ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್ ಈಗ ಜೈಲಿನಲ್ಲೂ ಯಡವಟ್ಟು ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ವರದಿಯಾಗಿದೆ.
ಜಾಮೀನು ರದ್ದಾಗಿ ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್ ಸಹ ಕೈದಿಗಳಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದಾರಂತೆ. ಸಹ ಕೈದಿಗೂ ಥಳಿಸಿದ್ದಾರೆ ಎಂದು ಆರೋಪ ಕೇಳಿಬಂದಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ನಿಯಮಗಳು ಈಗ ಕಠಿಣವಾಗಿದ್ದು, ಬದಲಾದ ನಿಯಮಗಳಿಂದ ನಟ ದರ್ಶನ್ ತತ್ತರಿಸಿಹೋಗಿದ್ದಾರೆ ಎನ್ನಲಾಗುತ್ತಿದೆ. ಜೈಲಿನಲ್ಲಿ ನಡೆಯುತ್ತಿದ್ದ ಅಕ್ರಮಗಳು ಕುರಿತು ಮಾಧ್ಯಮಗಳು ಸುದ್ದಿ ಮಾಡಿದ ಬಳಿಕ ಎಚ್ಚೆತ್ತುಕೊಂಡ ಅಧಿಕಾರಿಗಳು ಅಕ್ರಮಗಳಿಗೆ ಬ್ರೇಕ್ ಹಾಕಿ, ನಿಯಮಗಳನ್ನು ಕಠಿಣಗೊಳಿಸಿದ್ದಾರೆ.
ಐಪಿಎಸ್ ಅಧಿಕಾರಿ ಅಂಶು ಕುಮಾರ್ ಜೈಲಿನ ಮುಖ್ಯ ಸೂಪರಿಂಟೆಂಡೆಂಟ್ ಆಗಿ ನೇಮಕಗೊಂಡಿದ್ದು, ಜೈಲಿನಲ್ಲಿ ಅತಿ ಕಠಿಣ ರೂಲ್ಸ್ ಜಾರಿಗೆ ತಂದಿದ್ದಾರೆ. ಅದರಲ್ಲೂ ದರ್ಶನ್ ವಿಚಾರದಲ್ಲಿ ಜೈಲು ಸೇರಿದಾಗಿನಿಂದಲೂ ಕಠಿಣ ನಿಯಮ ಜಾರಿಯಲ್ಲಿದೆ. ದರ್ಶನ್ ಅವರು ಸಾಲಿನಲ್ಲಿ ನಿಂತು ತಾವೇ ಊಟ ತೆಗೆದುಕೊಂಡು ಬರಬೇಕಿದೆ. ಒಳಗಿನ ಶೌಚಾಲಯ ಕೂಡ ತಾವೇ ಕ್ಲೀನ್ ಮಾಡಬೇಕಿದೆ. ಈ ನಿಯಮಗಳಿಂದ ದರ್ಶನ್ ತತ್ತರಿಸಿ ಹೋಗಿದ್ದಾರೆ.
ಒಂದೇ ಸೆಲ್ನಲ್ಲಿ ದರ್ಶನ್ ಜೊತೆ ಅನುಕುಮಾರ್, ಜಗ್ಗ, ನಾಗರಾಜು, ಪ್ರದೋಶ್, ಲಕ್ಷ್ಮಣ್ ಇದ್ದಾರೆ. ಇವರೆಲ್ಲರೂ ರೇಣುಕಾಸ್ವಾಮಿ ಕೊಲೆ ಕೇಸ್ ಅಲ್ಲಿ ಜೈಲು ಸೇರಿದವರಾಗಿದ್ದಾರೆ. ನಾಗರಾಜು ಅವರನ್ನು ಹೊರತುಪಡಿಸಿ ಉಳಿದ ಆರೋಪಿಗಳಿಗೆ ದರ್ಶನ್ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದಾರೆ ಎನ್ನುವ ದೂರುಗಳು ವ್ಯಕ್ತವಾಗಿವೆ.
ದರ್ಶನ್ ಮತ್ತು ಇತರ ಆರೋಪಿಗಳ ಜತೆ ದೊಡ್ಡ ಜಗಳ ನಡೆದಿದ್ದು, ಜಗ್ಗ ಹಾಗೂ ದರ್ಶನ್ ಮಧ್ಯೆ ದೊಡ್ಡ ಜಗಳ ಆಗಿದೆಯಂತೆ. ಇಬ್ಬರ ಜಗಳ ಜೋರಾಗುತ್ತಿದ್ದಂತೆ ಜೈಲಧಿಕಾರಿಗಳು ಬಂದು ಜಗಳ ಬಿಡಿಸಿದ್ದಾರೆ.
ದರ್ಶನ್ ಚಿತ್ರಹಿಂಸೆ ತಡೆಯಲಾಗುತ್ತಿಲ್ಲ. ನಾನು ಇಲ್ಲೆ ಇದ್ದರೆ ಸಾಯೋದಾಗಿ ಅನುಕುಮಾರ್ ಹೇಳಿಕೊಂಡಿದ್ದಾರಂತೆ. ಟಾರ್ಚರ್ ತಡೆಯಲಾರದೆ ಅನುಕುಮಾರ್, ಜಗದೀಶ್ ಅವರು ತಮ್ಮನ್ನು ಚಿತ್ರದುರ್ಗ ಜೈಲಿಗೆ ಶಿಫ್ಟ್ ಮಾಡಲು ಮನವಿ ಮಾಡಿದ್ದಾರೆ.


