Homeಕರ್ನಾಟಕಸಾರ್ವಜನಿಕರ ದೂರವಾಣಿ ಕರೆಗಳಿಗೆ ಶಾಸಕರ ಅಧಿಕಾರಿ ವರ್ಗ ಸ್ಪಂದಿಸಬೇಕು: ಶಾಲಿನಿ ರಜನೀಶ್‌ ಸುತ್ತೋಲೆ

ಸಾರ್ವಜನಿಕರ ದೂರವಾಣಿ ಕರೆಗಳಿಗೆ ಶಾಸಕರ ಅಧಿಕಾರಿ ವರ್ಗ ಸ್ಪಂದಿಸಬೇಕು: ಶಾಲಿನಿ ರಜನೀಶ್‌ ಸುತ್ತೋಲೆ

ವಿಧಾನಸಭಾ ಮತ್ತು ವಿಧಾನಪರಿಷತ್ತಿನ ಸದಸ್ಯರುಗಳಿಗೆ ಸಂಬಂಧಿಸಿದ ಅಧಿಕಾರಿಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ ಅವರು ಎಚ್ಚರಿಕೆ ನೀಡಿ ಸುತ್ತೋಲೆ ಹೊರಡಿಸಿದ್ದಾರೆ.

ಸುತ್ತೋಲೆಯಲ್ಲಿ ಏನಿದೆ?

ಕರ್ನಾಟಕ ವಿಧಾನ ಪರಿಷತ್ತಿನ ಮಾನ್ಯ ಸಭಾಪತಿಯವರ ದಿನಾಂಕ:16.12.2025ರ ಪತ್ರದಲ್ಲಿ ತಿಳಿಸಿದಂತೆ, ರಾಜ್ಯದ ವಿವಿಧ ಭಾಗಗಳಿಂದ ಸಾರ್ವಜನಿಕರು ಅವರ ಸಮಸ್ಯೆಗಳನ್ನು ಮತ್ತು ಕುಂದು ಕೊರತೆಗಳನ್ನು ಪರಿಹರಿಸಿಕೊಳ್ಳುವ ಉದ್ದೇಶದಿಂದ ಮಾನ್ಯ ವಿಧಾನಸಭಾ ಹಾಗೂ ವಿಧಾನಪರಿಷತ್ತಿನ ಸದಸ್ಯರುಗಳಿಗೆ ವಿನಂತಿಸಿಕೊಂಡಾಗ ಅನಿವಾರ್ಯವಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಬೇಕಾಗಿರುತ್ತದೆ. ಅಂತಹ ಸಂದರ್ಭಗಳಲ್ಲಿ ಜನಪ್ರತಿನಿಧಿಗಳ ದೂರವಾಣಿ ಕರೆಗಳನ್ನು ಕೆಲವು ಅಧಿಕಾರಿಗಳು ಸ್ವೀಕರಿಸದೇ ಇರುವುದು ಹಾಗೂ ಒಂದು ವೇಳೆ ಆ ಸಮಯದಲ್ಲಿ ಬೇರೆ ತುರ್ತು ಕಾರ್ಯದಲ್ಲಿ ನಿರತರಾಗಿದ್ದಲ್ಲಿ ತದನಂತರ ಸೌಜನ್ಯಕ್ಕಾದರೂ ಮರು ಕರೆ ಮಾಡದೆ ಇರುವುದು ನನ್ನ ಗಮನಕ್ಕೆ ಬಂದಿದೆ.

ಈ ಎಲ್ಲ ಅಂಶಗಳ ಹಿನ್ನೆಲೆಯಲ್ಲಿ ಇನ್ನು ಮುಂದೆ ಎಲ್ಲಾ ಅಧಿಕಾರಿಗಳು ಜನಪ್ರತಿನಿಧಿಗಳಾದ ವಿಧಾನಸಭಾ ಹಾಗೂ ವಿಧಾನಪರಿಷತ್ತಿನ ಸದಸ್ಯರು ಮತ್ತು ಲೋಕಸಭಾ ಹಾಗೂ ಸಭಾ ರಾಜ್ಯ ಸಭಾ ಸದಸ್ಯರುಗಳ ದೂರವಾಣಿ ಸಂಖ್ಯೆಯನ್ನು ತಮ್ಮ ಬಳಿ ಕಡ್ಡಾಯವಾಗಿ ಇಟ್ಟುಕೊಳ್ಳತಕ್ಕದ್ದು ಹಾಗೂ ಅವರು ಕರೆ ಮಾಡಿದಾಗ ಕರೆಯನ್ನು ಸ್ವೀಕರಿಸುವುದು, ಒಂದು ವೇಳೆ ತಾವು ಅನ್ಯ ಕರ್ತವ್ಯದಲ್ಲಿ ನಿರತರಾಗಿದ್ದಲ್ಲಿ ಅವರುಗಳಿಗೆ ತಮ್ಮ ಕರ್ತವ್ಯ ಮುಗಿದ ನಂತರ ಮರು ಕರೆಯನ್ನು ಮಾಡುವುದರ ಮೂಲಕ ಸೂಕ್ತವಾಗಿ ಸಮಸ್ಯೆಗಳ ಕುರಿತು ಸ್ಪಂದಿಸುವಂತೆ ಈ ಮೂಲಕ ಸೂಚನೆಯನ್ನು ನೀಡಿದೆ. ಸದರಿ ಸೂಚನೆಯನ್ನು ತಮ್ಮ ಆಪ್ತ ಶಾಖೆ ಸಿಬ್ಬಂದಿಗಳಿಗೂ ನೀಡಲು ಕೋರಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments