ಕನ್ನಡ ರಂಗಭೂಮಿ, ಚಲನಚಿತ್ರ ಹಾಗೂ ಕಿರುತೆರೆಯ ಲೋಕದಲ್ಲಿ ವಿಶಿಷ್ಟ ಹೆಸರು ಪಡೆದ ಕಲಾವಿದ ಹುಬ್ಬಳ್ಳಿ ಮೂಲದ ಯಶವಂತ ಸರದೇಶಪಾಂಡೆ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಅವರಿಗೆ 63 ವರ್ಷ ವಯಸ್ಸಾಗಿತ್ತು. ಹಾಸ್ಯನಟ, ನಿರ್ದೇಶಕ, ನಾಟಕಕಾರ, ರಚನೆಕಾರ, ಸಂಭಾಷಣಾಕಾರರಾಗಿ ತಮ್ಮ ಕಲೆಯ ಮೂಲಕ ಲಕ್ಷಾಂತರ ಜನರ ಮನ ಗೆದ್ದಿದ್ದರು. ಅವರನ್ನು ಫೋರ್ಟಿಸ್ ಆಸ್ಪತ್ರೆ ದಾಖಲು ಮಾಡಿದರೂ ಅವರು ಅಷ್ಟೋತ್ತಿಗಾಗಲೇ ಕೊನೆಯುಸಿರೆಳೆದಿದ್ದರು.
ಹಾಸ್ಯನಟ, ನಿರ್ದೇಶಕ, ನಾಟಕಕಾರ, ರಚನೆಕಾರ, ಸಂಭಾಷಣಾಕಾರರಾಗಿ ತಮ್ಮ ಕಲೆಯ ಮೂಲಕ ಲಕ್ಷಾಂತರ ಜನರ ಮನ ಗೆದ್ದಿದ್ದಾರೆ. ಅವರ ‘ಆಲ್ ದಿ ಬೆಸ್ಟ್’ ನಾಟಕ ಅಭೂತಪೂರ್ವ ಯಶಸ್ಸು ಕಂಡಿತು. ಕಿರುತೆರೆ ಮತ್ತು ಚಲನಚಿತ್ರಗಳಲ್ಲಿಯೂ ಅವರು ಪಾತ್ರವಹಿಸುತ್ತಿದ್ದರು. ‘ರಾಮ ಶ್ಯಾಮ ಭಾಮಾ’ ನಲ್ಲಿ ನಟಿಸಿ ಖ್ಯಾತಿ ಗಳಿಸಿದ್ದರು.
ಇವರ ನಿಧನಕ್ಕೆ ಚಿತ್ರರಂಗ ಕಂಬನಿ ಮಿಡಿದಿದೆ. ಇವರ ಪತ್ನಿ ಕೂಡ ಖ್ಯಾತ ಕಿರುತೆರೆ ನಟಿಯಾಗಿದ್ದಾರೆ. ಕನ್ನಡದ ರಿಯಾಲಿಟಿ ಶೋ ಜೋಡಿ ನಂ.1ನಲ್ಲಿ ಭಾಗವಹಿಸಿದ್ದರು. ಇವರ ನಿಧನಕ್ಕೆ ಕುಟುಂಬ ವರ್ಗ, ಅವರ ಅಭಿಮಾನಿಗಳು, ನಾಡಿನ ಗಣ್ಯರು ಕಂಬನಿ ಮಿಡಿದಿದ್ದಾರೆ.