Homeಕರ್ನಾಟಕಸರ್ಕಾರಿ ಗೌರವದೊಂದಿಗೆ ಎಸ್.ಎಲ್. ಭೈರಪ್ಪ ಅವರಿಗೆ ಅಂತಿಮ ವಿದಾಯ

ಸರ್ಕಾರಿ ಗೌರವದೊಂದಿಗೆ ಎಸ್.ಎಲ್. ಭೈರಪ್ಪ ಅವರಿಗೆ ಅಂತಿಮ ವಿದಾಯ

ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಅವರ ಅಂತ್ಯಸಂಸ್ಕಾರ ಶುಕ್ರವಾರ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರ ಭೂಮಿಯಲ್ಲಿ ಮಧ್ಯಾಹ್ನ 12:30ಕ್ಕೆ ನಡೆಯಿತು.

ಪತ್ನಿ ಸರಸ್ವತಿ, ಕುಟುಂಬಸ್ಥರು, ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಸಚಿವ ಪ್ರಲ್ಹಾದ ಜೋಶಿ ಸೇರಿದಂತೆ ಹಲವು ಗಣ್ಯರು ಭೈತರಪ್ಪ ಅವರಿಗೆ ಕಣ್ಣೀರಿನ ವಿದಾಯ ಹೇಳಿದರು.

ಪುತ್ರರಾದ ರವಿಶಂಕರ್‌, ಉದಯ್‌ ಶಂಕರ್‌ ಅಂತಿಮ ವಿಧಿ ವಿಧಾನ ನೆರವೇರಿಸಿದರು, ಭೈರಪ್ಪನವರ ಇಚ್ಛೆಯಂತೆ ಅಂತ್ಯ ಸಂಸ್ಕಾರದಲ್ಲಿ ಲೇಖಕಿ ಸಹನಾ ವಿಜಯ್‌ಕುಮಾರ್ ಸಹ ಉಪಸ್ಥಿತರಿದ್ದರು. ಅಂತಿಮ ವಿಧಿವಿಧಾನಗಳ ಬಳಿಕ ಪುತ್ರರ ಜೊತೆಗೆ ಸಹನಾ ವಿಜಯ್‌ಕುಮಾರ್ ಭೈರಪ್ಪ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಎಸ್ ಎಲ್ ಭೈರಪ್ಪ ಪಂಚಭೂತಗಳಲ್ಲಿ ಲೀನವಾದರು.

ಸಕಲ ಸರ್ಕಾರಿ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ಭೈರಪ್ಪ ಅವರ ಅಂತ್ಯ ಸಂಸ್ಕಾರ ನಡೆಯಿತು. ಪೊಲೀಸ್ ಅಧಿಕಾರಿ ಶಿವಾನಂದ ನೇತೃತ್ವದ ಹತ್ತು ಜನರ ತಂಡವು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಸಲ್ಲಿಸಿತು.

ಅದಕ್ಕೂ ಮೊದಲು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಶಾಸಕ ಟಿ.ಎಸ್.ಶ್ರೀವತ್ಸ ಮುಂತಾದವರು ಅಂತಿಮ ನಮನ ಸಲ್ಲಿಸಿದರು. ರಾಷ್ಟ್ರಧ್ವಜವನ್ನು ಪ್ರಲ್ಹಾದ ಜೋಶಿ ಹಾಗೂ ಡಾ.ಎಚ್.ಸಿ.ಮಹದೇವಪ್ಪ ಅವರು ಭೈರಪ್ಪ ಮಕ್ಕಳಾದ ರವಿಶಂಕರ್ ಹಾಗೂ ಉದಯ್ ಶಂಕರ್ ಅವರಿಗೆ ಹಸ್ತಾಂತರಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments