ದಕ್ಷಿಣ ಭಾರತದ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾದ ಕಾನ್ಫಿಡೆಂಟ್ ಗ್ರೂಪ್‌ನ ಸಂಸ್ಥಾಪಕ ಮತ್ತು ಅಧ್ಯಕ್ಷ ಡಾ. ಸಿ ಜೆ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐಟಿ ದಾಳಿಗೆ ಹೆದರಿ ಅಶೋಕ್ ನಗರದ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಹಲವು ಬಾರಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಕಾನ್ಫಿಡೆಂಟ್ ಗ್ರೂಪ್‌ನ ಕಚೇರಿಗಳು ಮತ್ತು ಸಿ.ಜೆ ರಾಯ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದರು. ಈ ಹಿಂದೆಯೂ ಕಾನ್ಫಿಡೆಂಟ್ ಗ್ರೂಪ್‌ನ ಅಂಗಸಂಸ್ಥೆಯಾದ ‘ಕಾನ್ಫಿಡೆಂಟ್ ಪ್ರಾಜೆಕ್ಟ್ಸ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್’ ತೆರಿಗೆ ಪಾವತಿಯ ವಿಳಂಬಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟ ನಡೆಸಿದ್ದು, 2021ರಲ್ಲಿ ಹೈಕೋರ್ಟ್ ಆ ಪ್ರಕರಣದಲ್ಲಿ ಇಲಾಖೆಯ ಪ್ರಾಸಿಕ್ಯೂಷನ್ ಕ್ರಮವನ್ನು ಅಸಿಂಧುಗೊಳಿಸಿತ್ತು.
ಬೆಂಗಳೂರಿನಲ್ಲಿ ಹುಟ್ಟಿ ಬೆಳೆದ ರಾಯ್ ಮೂಲತಃ ಕೇರಳದವರು. ಸ್ವಿಟ್ಜರ್ಲೆಂಡ್‌ನ ಎಸ್‌ಬಿಎಸ್ ಬಿಸಿನೆಸ್ ಸ್ಕೂಲ್‌ನಲ್ಲಿ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಹ್ಯೂಲಿಟ್ ಪ್ಯಾಕಾರ್ಡ್ (HP) ನಂತಹ ಕೆಲವು ಕಂಪನಿಗಳಲ್ಲಿ ಕೆಲಸ ಮಾಡಿದ್ದ ರಾಯ್ ಬಳಿಕ ರಿಯಲ್ ಎಸ್ಟೇಟ್ ಉದ್ಯಮಕ್ಕೆ ಜಿಗಿದಿದ್ದು, 2006ರಲ್ಲಿ ಕಾನ್ಫಿಡೆಂಟ್ ಗ್ರೂಪ್ ಅನ್ನು ಸ್ಥಾಪಿಸಿದ್ದರು.
ಸಿ.ಜೆ ರಾಯ್ ಶೂಟ್ ಮಾಡಿಕೊಂಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರೋದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಸಂಬಂಧ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಘಟನೆ ಸಂದರ್ಭದಲ್ಲಿ ಐಟಿ ಅಧಿಕಾರಿಗಳ ಜೊತೆ ಯಾರ‍್ಯಾರು ಇದ್ರೂ ಅನ್ನೋದ್ರ ಬಗ್ಗೆಯೂ ತನಿಖೆ ಆಗ್ತಿದೆ ಅಂತ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಾಹಿತಿ ನೀಡಿದರು.
ಐಟಿ ವಿಚಾರಣೆಗೆ ಬೇಸತ್ತ ಉದ್ಯಮಿ ಸಿ.ಜೆ ರಾಯ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ಕುರಿತು ಮಾತನಾಡಿದ ಅವರು, ಕೇರಳ ಐಟಿ ಅಧಿಕಾರಿಗಳ ತಂಡ ಕಳೆದ ಮೂರು ದಿನಗಳಿಂದ ದಾಳಿ ನಡೆಸುತ್ತಿತ್ತು. ಈ ಸಂದರ್ಭದಲ್ಲಿ ಸಿ.ಜೆ ರಾಯ್ ಶೂಟ್ ಮಾಡಿಕೊಂಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರೋದು ಗೊತ್ತಾಗಿದೆ. ಮಧ್ಯಾಹ್ನ 3 ಗಂಟೆಯಿಂದ 3:15 ರ ಸುಮಾರಿನಲ್ಲಿ ಘಟನೆ ನಡೆದಿದೆ ಎಂದು ತಿಳಿಸಿದರು.


