Homeದೇಶನಿತೀಶ್ ಕುಮಾರ್ ರಾಜೀನಾಮೆ, ಬಿಹಾರದ ಮೊದಲ ಬಿಜೆಪಿ ಸಿಎಂ ಆದ ಸಾಮ್ರಾಟ್ ಚೌಧರಿ

ನಿತೀಶ್ ಕುಮಾರ್ ರಾಜೀನಾಮೆ, ಬಿಹಾರದ ಮೊದಲ ಬಿಜೆಪಿ ಸಿಎಂ ಆದ ಸಾಮ್ರಾಟ್ ಚೌಧರಿ

ಬಿಹಾರ ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿ ಆಗಿ ಸಾಮ್ರಾಟ್ ಚೌಧರಿ ಮಂಗಳವಾರ ಆಯ್ಕೆಯಾಗಿದ್ದಾರೆ. ಪಾಟ್ನಾದ ಲೋಕಭವನದಲ್ಲಿ ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನಂತರ ಈ ಬೆಳವಣಿಗೆಯಾಗಿದೆ.

ಪಾಟ್ನಾದ ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷದ ಶಾಸಕಾಂಗ ಸಭೆಯಲ್ಲಿ ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಎನ್ ಡಿಎ ಮೈತ್ರಿಕೂಟದ ಶಾಸಕರು ನೂತನ ಸಿಎಂಗೆ ಅಭಿನಂದನೆ ಸಲ್ಲಿಸಿದ್ದಾರೆ. ಸಾಮ್ರಾಟ್ ಚೌಧರಿ ಅವರು ಬಿಹಾರದ ಮೊದಲ ಬಿಜೆಪಿ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇದಕ್ಕೂ ಮುನ್ನ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಂಪುಟ ವಿಸರ್ಜನೆಗೆ ನಿತೀಶ್ ಕುಮಾರ್ ಶಿಫಾರಸು ಮಾಡಿದರು. ಕಳೆದ ತಿಂಗಳು 75 ನೇ ವರ್ಷಕ್ಕೆ ಕಾಲಿಟ್ಟ ಮತ್ತು ವಾರದ ಹಿಂದೆ ರಾಜ್ಯಸಭಾ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ಕುಮಾರ್ ಇಂದು ಕೊನೆಯ ಕ್ಯಾಬಿನೆಟ್ ಸಭೆಯ ನಂತರ ರಾಜಭವನಕ್ಕೆ ತೆರಳಿದ್ದು, ಅಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ನಂತರ ಇಷ್ಟೇಲ್ಲಾ ಬೆಳವಣಿಗೆಯಾಗಿದೆ.

ಹಿಂದೊಮ್ಮೆ ಜೆಡಿಯು ಬಿಜೆಪಿ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿದ್ದಾಗ ನಿತೀಶ್ ಕುಮಾರ್ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ ನಂತರವೇ ಪಗಡಿ ತೆಗೆಯುತ್ತೇನೆ ಎಂದು ಸಾಮ್ರಾಟ್ ಚೌಧರಿ ಶಪಥ ಮಾಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments