Homeಕರ್ನಾಟಕಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಈಶ್ವರ ಖಂಡ್ರೆ ಆಯ್ಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಈಶ್ವರ ಖಂಡ್ರೆ ಆಯ್ಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ನೂತನ ಅಧ್ಯಕ್ಷರಾಗಿ ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ಆಯ್ಕೆಯಾಗಿದ್ದಾರೆ.

ಬೆಂಗಳೂರಿನಲ್ಲಿಂದು ನಡೆದ ಸಭಾದ ಕಾರ್ಯಕಾರಿಣಿ ಸಭೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಸಭಾದ ಮಹಾ ಪ್ರಧಾನ ಕಾರ್ಯದರ್ಶಿಯಾಗಿರುವ ಈಶ್ವ ಖಂಡ್ರೆ ಅವರನ್ನು ಆಯ್ಕೆ ಮಾಡಲು ನಿರ್ಣಯ ಕೈಗೊಳ್ಳಲಾಯಿತು.

ಸಭಾದ ರಾಜ್ಯಾಧ್ಯಕ್ಷ ಶಂಕರ ಮಹಾದೇವ ಬಿದರಿ ಮಾತನಾಡಿ, “ಇಂದು ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಈಶ್ವರ ಖಂಡ್ರೆ ಅವರನ್ನು ಆಯ್ಕೆ ಮಾಡಲು ಎಲ್ಲ ಸದಸ್ಯರೂ ಒಮ್ಮತ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆ ನಡೆಯಿತು. ಕಳೆದ 13 ವರ್ಷಗಳಿಂದ ಮಹಾಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಈಶ್ವರ ಖಂಡ್ರೆ ಅವರು ಕಳೆದ ಒಂದು ವರ್ಷದಿಂದ ಹಿರಿಯ ಉಪಾಧ್ಯಕ್ಷರ ಪ್ರಭಾರ ಹೊಣೆಯನ್ನೂ ನಿಭಾಯಿಸಿದ್ದರು” ಎಂದರು.

ತಮ್ಮನ್ನು ಮಹಾಸಭಾದ ನೂತನ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ್ದಕ್ಕಾಗಿ ಕಾರ್ಯಕಾರಿ ಸಮಿತಿಗೆ ಧನ್ಯವಾದ ಅರ್ಪಿಸಿದ ಈಶ್ವರ ಖಂಡ್ರೆ, “ವೀರಶೈವ ಮತ್ತು ಲಿಂಗಾಯತ ಬೇರೆ ಬೇರೆಯಲ್ಲ. ಹೀಗಾಗಿ ಸಮಾಜದ ಎಲ್ಲ ಒಳ ಪಂಗಡಗಳನ್ನು ಒಗ್ಗೂಡಿಸುವುದು ಅತ್ಯಂತ ಮುಖ್ಯವಾಗಿದ್ದು, ತಾವು ಈ ನಿಟ್ಟಿನಲ್ಲಿ ಶ್ರಮಿಸುವೆ” ಎಂದು  ತಿಳಿಸಿದರು.

“ವೀರಶೈವ ಲಿಂಗಾಯತ ಸಮಾಜ ಮತ್ತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಈ ನಾಡಿನ ಅಭಿವೃದ್ಧಿಗೆ ನೀಡಿರುವ ಕೊಡುಗೆ ಅನುಪಮವಾದ್ದು ಎಂದು ತಿಳಿಸಿದ ಅವರು, ನಮ್ಮ ಸಮಾಜದಲ್ಲೂ ಶೇ.40ರಿಂದ 50ರಷ್ಟು ಬಡವರಿದ್ದು, ಶೇ.30ಕ್ಕಿಂತ ಹೆಚ್ಚು ಜನರು ತೀವ್ರ ಹಿಂದುಳಿದಿದ್ದಾರೆ. ಸಾಮಾಜಿಕ ನ್ಯಾಯ ಎಲ್ಲರಿಗೂ ದೊರಕಬೇಕು. ಹೀಗಾಗಿ ಎಲ್ಲರಿಗೂ ಸಮಾನ ನ್ಯಾಯ ದೊರಕಿಸಲು ಸಭಾ ವತಿಯಿಂದ ನೂತನ ಅಧ್ಯಕ್ಷನಾಗಿ ಶ್ರಮಿಸುವೆ” ಎಂದರು.

1000 ವಿದ್ಯಾರ್ಥಿನಿಯರ ಹಾಸ್ಟೆಲ್ ನಿರ್ಮಿಸಲು ಬದ್ಧ 

“ಬೆಂಗಳೂರು ನಗರದಲ್ಲಿ 1000 ವಿದ್ಯಾರ್ಥಿನಿಯರಿಗಾಗಿ ವಸತಿ ನಿಲಯ ನಿರ್ಮಾಣ ಮಾಡಲು ಮುಂದಿನ ಮಾರ್ಚ್ ತಿಂಗಳೊಳಗೆ ಶಂಕುಸ್ಥಾಪನೆ ನೆರವೇರಿಸಿ, ಒಂದೂವರೆ ವರ್ಷದಲ್ಲಿ ಪೂರ್ಣಗೊಳಿಸುವ ಸಂಕಲ್ಪ ಮಾಡಿದ್ದೇನೆ” ಎಂದು ಹೇಳಿದರು.

“ಈಗಾಗಲೇ ಹಲವು ಜಿಲ್ಲಾ ಕೇಂದ್ರಗಳಲ್ಲಿ ವೀರಶೈವ ಲಿಂಗಾಯತ ಭವನ ಇದ್ದು, ಭವನ ಇಲ್ಲದ ಜಿಲ್ಲೆಗಳಲ್ಲಿ ಭವನ ನಿರ್ಮಾಣ ಮಾಡಲೂ ಶ್ರಮಿಸುವುದಾಗಿ, ಈ ಭವನದಲ್ಲಿ ಸಮುದಾಯದ ಪ್ರತಿಭಾವಂತರಿಗೆ ಲೋಕಸೇವಾ ಆಯೋಗದ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ತರಬೇತಿ ನೀಡಲಾಗುವುದು” ಎಂದರು.

“ಪಂಚಾಚಾರ್ಯರ, ಜಗದ್ಗುರುಗಳ, ಮಠಾಧಿಪತಿಗಳ, ಹರ, ಚರ ಗುರು ಮೂರ್ತಿಗಳ, ವಿರಕ್ತರ ಮಾರ್ಗದರ್ಶನ ಹಾಗೂ ಆಶೀರ್ವಾದದೊಂದಿಗೆ ಕೆಲಸ ಮಾಡುವೆ. ಒಗ್ಗಟ್ಟಿನಲ್ಲಿ ಬಲವಿದೆ, ವಿಘಟನೆಯಲ್ಲಿ ದೌರ್ಬಲ್ಯವಿದೆ ಎಂದ ಅವರು, ಎಲ್ಲ ಜಾತಿ, ಜನಾಂಗದವರನ್ನೂ ಜೊತೆಯಲ್ಲಿ ತೆಗೆದುಕೊಂಡು ಶ್ರಮಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ” ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments