Homeಕರ್ನಾಟಕವಿಜಯಕುಮಾರಿಗೆ 10 ಲಕ್ಷ ರೂ. ಪ್ರೋತ್ಸಾಹಧನ: ಡಿಸಿಎಂ ಡಿ ಕೆ ಶಿವಕುಮಾರ್

ವಿಜಯಕುಮಾರಿಗೆ 10 ಲಕ್ಷ ರೂ. ಪ್ರೋತ್ಸಾಹಧನ: ಡಿಸಿಎಂ ಡಿ ಕೆ ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ 10/8/2025ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕು ಗೌಡೇನಹಳ್ಳಿ ಗ್ರಾಮದ ಅಂತರಾಷ್ಟ್ರೀಯ ಕ್ರೀಡಾಪಟು ವಿಜಯಕುಮಾರಿ ಜಿ.ಕೆ. ಅವರನ್ನು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ವಿಧಾನಸೌಧದ ಕೊಠಡಿ ಸಂಖ್ಯೆ 337ರಲ್ಲಿ ಸನ್ಮಾನಿಸಿ ಅಭಿನಂದಿಸಿದರು.

ಬಳಿಕ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಅಥ್ಲೆಟಿಕ್ಸ್ ನಲ್ಲಿ ನನಗೆ ಹೆಚ್ಚಿನ ಆಸಕ್ತಿ. ಹೀಗಾಗಿ ವಿಜಯಕುಮಾರಿ ಅವರ ಸಾಧನೆ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟವಾದ ವರದಿ ಗಮನಿಸಿ ನಮ್ಮ ಮಂಡ್ಯದ ಸಾಧಕಿಗೆ ಅಭಿನಂದಿಸಲಾಗುತ್ತಿದೆ. ಈಕೆಯ ಸಾಧನೆಗೆ ನನ್ನ ಸಂಪೂರ್ಣ ಸಹಕಾರ ನೆರವು ಇರಲಿದೆ ಎಂದರು.

ಮಂಡ್ಯದ ಹೆಣ್ಣುಮಗಳು ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ. ಆಕೆಯ ತರಬೇತಿಗೆ ಬೇಕಾದ ಸಕಲ ವ್ಯವಸ್ಥೆ ಮಾಡಲಾಗುವುದು. ಹಣಕಾಸಿನ ಸಮಸ್ಯೆ ಇದೆ ಎಂದು ತಿಳಿದು ಪಾಲಿಕೆ ವತಿಯಿಂದ 10 ಲಕ್ಷ ರೂ. ಪ್ರೋತ್ಸಾಧನ ನೀಡಲಾಗುವುದು. ಈ ವರ್ಷದ 5 ಲಕ್ಷ ರೂ. ಚೆಕ್ ಅನ್ನು ನೀಡಲಾಗಿದ್ದು ಮುಂದಿನ ವರ್ಷ 5 ಲಕ್ಷ ರೂ. ನೀಡುವುದಾಗಿ ತಿಳಿಸಿದರು.

ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದ ವಿಜಯಕುಮಾರಿ, ನನ್ನ ಸಾಧನೆಯನ್ನು ಗುರುತಿಸಿ ಸನ್ಮಾನಿಸಿದ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಶಾಸಕರಾದ ದಿನೇಶ್ ಗೂಳಿಗೌಡರವರಿಗೆ ಧನ್ಯವಾದಗಳು. ಇದರಿಂದ ಮತ್ತಷ್ಟು ಸಾಧನೆ ಮಾಡಲು ಸ್ಪೂರ್ತಿ ಸಿಕ್ಕಂತಾಗಿದೆ ಎಂದರು.

5 ಲಕ್ಷ ರೂ. ಚೆಕ್ ಹಸ್ತಾಂತರ

ವಿಜಯಕುಮಾರಿ ಅವರ ಸಾಧನೆಯನ್ನು ಮೆಚ್ಚಿದ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಪಾಲಿಕೆ ವತಿಯಿಂದ 10 ಲಕ್ಷ ರೂ. ನೀಡುವುದಾಗಿ ಘೋಷಿಸಿ 5 ಲಕ್ಷ ರೂ. ಚೆಕ್‌ ಅನ್ನು ವಿಜಯಕುಮಾರಿ ಅವರಿಗೆ ಹಸ್ತಾಂತರಿಸಿದರು. ಮುಂದಿನ ವರ್ಷ ಐದು ಲಕ್ಷ ರೂ.ನ ಚೆಕ್ ನೀಡುವುದಾಗಿ ಡಿ.ಕೆ.ಶಿವಕುಮಾರ್ ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments