Homeಕರ್ನಾಟಕಬಾಗಲಕೋಟೆ | ಕಬ್ಬು ತುಂಬಿದ್ದ 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ

ಬಾಗಲಕೋಟೆ | ಕಬ್ಬು ತುಂಬಿದ್ದ 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ

ಪ್ರತಿ ಟನ್​​ ಕಬ್ಬಿಗೆ 3,500 ರೂಪಾಯಿ ಘೋಷಿಸುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ.

ಮುಧೋಳ ತಾಲೂಕಿನ ಸೈದಾಪುರ ಗ್ರಾಮದ ಸಮೀರವಾಡಿಯ ಗೋದಾವರಿ ಕಾರ್ಖಾನೆ ಬಳಿ ಸಾಲಾಗಿ ನಿಲ್ಲಿಸಿದ್ದ 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ ಹಚ್ಚಲಾಗಿದೆ. ಕೆಲವು ರೈತರು ಪ್ರತಿಭಟನಾಕಾರರಿಂದ ಬೆಂಕಿ ಹಚ್ಚಿಲ್ಲ, ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸುತ್ತಿದ್ದಾರೆ.

ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸುತ್ತಿದ್ದರು ಕಾರ್ಖಾನೆ ಮಾಲೀಕರು ಮಾತುಕತೆಗೆ ಬಾರದ ಕಾರಣ ಹಾಗೂ ತಮ್ಮ ಬೆಳೆಯನ್ನು ಗೋದಾಮಿಗೆ ಕೊಂಡೊಯ್ಯುತ್ತಿದ್ದ ರೈತರ ಟ್ರ್ಯಾಕ್ಟರ್ ಗಳಿಗೆ ಬೆಂಕಿ ಹಚ್ಚಲಾಗಿದೆ.

“ಕಾರ್ಖಾನೆಗೆ ಕಬ್ಬು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ನನ್ನು ರಸ್ತೆ ಮಧ್ಯೆಯೇ ತಡೆದ ಕಬ್ಬು ಬೆಳೆಗಾರರು, ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿ ಟ್ರ್ಯಾಕ್ಟರ್ ನ್ನು ಉರುಳಿಸಿದ್ದರು. ಬಳಿಕ ಸಮೀರವಾಡೆ ಗೋದಾವರಿ ಕಾರ್ಖಾನೆಗೆ ಮುತ್ತಿಗೆ ಹಾಕಲು ಬೈಕ್, ವಾಹನಗಳಲ್ಲಿ ತೆರಳಿದ ರೈತರು ಅಲ್ಲಿದ್ದ ಕಬ್ಬಿನ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಕಾರ್ಖಾನೆಯ ಆವರಣದಲ್ಲಿ ನಿಲ್ಲಿಸಿದ್ದ ಕಬ್ಬು ತುಂಬಿದ್ದ 20ಕ್ಕೂ ಹೆಚ್ಚು ಟ್ರ್ಯಾಕ್ಟರ್ ಗಳಿಗೆ ಬೆಂಕಿ ಹಚ್ಚಲಾಗಿದೆ.

ಧಗ ಧಗನೆ ಹೊತ್ತಿ ಉರಿದಿದೆ. ಘಟನಾ ಸ್ಥಳಕ್ಕೆ ಧಾವಿಸಿರುವ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ರೈತರು ಶಾಂತಿ ಕಾಪಾಡಬೇಕು. ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಕಾನೂನು ಕೈಗೆತ್ತಿಕೊಳ್ಳದಂತೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಮನವಿ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments