HomeSportಕಾಳಜಿ, ಗೌರವ ಹಾಗೂ ಜವಾಬ್ದಾರಿಯೊಂದಿಗೆ ಮುಂದುವರಿಯುತ್ತೇವೆ: ವಿರಾಟ್‌ ಕೊಹ್ಲಿ

ಕಾಳಜಿ, ಗೌರವ ಹಾಗೂ ಜವಾಬ್ದಾರಿಯೊಂದಿಗೆ ಮುಂದುವರಿಯುತ್ತೇವೆ: ವಿರಾಟ್‌ ಕೊಹ್ಲಿ

ಚಿನ್ನಸ್ವಾಮಿ ಕಾಲ್ತುಳಿತ ದುರಂತದ ಮೂರು ತಿಂಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರು ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ.

‘ಜೀವನದಲ್ಲಿ ಜೂನ್‌ 4ರ ದುರಂತಕ್ಕೆ ಯಾರೂ ನಿಜವಾಗಿಯೂ ಸಿದ್ಧರಿರುವುದಿಲ್ಲ. ನಮ್ಮ ಫ್ರಾಂಚೈಸಿಯ ಇತಿಹಾಸದಲ್ಲಿ ಅತ್ಯಂತ ಸಂತೋಷದಾಯಕ ಕ್ಷಣವಾಗಿರಬೇಕಾಗಿದ್ದ ದಿನ ದುರಂತವಾಗಿ ಮಾರ್ಪಟ್ಟಿತು. ನಾವು ಕಳೆದುಕೊಂಡವರ ಕುಟುಂಬಗಳಿಗಾಗಿ ಮತ್ತು ಗಾಯಗೊಂಡ ನಮ್ಮ ಅಭಿಮಾನಿಗಳ ಬಗ್ಗೆ ನಾನು ಯೋಚಿಸುತ್ತಿದ್ದೇನೆ ಮತ್ತು ಪ್ರಾರ್ಥಿಸುತ್ತಿದ್ದೇನೆ. ನಿಮಗೆ ಉಂಟಾದ ನಷ್ಟವು ಈಗ ನಮ್ಮ ಕಥೆಯ ಒಂದು ಭಾಗವಾಗಿದೆ. ಒಟ್ಟಾಗಿ, ನಾವು ಕಾಳಜಿ, ಗೌರವ ಮತ್ತು ಜವಾಬ್ದಾರಿಯೊಂದಿಗೆ ಮುಂದುವರಿಯುತ್ತೇವೆ” ಎಂದು ಕೊಹ್ಲಿ ಹೇಳಿದ್ದನ್ನು ಆರ್‌ಸಿಬಿ ತನ್ನ ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡಿದೆ.

ಜೂನ್ 3ರಂದು ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ ಬಾರಿಗೆ ಟ್ರೋಫಿ ಜಯಿಸಿತ್ತು. ಈ ವಿಜಯದ ಸಂಭ್ರಮಾಚರಣೆಯನ್ನು ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು. ಜೊತೆಗೆ ಅಭಿಮಾನಿಗಳಿಗೆ ಕ್ರೀಡಾಂಗಣಕ್ಕೆ ಉಚಿತ ಪ್ರವೇಶ ಕಲ್ಪಿಸಲಾಗಿತ್ತು. ಹೀಗಾಗಿ ಕ್ರೀಡಾಂಗಣದ ಬಳಿ ಜನಸಾಗರನೇ ನೆರೆದು ಕಾಲ್ತುಳಿತ ಸಂಭವಿಸಿತ್ತು. ಈ ದುರಂತದಲ್ಲಿ ಸುಮಾರು 11 ಮಂದಿ ಮೃತಪಟ್ಟು, 75 ಮಂದಿ ಗಾಯಗೊಂಡಿದ್ದರು. ಹೀಗಾಗಿ ಇದರ ಭದ್ರತೆಯ ಬಗ್ಗೆ ಪ್ರಶ್ನೆಗಳೆದ್ದಿದ್ದವು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments