Homeದೇಶನಾಸಾ ಗಗನಯಾನಿ ಸುನಿತಾ ವಿಲಿಯಮ್ಸ್ ನಿವೃತ್ತಿ

ನಾಸಾ ಗಗನಯಾನಿ ಸುನಿತಾ ವಿಲಿಯಮ್ಸ್ ನಿವೃತ್ತಿ

ನಾಸಾ ಗಗನಯಾತ್ರಿಯಾಗಿ ಯಶಸ್ಸು ಕಂಡಿದ್ದ ಭಾರತೀಯ ಮೂಲದ ಗಗನಯಾನಿ ಸುನಿತಾ ವಿಲಿಯಮ್ಸ್ ನಾಸಾದಿಂದ ನಿವೃತ್ತಿಯಾಗಿದ್ದಾರೆ.

ಸುನಿತಾ ವಿಲಿಯಮ್ಸ್ ಅವರು ಡಿಸೆಂಬರ್‌ 27ರಂದು (2025) ನಿವೃತ್ತಿಯಾಗಿದ್ದಾರೆ ಎಂದು ನಾಸಾ ಮಂಗಳವಾರ ಘೋಷಣೆ ಮಾಡಿದೆ. ಅವರು 27 ವರ್ಷಗಳ ಕಾಲ ನಾಸಾದ ಗಗನಯಾನಿಯಾಗಿದ್ದರು.

ಭೂಮಿಯಿಂದ ಸುಮಾರು 400 ಕಿಲೋಮೀಟರ್ ಎತ್ತರದಲ್ಲಿರುವ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕೆಲಸದ ನಿಮಿತ್ತ ಹೋಗಿದ್ದ ನಾಸಾ ಗಗನಯಾತ್ರಿಗಳಾದ ಭಾರತೀಯ ಮೂಲದ ಸುನೀತಾ ವಿಲಿಯಮ್ಸ್​ ಮತ್ತು ಬುಚ್​ ವಿಲ್ಮೋರ್​, ಯಾರೂ ನಿರೀಕ್ಷೆ ಮಾಡದಂತೆ ಅಲ್ಲಿಯೇ ಸಿಲುಕಬೇಕಾಯಿತು. ಹೋಗಿದ್ದು ಕೇವಲ ಒಂದು ವಾರದ ಕೆಲಸಕ್ಕಾಗಿ ಆದರೆ 9 ತಿಂಗಳು ಅಲ್ಲಿಯೇ ಸಿಲುಕಿದ್ದರು.

ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಅವರ ಸೇವೆ ಅಸಾಧಾರಣವಾದುದು, ಅವರ ಯೋಜನೆಗಳು ಚಂದ್ರ ಮತ್ತು ಮಂಗಳ ಗ್ರಹದತ್ತ ತೆರಳುವ ನಮ್ಮ ಪ್ರಯತ್ನಗಳಿಗೆ ಭದ್ರ ಅಡಿಪಾಯ ಹಾಕಿದೆ. ಅವರ ಸಾಧನೆಗಳು ಮುಂದಿನ ಪೀಳಿಗೆಗೆ ಪ್ರೇರಣೆಯಾಗಿವೆ. ನಾಸಾ ಮತ್ತು ನಮ್ಮ ರಾಷ್ಟ್ರಕ್ಕೆ ಅವರು ನೀಡಿದ ಸೇವೆಗೆ ಧನ್ಯವಾದಗಳು ಎಂದು ನಾಸಾದ ಆಡಳಿತಾಧಿಕಾರಿ ಜಾರೆಡ್ ಐಸಾಕ್‌ಮ್ಯಾನ್ ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments