Homeಕರ್ನಾಟಕಬಿ ಕೆ ಹರಿಪ್ರಸಾದ್‌ಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲು ರಾಷ್ಟ್ರೀಯ ಅಹಿಂದ ಸಂಘಟನೆ ಆಗ್ರಹ

ಬಿ ಕೆ ಹರಿಪ್ರಸಾದ್‌ಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲು ರಾಷ್ಟ್ರೀಯ ಅಹಿಂದ ಸಂಘಟನೆ ಆಗ್ರಹ

ಶೋಷಿತರು, ಹಿಂದುಳಿದ ವರ್ಗಗಳು, ದಲಿತರು ಹಾಗೂ ಅಹಿಂದ ಸಮುದಾಯದ ಹಕ್ಕುಗಳಿಗಾಗಿ ನಿರಂತರವಾಗಿ ಧ್ವನಿ ಎತ್ತುತ್ತಿರುವ ಹಿರಿಯ ನಾಯಕ ಬಿ ಕೆ ಹರಿಪ್ರಸಾದ್ ಅವರನ್ನು ತಕ್ಷಣವೇ ರಾಜ್ಯ ಸಂಪುಟಕ್ಕೆ ಸೇರಿಸಿ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ರಾಷ್ಟ್ರೀಯ ಅಹಿಂದ ಸಂಘಟನೆ ಆಗ್ರಹಿಸಿದೆ.

ಪಕ್ಷ ನಿಷ್ಠೆ, ಮೌಲ್ಯಾಧಾರಿತ ರಾಜಕಾರಣ ಹಾಗೂ ಸ್ವಚ್ಛ ರಾಜಕೀಯಕ್ಕೆ ಹೆಸರಾದ ಬಿ.ಕೆ. ಹರಿಪ್ರಸಾದ್ ಅವರು ಕೇವಲ ರಾಜಕೀಯ ನಾಯಕನಷ್ಟೇ ಅಲ್ಲ, ಸಾಮಾಜಿಕ ನ್ಯಾಯದ ಹೋರಾಟಗಾರರಾಗಿದ್ದಾರೆ. ಜಾತಿ ಗಣತಿಯಂತಹ ಸಂವೇದನಾಶೀಲ ಹಾಗೂ ಐತಿಹಾಸಿಕ ಮಹತ್ವದ ವಿಷಯದಲ್ಲಿ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಮತ್ತು ಶೋಷಿತ ಸಮುದಾಯಗಳ ಪರ ಧೈರ್ಯವಾಗಿ ನಿಲುವು ತಳೆದಿರುವವರು. ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಸಂವಿಧಾನದ ಮೌಲ್ಯಗಳನ್ನು ರಾಜಕೀಯದ ಕೇಂದ್ರಬಿಂದುವಾಗಿಸಿಕೊಂಡು ಅವರು ನಡೆಸಿರುವ ಹೋರಾಟ ಅಹಿಂದ ಚಳವಳಿಗೆ ಸ್ಪಷ್ಟ ದಿಕ್ಕು ನೀಡಿದೆ ಎಂದು ರಾಜ್ಯ ಒಬಿಸಿ ಅಧ್ಯಕ್ಷ ಮೋಹನ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಹಿಂದುಳಿದ ವರ್ಗದ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರ ಆಡಳಿತಕ್ಕೆ ರಾಜಕೀಯವಾಗಿ ಮತ್ತು ನೈತಿಕವಾಗಿ ಬಲ ನೀಡುತ್ತಾ, ಪಕ್ಷದ ಒಳಗೂ ಹೊರಗೂ ಅಹಿಂದ ಧ್ವನಿಯನ್ನು ಸ್ಪಷ್ಟವಾಗಿ ಪ್ರತಿನಿಧಿಸಿದ ನಾಯಕರಲ್ಲಿ ಬಿ.ಕೆ. ಹರಿಪ್ರಸಾದ್ ಪ್ರಮುಖರಾಗಿದ್ದಾರೆ. ಇಂತಹ ನಾಯಕನನ್ನು ಸಂಪುಟಕ್ಕೆ ಸೇರಿಸುವುದು ಸರ್ಕಾರದ ವಿಶ್ವಾಸಾರ್ಹತೆಯನ್ನು ಇನ್ನಷ್ಟು ಹೆಚ್ಚಿಸುವುದರ ಜೊತೆಗೆ, ಸ್ವಚ್ಛ ಆಡಳಿತಕ್ಕೆ ಒಳ್ಳೆಯ ಹೆಸರು ತರಲಿದೆ ಎಂದಿದ್ದಾರೆ.

ಬಿ.ಕೆ. ಹರಿಪ್ರಸಾದ್ ಅವರು ಸಂಪುಟ ಸೇರಿದಲ್ಲಿ ಅದು ಸರ್ಕಾರಕ್ಕೆ ಮಾತ್ರವಲ್ಲ, ಅಹಿಂದ ಸಂಘಟನೆಗಳಿಗೊ ಕೂಡ ಹೊಸ ಶಕ್ತಿ ತುಂಬಿದಂತೆ ಆಗಲಿದೆ. ಅಹಿಂದ ಸಮುದಾಯದ ಆಶಯಗಳು ಮತ್ತು ಹೋರಾಟಗಳು ಆಡಳಿತದ ಉನ್ನತ ಮಟ್ಟದಲ್ಲಿ ಪ್ರತಿಫಲಿಸುವ ವಿಶ್ವಾಸ ಜನರಲ್ಲಿ ಮೂಡಲಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ವಿಳಂಬವಿಲ್ಲದೆ ಬಿ.ಕೆ. ಹರಿಪ್ರಸಾದ್ ಅವರನ್ನು ಸಂಪುಟಕ್ಕೆ ಸೇರಿಸಿ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ರಾಷ್ಟ್ರೀಯ ಅಹಿಂದ ಸಂಘಟನೆಯ
ಅಧ್ಯಕ್ಷರಾದ ಮುತ್ತಣ್ಣ ಶಿವಳ್ಳಿ ಮತ್ತು ಕರ್ನಾಟಕ ಒಬಿಸಿ ಅಧ್ಯಕ್ಷರಾದ ಮೋಹನ್ ಅವರು ಆಗ್ರಹಿಸಿದ್ದಾರೆ. ಈ ಬೇಡಿಕೆಗೆ ಬೆಂಬಲವಾಗಿ ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಹಿಂದ ಸಮಾಜದ ವತಿಯಿಂದ ಸಭೆಗಳು, ಚರ್ಚೆಗಳು ಹಾಗೂ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು” ಎಂದು  ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments