Homeಕರ್ನಾಟಕಶಿವಾಜಿ ಜಯಂತಿ | ಬಾಗಲಕೋಟೆಯಲ್ಲಿ ಕಿಡಿಗೇಡಿಗಳಿಂದ ಕಲ್ಲು ತೂರಾಟ, ನಿಷೇಧಾಜ್ಞೆ ಜಾರಿ

ಶಿವಾಜಿ ಜಯಂತಿ | ಬಾಗಲಕೋಟೆಯಲ್ಲಿ ಕಿಡಿಗೇಡಿಗಳಿಂದ ಕಲ್ಲು ತೂರಾಟ, ನಿಷೇಧಾಜ್ಞೆ ಜಾರಿ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ಘಟನೆ ಬಾಗಲಕೋಟೆಯ ಕಿಲ್ಲಾ ಓಣಿಯಲ್ಲಿ ಕಳೆದ ರಾತ್ರಿ ನಡೆದಿದ್ದು ಸದ್ಯ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.

ಶಾಂತವಾಗಿ ನಡೆಯುತ್ತಿದ್ದ ಮೆರವಣಿಗೆ ವೇಳೆ ಕಲ್ಲು ತೂರಿದ್ದಾರೆ ಎಂದು ಹಿಂದೂ ಸಂಘಟನೆಗಳ ನಾಯಕರು ದೂರಿದ್ದಾರೆ. ಮೆರವಣಿಗೆ ಸಾಗುತ್ತಿದ್ದವರ ಮೇಲೆ ಮಸೀದಿ‌ ಕಡೆಯಿಂದ ಕಲ್ಲು ಬಂದಿದೆ.ನಮ್ಮ ಕಾರ್ಯಕರ್ತರ ಜೊತೆಗೆ ಬೆಳಗಾವಿ ಎಸ್‌ಪಿ, ಪೊಲೀಸರ ಮೇಲೂ ಕಲ್ಲು ಬಿದ್ದಿದೆ ಎಂದು ಹಿಂದೂ ಮುಖಂಡರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಕಲ್ಲು ತೂರಿದ ಬೆನ್ನಲ್ಲೇ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಪೊಲೀಸರು ಜನರನ್ನು ಚದುರಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದ್ದು ಭಾರೀ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ಶಿವಾಜಿ ಜಯಂತಿ ಹಿನ್ನೆಲೆಯಲ್ಲಿ ಭಾವಚಿತ್ರ ಮೆರವಣಿಗೆಯಲ್ಲಿ ಹಿಂದೂ ಸಂಘಟನೆ ಮುಖಂಡರು ಸಾಗುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು ಕಲ್ಲು, ಚಪ್ಪಲಿ ತೂರಾಟ ನಡೆಸಿದರು. ಘಟನೆಯಲ್ಲಿ ಪೊಲೀಸ್​​ ಸಿಬ್ಬಂದಿ ಸೇರಿ ಓರ್ವ ಸಾರ್ವಜನಿಕರಿಗೆ ಗಾಯವಾಗಿರುವ ಮಾಹಿತಿ ಇದ್ದು, ಕಲ್ಲು ತೂರಾಟ ಹಿನ್ನೆಲೆ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಘಟನೆ ನಡೆದ ಮರು ಕ್ಷಣವೇ ಜನರನ್ನು ಚದುರಿಸಿ ಪೊಲೀಸರು ಪರಿಸ್ಥಿತಿ ತಿಳಿಗೊಳಿಸುವ ಯತ್ನ ಮಾಡಿದ್ದು, ಮುಂಜಾಗೃತಾ ಕ್ರಮವಾಗಿ ಪಂಕಾ ಮಸೀದಿ ಮತ್ತು ಕೊತ್ತಲೇಶ್ವರ ದೇಗುಲ ಬಳಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಯಾವುದೇ ಅನಾಹುತ ನಡೆಯದಂತೆ ನೋಡಿಕೊಳ್ಳಲು ಪೊಲೀಸ್​​ ಸಿಬ್ಬಂದಿ ಸ್ಥಳದಲ್ಲಿಯೇ ಬೀಡುಬಿಟ್ಟಿದ್ದಾರೆ.

ಕಲ್ಲು ತೂರಾಟದ ಹಿನ್ನೆಲೆ ಹಿಂದೂ ಕಾರ್ಯಕರ್ತ ಪ್ರಕಾಶ್ ಅರಕೇರಿ ಎಂಬುವರ ತಲೆಗೆ ಗಾಯವಾಗಿದ್ದು, ಅವರನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಿವಾಜಿ ಜಯಂತಿ ಮೆರವಣಿಗೆ ಮಸೀದಿ ಬಳಿ ಬಂದಾಗ ಎರಡು ಕಲ್ಲು ಬಂದು ಬಿದ್ದಿವೆ. ಸದ್ಯ ಪರಿಸ್ಥಿತಿ ತಿಳಿಯಾಗಿದ್ದು, ನಾವು ವಿಡಿಯೋಗಳನ್ನು ಪರಿಶೀಲನೆ ಮಾಡುತ್ತಿದ್ದೇವೆ. ಬಾಗಲಕೋಟೆಯಲ್ಲಿ ಹೆಚ್ಚಿನ ಭದ್ರತೆ ‌ಕಲ್ಪಿಸಲಾಗಿದ್ದು,ಆರೋಪಿಗಳನ್ನ ಬಂಧಿಸಲಾಗುತ್ತದೆ. ಸದ್ಯಕ್ಕೆ ನಗರದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಬಾಗಲಕೋಟೆ ಎಸ್ಪಿ ಸಿದ್ಧಾರ್ಥ್ ತಿಳಿಸಿದ್ದಾರೆ.

ಕಲ್ಲು ತೂರಾಟದ ವೇಳೆ ತರಕಾರಿ ಮಾರುಕಟ್ಟೆಯ ಮೂರು ತಳ್ಳುಗಾಡಿಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆಯೂ ನಡೆದಿದೆ. ಎಚ್ಚೆತ್ತ ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ, ಕೂಡಲೇ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.

ಬಾಗಲಕೋಟೆ ಬಂದ್​​ ಎಚ್ಚರಿಕೆ

ಘಟನೆ ಖಂಡಿಸಿ ಯುವಕರು ರಸ್ತೆಯಲ್ಲಿ ಪ್ರತಿಭಟನೆಗೆ ಮುಂದಾಗಿದ್ದು, ಕಲ್ಲೆಸೆದವರ ಬಂಧಿಸಬೇಕು ಮತ್ತು ಐಜಿಪಿ ಸ್ಥಳಕ್ಕೆ ಬರಬೇಕು ಎಂದು ಪಟ್ಟು ಹಿಡಿದ ಪ್ರಸಂಗ ನಡೆಯಿತು. ಯುವಕರನ್ನು ಮನವೊಲಿಸಿ ಪೊಲೀಸರು ಕಳುಹಿಸಿದ್ದರೂ ಆರೋಪಿಗಳನ್ನು ಅರೆಸ್ಟ್​​ ಮಾಡಿದಿದ್ದಲ್ಲಿ ಬಾಗಲಕೋಟೆ ಬಂದ್​​ಗೆ ಕರೆ ನೀಡುತ್ತೇವೆ ಎಂದು ಹಿಂದೂ ಕಾರ್ಯಕರ್ತರು ಎಚ್ಚರಿಸಿದ್ದಾರೆ.

ನಿಷೇಧಾಜ್ಞೆ ಜಾರಿ

ಕಲ್ಲು, ಚಪ್ಪಲಿ ತೂರಾಟ ಹಿನ್ನೆಲೆ ಫೆ.24ರ ಮಧ್ಯರಾತ್ರಿವರೆಗೆ ಹಳೆ ಬಾಗಲಕೋಟೆ, ನವನಗರ, ವಿದ್ಯಾಗಿರಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments