ರಾಜ್ಯದಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಸಲಾಗಿದೆ ಎಂದು ಕೃಷಿ ಸಚಿವ ಎನ್.
ಚಲುವರಾಯಸ್ವಾಮಿ ತಿಳಿಸಿದರು.
ಇಂದು ವಿಧಾನ ಪರಿಷತ್ತಿನ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಕೆ.ವಿವೇಕಾನಂದ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, 2025 ರ ಮೇ, ಆಗಸ್ಟ್ ಮಾಹೆಯಲ್ಲಿ ಸ್ವಲ್ಪ ಕೊರತೆಯಾಗಿತ್ತು. ನಂತರ ರಸಗೊಬ್ಬರದ ಕೊರತೆ ಯಾಗಿಲ್ಲ ಎಂದರು.
2025-26ನೇ ಸಾಲಿನ ಹಿಂಗಾರು/ಬೇಸಿಗೆ ಹಂಗಾಮಿಗೆ 18.21 ಲಕ್ಷ ಮೆಟ್ರಿಕ್ ಟನ್ ವಿವಿಧ ಶ್ರೇಣಿಯ ರಸಗೊಬ್ಬರಗಳ ಬೇಡಿಕೆಯಿರುತ್ತದೆ. ಅಕ್ಟೋಬರ್ 2025 ರಿಂದ ಜನವರಿ 2026ರ ವರೆಗೆ 12.46 ಲಕ್ಷ ಮೆಟ್ರಿಕ್ ಟನ್ ಬೇಡಿಕೆಯಿದ್ದು, 27ನೇ ಜನವರಿ 2026 ರವರೆಗೆ 21.89 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರಗಳು ಸರಬರಾಜಾಗಿರುತ್ತದೆ. ಇದರಲ್ಲಿ 11.71 ಲಕ್ಷ ಮೆಟ್ರಿಕ್ ಟನ್ ಮಾರಾಟವಾಗಿ, 10.18 ಲಕ್ಷ ಮೆಟ್ರಿಕ್ ಟನ್ ದಾಸ್ತಾನಿರುತ್ತದೆ. ರಾಜ್ಯದ ಬೇಡಿಕೆಗನುಗುಣವಾಗಿ ಕೇಂದ್ರ ಸರ್ಕಾರದಿಂದ ರಸಗೊಬ್ಬರ ಸರಬರಾಜಾಗುತ್ತಿದೆ ಎಂದು ಮಾಹಿತಿ ನೀಡಿದರು.


