Homeಕರ್ನಾಟಕದರೋಡೆ ಪ್ರಕರಣ ಭೇದಿಸುವಲ್ಲಿ ಪೊಲೀಸರು ಯಶಸ್ವಿ

ದರೋಡೆ ಪ್ರಕರಣ ಭೇದಿಸುವಲ್ಲಿ ಪೊಲೀಸರು ಯಶಸ್ವಿ

ಬೆಂಗಳೂರಿನಲ್ಲಿ ಜನನಿಬಿಡ ಪ್ರದೇಶದಲ್ಲಿ ಹಾಡಹಗಲೇ ನಡೆದ 7.11 ಕೋಟಿ ರೂಪಾಯಿ ದರೋಡೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೆಲವು ಆರೋಪಿಗಳನ್ನೂ ಪೊಲೀಸರು ಬಂಧಿಸಿದ್ದಾರೆ. ದೋಚಲಾದ 7.11 ಕೋಟಿ ರೂ.ಗಳಲ್ಲಿ 6 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು ಸಿಸಿಬಿ, ದಕ್ಷಿಣ ವಿಭಾಗದ ಪೊಲೀಸರ ತಂಡ ಸೇರಿ ಆಂಧ್ರ ಮತ್ತು ತಮಿಳುನಾಡಿನಲ್ಲೂ ಕಾರ್ಯಾಚರಣೆ ನಡೆಸಿದ್ದು, ಐದಕ್ಕೂ ಹೆಚ್ಚು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಡಿಸಿಪಿ, ಇಬ್ಬರು ಜಂಟಿ ಪೊಲೀಸ್ ಆಯುಕ್ತರು ಹಾಗೂ 50ಕ್ಕೂ ಹೆಚ್ಚು ಪೊಲೀಸರು ಸೇರಿ ನಡೆಸಿದ ಶೋಧದ ಫಲವಾಗಿ 6 ಕೋಟಿ 70 ಲಕ್ಷ ರೂ.ಗಳಿಗೂ ಹೆಚ್ಚು ಹಣವನ್ನು ವಶಪಡಿಸಿಕೊಂಡಿದ್ದಾರೆ.

ತನಿಖಾ ತಂಡ ಹಾಗೂ ಸಿಬ್ಬಂದಿಗೆ ₹5 ಲಕ್ಷ ನಗದು ಬಹುಮಾನ ನೀಡುವುದಾಗಿ ನಗರ ಪೊಲೀಸ್ ಕಮಿಷವರ್ ಸೀಮಾಂತ್ ಕುಮಾರ್ ಸಿಂಗ್ ಘೋಷಿಸಿದ್ದಾರೆ. ಪ್ರಕರಣದಲ್ಲಿ ಇನ್ನೂ ಐವರು ಭಾಗಿಯಾಗಿದ್ದು, ಅವರು ನಾಪತ್ತೆಯಾಗಿದ್ದಾರೆ. 5 ರಾಜ್ಯದಲ್ಲಿ ಆರೋಪಿಗಳಿಗಾಗಿ ಹುಡುಕಾಟ ಮುಂದುವರಿದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments