Homeಸಿನಿಮಾವಿಚ್ಛೇದನ ಮುಂದಾದ ನಟ ಅಜಯ್ ರಾವ್ ಮತ್ತು ಪತ್ನಿ ಸ್ವಪ್ನ ರಾವ್

ವಿಚ್ಛೇದನ ಮುಂದಾದ ನಟ ಅಜಯ್ ರಾವ್ ಮತ್ತು ಪತ್ನಿ ಸ್ವಪ್ನ ರಾವ್

ಸ್ಯಾಂಡಲ್‌ವುಡ್ ನಟ ಅಜಯ್ ರಾವ್ ಮತ್ತು ಪತ್ನಿ ಸ್ವಪ್ನ ರಾವ್ ಮಧ್ಯೆ ದಾಂಪತ್ಯದಲ್ಲಿ ಬಿರುಕು ಮೂಡಿದೆ.

ಅಜಯ್ ರಾವ್ ಹಾಗೂ ಸ್ವಪ್ನಾ ರಾವ್ ಮಧ್ಯೆ ಹೊಂದಾಣಿಕೆ ಕೊರತೆಯೋ ಅಥವಾ ಬೇರೆ ಇನ್ನೇನು ಕಾರಣವೋ ಗೊತ್ತಿಲ್ಲ. ಇವರಿಬ್ಬರ ದಾಂಪತ್ಯಕ್ಕೆ ಅಂತ್ಯ ಹಾಡಲು ನಿರ್ಧರಿಸಿರುವ ಇವರೀಗ ಕೋರ್ಟ್ ಮೆಟ್ಟಿಲೇರಿದ್ದಾರೆ.

ಇಬ್ಬರೂ ಸಹ 2014ರಲ್ಲಿ ಹೊಸೇಪಟೆಯಲ್ಲಿ ಸರಳವಾಗಿ ವಿವಾಹವಾಗಿದ್ದರು. ಇಬ್ಬರಿಗೂ ಮಗಳು ಸಹ ಇದ್ದಾಳೆ. ಮದುವೆಯಾದ 11 ವರ್ಷದ ಬಳಿಕ ಇದೀಗ ಈ ದಂಪತಿ ಬೇರಾಗುತ್ತಿದ್ದಾರೆ.

ನಟ ಅಜಯ್ ರಾವ್ ವಿರುದ್ಧ ಅವರ ಪತ್ನಿ ಸಪ್ನಾ ಅವರು ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ಸಹ ದಾಖಲಿಸಿದ್ದಾರೆ ಎನ್ನಲಾಗಿದೆ. ಪತ್ನಿ ಜೊತೆಗೆ ಮಗಳು ಚರಿಷ್ಮಾ ಸಹ ಅಜಯ್ ರಾವ್ ವಿರುದ್ಧ ದೂರು ದಾಖಲು ಮಾಡಿದ್ದಾರೆ ಎನ್ನುವ ಮಾಹಿತಿ ಇದೆ. ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟು ಬಹಿರಂಗವಾಗಬೇಕಿದೆ.

2003 ರಲ್ಲಿ ಬಿಡುಗಡೆ ಆದ ‘ಎಕ್ಸ್​ಕ್ಯೂಸ್ ಮೀ’ ಸಿನಿಮಾ ಮೂಲಕ ಅಜಯ್ ರಾವ್ ನಾಯಕ ನಟನಾಗಿ ಚಿತ್ರರಂಗಕ್ಕೆ ಎಂಟ್ರಿ ನೀಡಿದರು. ಅದಕ್ಕೆ ಮುನ್ನ ಸುದೀಪ್ ನಟನೆಯ ‘ಕಿಚ್ಚ’ ಸಿನಿಮಾನಲ್ಲಿ ಸುದೀಪ್ ಗೆಳೆಯನ ಪಾತ್ರದಲ್ಲಿ ನಟಿಸಿದ್ದರು. ‘ತಾಜ್ ಮಹಲ್’, ‘ಪ್ರೇಮ್ ಕಹಾನಿ’, ‘ಕೃಷ್ಣನ್ ಲವ್ ಸ್ಟೋರಿ’, ‘ಕೃಷ್ಣನ್ ಮ್ಯಾರೇಜ್ ಸ್ಟೋರಿ’, ‘ಕೃಷ್ಣ-ಲೀಲಾ’ ಇನ್ನೂ ಹಲವು ಹಿಟ್ ಸಿನಿಮಾಗಳಲ್ಲಿ ಅಜಯ್ ನಟಿಸಿದ್ದಾರೆ. ಇದೇ ವರ್ಷ ಬಿಡುಗಡೆ ಆದ ‘ಯುದ್ಧಕಾಂಡ 2 ಸಿನಿಮಾನಲ್ಲಿ ನಟಿಸುವ ಜೊತೆಗೆ ನಿರ್ಮಾಣವನ್ನೂ ಸಹ ಅಜಯ್ ರಾವ್ ಮಾಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments