Homeಕರ್ನಾಟಕಕೆ.ಸಿ.ವ್ಯಾಲಿ 2ನೇ ಹಂತದ ಯೋಜನೆಯಡಿ 30 ಕೆರೆಗಳಿಗೆ ನೀರು: ಸಿಎಂ ಸಿದ್ದರಾಮಯ್ಯ

ಕೆ.ಸಿ.ವ್ಯಾಲಿ 2ನೇ ಹಂತದ ಯೋಜನೆಯಡಿ 30 ಕೆರೆಗಳಿಗೆ ನೀರು: ಸಿಎಂ ಸಿದ್ದರಾಮಯ್ಯ

ಕೆ.ಸಿ.ವ್ಯಾಲಿ 2ನೇ ಹಂತದ ಯೋಜನೆಯಡಿ ಲಕ್ಷ್ಮೀ ಸಾಗರ ಪಂಪ್ ಹೌಸ್‌ನಿಂದ ಕೋಲಾರ ಜಿಲ್ಲೆಯ ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಕಾವೇರಿ ನಿವಾಸದಲ್ಲಿ ಲೋಕಾರ್ಪಣೆಗೊಳಿಸಿದರು.

ನಂತರ ಮಾತನಾಡಿದ ಅವರು, “ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳ ಅಂತರ್ಜಲ ಅಭಿವೃದ್ಧಿಗೆ ನಾವು ಹಿಂದಿನ ಸಲ ಅಧಿಕಾರದಲ್ಲಿದ್ದಾಗ ಕೈಗೊಂಡ ಯೋಜನೆಗಳು ಈ ಭಾಗದ ರೈತರ ಜೀವನ ಮಟ್ಟವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ. 250ಕ್ಕೂ ಹೆಚ್ಚು ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ಪ್ರತಿನಿತ್ಯ ಹರಿಸಲಾಗುತ್ತಿದೆ” ಎಂದರು.

“ಕೆ.ಸಿ.ವ್ಯಾಲಿ ಎರಡನೇ ಹಂತದ ಯೋಜನೆಯಡಿ ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸಲಾಗುವುದು. ಮೊದಲನೇ ಹಂತದಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೋಲಾರ ಚಿಕ್ಕಬಳ್ಳಾಪುರ ಕೆರೆಗಳನ್ನು ಯಶಸ್ವಿಯಾಗಿ ತುಂಬಿಸಲಾಗಿದೆ. ಈ ನೀರನ್ನು ಕುಡಿಯಲು ಬಳಸುವುದಿಲ್ಲ. ಕೆರೆ ತುಂಬಿಸಿದ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟ ಉತ್ತಮಗೊಂಡಿದೆ” ಎಂದು ಹೇಳಿದರು.

ಸಂಸ್ಕರಿಸಿದ ನೀರು ಬೆಳೆಗಳಿಗೆ ಯೋಗ್ಯವಲ್ಲ ಎನ್ನುವುದು ಅಪಪ್ರಚಾರ

“ಯೋಜನೆ ಬಗ್ಗೆ ಕೆಲವರು ಅಪಪ್ರಚಾರ ಮಾಡಿದರೂ, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂಬುವುದು ಈಗಾಗಲೇ ಸಾಬೀತಾಗಿದೆ. ಬೆಳೆಗಳಿಗೆ, ದನಕರುಗಳಿಗೆ ಯಾವುದೇ ತೊಂದರೆ ಇಲ್ಲ ಎಂದು ನಿರೂಪಿತವಾಗಿದೆ. ಕೆ.ಸಿ.ವ್ಯಾಲಿ ಎರಡನೇ ಹಂತ ಡಿಸೆಂಬರ್‌ ಅಂತ್ಯದ ಒಳಗೆ ಪೂರ್ಣಗೊಳ್ಳಲಿದ್ದು, ಇದರಿಂದ 272 ಕೆರೆಗಳನ್ನು ತುಂಬಿಸಲು ಸಾಧ್ಯವಿದೆ. ಕೋಲಾರ, ಚಿಕ್ಕಬಳ್ಳಾಪುರ ಭಾಗದಲ್ಲಿ ನದಿಗಳಲಿಲ್ಲದೆ ಇರುವುದರಿಂದ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದ್ದು, 446 ಕೋಟಿಗಳ ವೆಚ್ಚದಲ್ಲಿ ಇದನ್ನು ಕೈಗೊಳ್ಳಲಾಗಿದೆ” ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments