Homeಕರ್ನಾಟಕಜಾತಿ ಗಣತಿ | ವೈಜ್ಞಾನಿಕ ಸಮೀಕ್ಷೆಗೆ ಹಲವು ಸಮುದಾಯ ಆಗ್ರಹ: ಡಿ ಕೆ ಶಿವಕುಮಾರ್

ಜಾತಿ ಗಣತಿ | ವೈಜ್ಞಾನಿಕ ಸಮೀಕ್ಷೆಗೆ ಹಲವು ಸಮುದಾಯ ಆಗ್ರಹ: ಡಿ ಕೆ ಶಿವಕುಮಾರ್

ಜಾತಿ ಗಣತಿ ಮಾಡಿ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬುದು ನಮ್ಮ ಕಾಂಗ್ರೆಸ್ ನಿಲುವು. ಆ ನಿಲುವಿಗೆ ನಾವು ಬದ್ಧರಾಗಿದ್ದೇವೆ. ಆದರೆ ಜಾತಿ ಗಣತಿ ಸಮೀಕ್ಷೆ ವೈಜ್ಞಾನಿಕವಾಗಿ ಆಗಬೇಕು ಎಂದು ವಿವಿಧ ಸಮುದಾಯ‌ ಆಗ್ರಹಿಸಿವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದ ಬಳಿ ಮಾಧ್ಯಮಗಳು ‘ಜಾತಿ ಗಣತಿ ವರದಿ ತಿರಸ್ಕಾರಕ್ಕೆ ನೀವು ಸಹಮತ ವ್ಯಕ್ತಪಡಿಸಿದ್ದೀರಾ’ ಎಂದು ಪ್ರಶ್ನಿಸಿದಾಗ ಅವರು ಈ ರೀತಿ ಪ್ರತಿಕ್ರಿಯಿಸಿದರು.

“ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಸಿಗಬೇಕು, ಎಂದು ಅನೇಕ ಸಮುದಾಯಗಳು ಆಗ್ರಹ ಮಾಡಿವೆ. ಪರಿಶಿಷ್ಟರು, ಪಂಚಮಸಾಲಿ, ವೀರಶೈವರು, ಒಕ್ಕಲಿಗರು ಸೇರಿದಂತೆ ಹಲವರು ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟದಲ್ಲಿ ಪಕ್ಷಬೇಧ ಮರೆತು ಹೋರಾಟ ಮಾಡಲಾಗುತ್ತಿದೆ. ಕೆಲ ಸಮುದಾಯ ಹಾಗೂ ಅದರ ನಾಯಕರು ಜಾತಿ ಗಣತಿ ಸಮೀಕ್ಷೆ ವೇಳೆ ನಮ್ಮನ್ನು ಸಂಪರ್ಕಿಸಿಲ್ಲ. ಹೀಗಾಗಿ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ಮಾಡಬೇಕು ಎಂದು ಕೇಳುತ್ತಿವೆ” ಎಂದು ತಿಳಿಸಿದರು.

ನೀವು ಕೂಡ ಪತ್ರಕ್ಕೆ ಸಹಿ ಹಾಕಿ ಮುಖ್ಯಮಂತ್ರಿಗಳಿಗೆ ರವಾನಿಸಿದ್ದೀರಾ ಎಂದು ಕೇಳಿದ ಪ್ರಶ್ನೆಗೆ, “ನಾನು ಸಹಿ ಮಾಡಬಾರದೇ? ಎಷ್ಟು ಜನ ಮಂತ್ರಿಗಳು ಈ ವಿಚಾರವಾಗಿ ಸಭೆ ಮಾಡಿಲ್ಲ? ಅದೇ ರೀತಿ ನಾನು ರಾಜಕೀಯ ಪಕ್ಕಕ್ಕಿಟ್ಟು ನಮ್ಮ ಸಮಾಜ, ಅದರ ಗೌರವ, ಅಭಿಮಾನ ಉಳಿಸಿಕೊಳ್ಳಬೇಕು ಎಂದು ಸಭೆಯಲ್ಲಿ ಭಾಗವಹಿಸಿದ್ದೇನೆ. ಇದು ಎಲ್ಲ ನಾಯಕರಲ್ಲೂ ಇರುತ್ತದೆ” ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments