Homeಕರ್ನಾಟಕನಾಯಕತ್ವ ಬದಲಾವಣೆ | ವರಿಷ್ಠರ ತೀರ್ಮಾನವೇ ಅಂತಿಮ, ವರಿಷ್ಠರು ಬಯಸಿದರೆ ಮಾತ್ರ ದೆಹಲಿಗೆ ತೆರಳುವೆ: ಸಿದ್ದರಾಮಯ್ಯ

ನಾಯಕತ್ವ ಬದಲಾವಣೆ | ವರಿಷ್ಠರ ತೀರ್ಮಾನವೇ ಅಂತಿಮ, ವರಿಷ್ಠರು ಬಯಸಿದರೆ ಮಾತ್ರ ದೆಹಲಿಗೆ ತೆರಳುವೆ: ಸಿದ್ದರಾಮಯ್ಯ

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ. ವರಿಷ್ಠರು ಬಯಸಿದರೆ ಮಾತ್ರ ದೆಹಲಿಗೆ ತೆರಳುವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಇಂದು ಇಂದು ವಿಧಾನಸೌಧದ ಪಶ್ಚಿಮ ದಿಕ್ಕಿನಲ್ಲಿರುವ ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯ ರವರ ಜನ್ಮ ದಿನಾಚರಣೆ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಜೆಟ್ ಸಿದ್ಧತ ಸಭೆಯಲ್ಲಿ ಡಿಸಿಎಂ ಹಾಜರಾಗುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, “ಅಸ್ಸಾಂ ರಾಜ್ಯದಲ್ಲಿ ಸಭೆಯೊಂದಕ್ಕೆ ಹಾಜರಾಗಬೇಕಾದ ಕಾರಣ ಬಜೆಟ್ ಸಿದ್ಧತೆ ಸಭೆಯಲ್ಲಿ ಭಾಗವಹಿಸಲಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆಶಿವಕುಮಾರ್ ತಿಳಿಸಿದ್ದಾರೆ” ಎಂದು ಹೇಳಿದರು.

ಪ್ರತಾಪ್ ಸಿಂಹರಿಗೆ ಬಿಜೆಪಿಯೇ ಟಿಕೆಟ್ ನೀಡಲಿಲ್ಲ

ಶಾಸಕ ಯತೀಂದ್ರ ಸಿದ್ದರಾಮಯ್ಯನವರು ಅಧಿಕಾರದಲ್ಲಿ ಹಸ್ತಕ್ಷೇಪ ಮಾಡುತ್ತಿರುವ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಟೀಕೆ ಮಾಡಿರುವ ಬಗ್ಗೆ ಪ್ರತಿಕ್ರಯಿಸಿ, ಬಿಜೆಪಿ ಪಕ್ಷದವರೇ ತಮ್ಮ ಪಕ್ಷದ ಪ್ರತಾಪ್ ಸಿಂಹರಿಗೆ ಟಿಕೇಟ್ ನೀಡಲಿಲ್ಲ ಎಂದರು.

ಮತಪರಿಷ್ಕರಣೆಯ ಎಸ್‌ಐಆರ್‌ ಆರ್ ಕಾರ್ಯಕ್ಕೆ ಅಡ್ಡಿಪಡಿಸುವುದನ್ನು ಸಹಿಸುವುದಿಲ್ಲವೆಂದು ಸುಪ್ರೀಂ ಕೋರ್ಟ್ ಯಾವ ಸಂದರ್ಭಕ್ಕೆ ಹೀಗೆ ಹೇಳಿದ್ದಾರೆ ಎಂಬುದು ಗೊತ್ತಿಲ್ಲ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ದಿ.ಕೆಂಗಲ್ ಹನುಮಂತಯ್ಯನವರು, ರಾಜ್ಯ ಕಂಡ ಪ್ರಾಮಾಣಿಕ ಹಾಗೂ ಧೀಮಂತ ರಾಜಕಾರಣಿ. ಸುಂದರವಾದ ಭವ್ಯವಾದ ವಿಧಾನಸೌಧ ನಿರ್ಮಿಸಿದ ಕೀರ್ತಿ ಅವರಿ ಗೆ ಸಲ್ಲುತ್ತದೆ. ಕರ್ನಾಟಕದ ಏಕೀಕರಣಕ್ಕಾಗಿ ಹೋರಾಡಿದ ನಾಯಕರಾಗಿ, ಕೇಂದ್ರದ ರೈಲ್ವೆ ಮಂತ್ರಿಯಾಗಿ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು ಎಂದು ಸ್ಮರಿಸಿದರು.

“ಸಂವಿಧಾನ ರಚನಾ ಸಮಿತಿಗೆ ಅಮೂಲ್ಯ ಸಲಹೆಗಳನ್ನು ನೀಡಿ, ರಾಷ್ಟ್ರ ನಿರ್ಮಾಣದಲ್ಲಿ ಅಮೂಲ್ಯ ಕೊಡುಗೆಯನ್ನು ನೀಡಿದಂತಹ ಧೀಮಂತ ರಾಜಕಾರಣಿಯೊಬ್ಬರು ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯದ ಪ್ರಥಮ ಚುನಾಯಿತ ಮುಖ್ಯಮಂತ್ರಿಯಾಗಿದ್ದರು. ಹನುಮಂತಯ್ಯನವರು ವಿಧಾನಸೌಧಕ್ಕೆ ಬುನಾದಿ ಹಾಕಿದರಾದರೂ, ಉದ್ಘಾಟನೆಯ ಸಂದರ್ಭದಲ್ಲಿ ಅವರು ಮುಖ್ಯಮಂತ್ರಿಯಾಗಿರಲಿಲ್ಲವೆಂಬುದು ನೋವಿನ ಸಂಗತಿ. ಅವರ ಆದರ್ಶ ಮತ್ತು ಸಿದ್ದಾಂತಗಳು ಎಲ್ಲರಿಗೂ ಮಾರ್ಗದರ್ಶನ ನೀಡುತ್ತವೆ” ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments