Homeಕರ್ನಾಟಕಜಿಬಿಎ ಚುನಾವಣೆ | ಗೆಲುವಿಗೆ ಕಾರ್ಯತಂತ್ರ ಸಂಬಂಧ ವಿಜಯೇಂದ್ರ ಸಭೆ

ಜಿಬಿಎ ಚುನಾವಣೆ | ಗೆಲುವಿಗೆ ಕಾರ್ಯತಂತ್ರ ಸಂಬಂಧ ವಿಜಯೇಂದ್ರ ಸಭೆ

ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಪಂಚ ಪಾಲಿಕೆಗಳ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

ಪಂಚ ಪಾಲಿಕೆಗಳ ಚುನಾವಣೆ ಕಾರ್ಯತಂತ್ರ ಸಂಬಂಧ ಇಂದು ಸಭೆ ನಡೆಯಿತು. ಕಾಂಗ್ರೆಸ್ಸಿನ ಅಸಮರ್ಥ ಆಡಳಿತವನ್ನು ಜನರಿಗೆ ಮನವರಿಕೆ ಮಾಡುವ ಮೂಲಕ ಬಿಜೆಪಿ ಗೆಲುವಿಗೆ ಶ್ರಮಿಸಲು ಸಲಹೆ ನೀಡಲಾಯಿತು.

ಜಿಬಿಎ ಚುನಾವಣಾ ಉಸ್ತುವಾರಿ ರಾಮ್ ಮಾಧವ್, ಸಹ ಉಸ್ತುವಾರಿಗಳಾದ ಸತೀಶ್ ಪೂನಿಯ, ಸಂಜಯ್ ಉಪಾಧ್ಯಾಯ, ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ್, ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ, ಮಾಜಿ ಸಚಿವರಾದ ಎಸ್.ಸುರೇಶ್‍ಕುಮಾರ್, ಕೆ.ಗೋಪಾಲಯ್ಯ, ಬೈರತಿ ಬಸವರಾಜ್, ಎನ್.ಮುನಿರತ್ನ, ರಾಜ್ಯ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್, ಶಾಸಕ ಮತ್ತು ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ.ರಾಮಮೂರ್ತಿ, ಶಾಸಕರಾದ ಎಲ್.ಎ. ರವಿಸುಬ್ರಹ್ಮಣ್ಯ, ಸುರೇಶ್ ಗೌಡ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ಸಭೆಯ ಅಪೇಕ್ಷಿತರು, ಪ್ರಮುಖರು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments