್ರಜಾಪ್ರಭುತ್ವ ಸಂವಿಧಾನ ಹಾಗೂ ‘ಒಬ್ಬ ವ್ಯಕ್ತಿ – ಒಂದು ಮತ’ ತತ್ವವನ್ನು ರಕ್ಷಿಸಲು ನಡೆಯುತ್ತಿರುವ ನಿರ್ಣಾಯಕ ಹೋರಾಟ” ಎಂದು ತಿಳಿಸಿದ್ದಾರೆ.

“ದೇಶಾದ್ಯಂತ ಮತದಾರರ ಪಟ್ಟಿಯಲ್ಲಿನ ಶುದ್ದೀಕರಣವೇ ಈ ಅಭಿಯಾನದ ಪ್ರಮುಖ ಗುರಿ. ಯುವಕರು, ಕಾರ್ಮಿಕರು, ರೈತರು ಸೇರಿದಂತೆ ದೇಶದ ಪ್ರತಿಯೊಬ್ಬ ನಾಗರೀಕನು ಈ ಹೋರಾಟದಲ್ಲಿ ಭಾಗವಹಿಸಬೇಕು. ಬಿಹಾರದ ಮಣ್ಣಿನಿಂದ ಪ್ರಾರಂಭವಾಗುವ ಈ ಯಾತ್ರೆ ಸೆಪ್ಟೆಂಬರ್ 1ರಂದು ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆಯುವ ಮಹಾ ಕ್ಯಾಲಿಯೊಂದಿಗೆ ಮುಕ್ತಾಯಗೊಳ್ಳಲಿದೆ. “ಈ ಬಾರಿ, ಮತ ಕಳ್ಳರ ಸೋಲು – ಜನರ ಮತ್ತು ಸಂವಿಧಾನದ ಗೆಲುವು” ಎಂದು ಗಾಂಧಿ ಹೇಳಿದ್ದಾರೆ.

“ದೇಶದ ಪ್ರತಿಯೊಂದು ಮತದಾರರ ಪಟ್ಟಿಯೂ ಸರಿಯಾಗುವವರೆಗೂ ನಾವು ಹೋರಾಟವನ್ನು ನಿಲ್ಲಿಸುವುದಿಲ್ಲ. ಯುವಕರು, ಕಾರ್ಮಿಕರು, ರೈತರು ಮತ್ತು ಪ್ರತಿಯೊಬ್ಬ ನಾಗರಿಕನೂ ಈ ಹೋರಾಟದಲ್ಲಿ ಕೈಜೋಡಿಸಬೇಕು” ಎಂದು ಮನವಿ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments