ವಿಧಾನ ಪರಿಷತ್ತಿಗೆ ನೂತನವಾಗಿ ನಾಮನಿರ್ದೇಶನಗೊಂಡ ಡಾ. ಆರತಿ ಕೃಷ್ಣ ರಮೇಶ್ ಬಾಬು, ಎಫ್. ಎಚ್. ಜಕ್ಕಪ್ಪನವರ್ ಹಾಗೂ ಶಿವಕುಮಾರ್.ಕೆ ಅವರು ವಿಧಾನ ಪರಿಷತ್‌ನ ಸದಸ್ಯರಾಗಿ ಗುರುವಾರ ಪಮಾಣ ವಚನ ಸ್ವೀಕರಿಸಿದರು.
ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಡೆದ ಕಾರ್ಯಕ್ರಮದಲ್ಲಿ ನೂತನವಾಗಿ ನಾಮನಿರ್ದೇಶನಗೊಂಡ ಸದಸ್ಯರುಗಳಿಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರಮಾಣ ವಚನ ಬೋಧಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕಾನೂನು ಸಚಿವ ಎಚ್.ಕೆ. ಪಾಟೀಲ್, ಪಶುಸಂಗೋಪನೆ ಸಚಿವ ವೆಂಕಟೇಶ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಭೋಸರಾಜು, ವಸತಿ ಸಚಿವ ಜಮೀರ್ ಅಹಮದ್ ಖಾನ್, ಸೇರಿದಂತೆ ಇತರ ಗಣ್ಯರು ಇದ್ದರು.