Homeಕರ್ನಾಟಕ4 ರೈಲು ನಿಲ್ದಾಣಗಳಿಗೆ ಸಂತರ ಹೆಸರು: ಕೇಂದ್ರ ಗೃಹ ಇಲಾಖೆಗೆ ಶಿಫಾರಸು

4 ರೈಲು ನಿಲ್ದಾಣಗಳಿಗೆ ಸಂತರ ಹೆಸರು: ಕೇಂದ್ರ ಗೃಹ ಇಲಾಖೆಗೆ ಶಿಫಾರಸು

ರಾಜ್ಯದ ವಿಜಯಪುರ, ಬೆಳಗಾವಿ, ಬೀದರ್ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿರುವ ಸೂರಗೊಂಡನಕೊಪ್ಪ ರೈಲು ನಿಲ್ದಾಣಗಳನ್ನು ಸ್ಥಳೀಯ ಸಾಂಸ್ಕೃತಿಕ ಮಹತ್ವಕ್ಕೆ ಪೂರಕವಾಗಿ ಬದಲಿಸಿ, ಹೊಸ ನಾಮಕರಣ ಮಾಡಬೇಕೆಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರು ಶಿಫಾರಸು ಮಾಡಿದ್ದು, ಈ ಸಂಬಂಧವಾಗಿ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ.

ಈ ಪತ್ರದಲ್ಲಿ ವಿಜಯಪುರ ರೈಲು ನಿಲ್ದಾಣಕ್ಕೆ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ರೈಲು ನಿಲ್ದಾಣ ಎಂದು, ಬೆಳಗಾವಿ ನಿಲ್ದಾಣಕ್ಕೆ ಶ್ರೀ ಬಸವ ಮಹಾಸ್ವಾಮೀಜಿ, ಬೀದರ್ ನಿಲ್ದಾಣಕ್ಕೆ ಚನ್ನಬಸವ ಪಟ್ಟದ್ದೇವರು ಮತ್ತು ಸೂರಗೊಂಡನಕೊಪ್ಪ ನಿಲ್ದಾಣಕ್ಕೆ ಭಾಯಗಡ ರೈಲು ನಿಲ್ದಾಣ ಎಂದು ಹೊಸ ಹೆಸರುಗಳನ್ನು ಇಡಬೇಕೆಂದು ಪ್ರಸ್ತಾಪಿಸಿದ್ದಾರೆ.

ಸರ್ಕಾರ ಈ ನಾಲ್ಕು ನಿಲ್ದಾಣ ಗಳಿಗೆ ಸಂತರ ಹೆಸರು ಇಡಲು ಶಿಫಾರಸು ಮಾಡಿದ್ದು, ಅದಕ್ಕೆ ಗೃಹ ಸಚಿವಾಲಯದ ಒಪ್ಪಿಗೆ ಬೇಕಾಗಿದೆ. ಹೀಗಾಗಿ ಮೂಲಸೌಕರ್ಯ ಇಲಾಖೆ ಮೂಲಕ ಪತ್ರ ರವಾನೆ ಮಾಡಲಾಗಿದೆ‌ ಎಂದು ಅವರು ವಿವರಿಸಿದರು.

ಈ ನಾಲ್ಕೂ ರೈಲು ನಿಲ್ದಾಣಗಳು ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ವ್ಯಾಪ್ತಿಯಲ್ಲಿವೆ. ಕರ್ನಾಟಕದ ಈ ಭಾಗಗಳಿಗೆ ತಾವು ಸೂಚಿಸಿರುವ ಸಂತರ ಕೊಡುಗೆ ಮೌಲಿಕವಾಗಿದೆ. ಈ ಶಿಫಾರಸನ್ನು ಅಂಗೀಕರಿಸಿ, ಮರುನಾಮಕರಣದ ಸಂಗತಿಯನ್ನು ಆದಷ್ಟು ಬೇಗ ರಾಜ್ಯಪತ್ರದಲ್ಲಿ ಪ್ರಕಟಿಸಬೇಕೆಂದು ಸಚಿವರು ಕೋರಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments