Homeಕರ್ನಾಟಕಕೇಂದ್ರ ಸರ್ಕಾರದ ಅನ್ಯಾಯವನ್ನೆಲ್ಲ ಸಮರ್ಥಿಸಿಕೊಳ್ಳುವುದು ಮಹಾ ಅಪರಾಧ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ಅನ್ಯಾಯವನ್ನೆಲ್ಲ ಸಮರ್ಥಿಸಿಕೊಳ್ಳುವುದು ಮಹಾ ಅಪರಾಧ: ಸಿಎಂ ಸಿದ್ದರಾಮಯ್ಯ

ಬಿಜೆಪಿಯವರು ರಾಜ್ಯಕ್ಕೆ ಎಷ್ಟೇ ಅನ್ಯಾಯವಾದರೂ ಕೇಂದ್ರ ಸರ್ಕಾರ ಮಾಡಿದ್ದನ್ನೆಲ್ಲಾ ಸಮರ್ಥಿಸಿಕೊಳ್ಳುವುದು ಮಹಾ ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಇಂದು ರೇಸ್ ಕೋರ್ಸ್ ರಸ್ತೆಯ KEB ಇಂಜಿನಿಯರ್ ಅಸೋಸಿಯೇಷನ್ ನಲ್ಲಿ ಕಾರ್ಯಕ್ರಮ ದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

MNREGA: ಚರ್ಚೆಗೆ ನಾವೂ ಸಿದ್ಧ

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಕಾಯ್ದೆ ಕುರಿತಂತೆ ಚರ್ಚೆಗೆ ಆಹ್ವಾನಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಚರ್ಚೆಗೆ ನಾವು ಸಿದ್ಧವಾಗಿದ್ದು, ದೊಡ್ಡ ಆಂದೋಲನವನ್ನೇ ಮಾಡುತ್ತೇವೆ ಎಂದರು.

ಹೆಚ್. ಡಿ.ಕುಮಾರಸ್ವಾಮಿಯವರು ಅವರ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಲು ಸಿಎಂ ನಿರಾಕರಿಸಿದರು. ಬಿಜೆಪಿ ಜೆಡಿಎಸ್ ಅವರು ಕೇವಲ ಸುಳ್ಳು ಹೇಳುತ್ತಾರೆ ಎಂದರು.

ಗಡಿ ಭಾಗದ ಶಾಲೆಗಳಲ್ಲಿ ಮಲಯಾಳಂ ಕಲಿಕೆ ಕಡ್ಡಾಯ: ಹೋರಾಟ ಮಾಡುತ್ತೇವೆ

ಕೇರಳದ ಗಡಿ ಭಾಗಗಳ ಶಾಲೆಗಳಲ್ಲಿ ಮಲಯಾಳಂನ್ನು ಮೊದಲ ಭಾಷೆಯಾಗಿ ಕಲಿಯುವುದನ್ನು ಕಡ್ಡಾಯಗೊಳಿಸಿರುವ ಬಗ್ಗೆ ಕೇರಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಹೋರಾಟವನ್ನೇ ಮಾಡುತ್ತೇವೆ ಎಂದರು.

ದ್ವೇಷ ಭಾಷಣ ಮಸೂದೆ: ರಾಜ್ಯಪಾಲರನ್ನು ಭೇಟಿ ಮಾಡಿ ವಿವರಣೆ ನೀಡಲಾಗುವುದು

ದ್ವೇಷ ಭಾಷಣಕ್ಕೆ ಸಂಬಂಧಿಸಿದ ಬಿಲ್ಲು ರಾಜ್ಯಪಾಲರ ಬಳಿಯೇ ಉಳಿದಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ರಾಜ್ಯಪಾಲರನ್ನು ಒಮ್ಮೆ ಭೇಟಿಯಾಗಿ ವಿವರಣೆ ನೀಡಲಾಗುವುದು ಎಂದರು.

ರಾಜ್ಯದಲ್ಲಿ ಬಾಂಗ್ಲಾ ವಲಸಿಗರು ಹೆಚ್ಚಾಗಿದ್ದಾರೆ ಎಂಬ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಹೆಸರುಗಳನ್ನು ನೀಡುವಂತೆ ಮುಖ್ಯಮಂತ್ರಿಗಳು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments