Homeಕರ್ನಾಟಕಪಕ್ಷ ವಿರೋಧಿ ಚಟುವಟಿಕೆ | ಅಬ್ದುಲ್ ಜಬ್ಬಾರ್ ಕಾಂಗ್ರೆಸ್‌ನಿಂದ ಅಮಾನತು

ಪಕ್ಷ ವಿರೋಧಿ ಚಟುವಟಿಕೆ | ಅಬ್ದುಲ್ ಜಬ್ಬಾರ್ ಕಾಂಗ್ರೆಸ್‌ನಿಂದ ಅಮಾನತು

ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ವಿಧಾನ ಪರಿಷತ್‌ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್‌ನಿಂದ ಅಮಾನತುಗೊಳಿಸಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸಿದ ಹಿನ್ನೆಲೆಯಲ್ಲಿ ಅಬ್ದುಲ್ ಜಬ್ಬಾರ್‌ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ (ಐಎನ್‌ಸಿ) ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ.

ಇತ್ತೀಚಿಗಷ್ಟೇ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಡಿಕೆ ಶಿವಕುಮಾರ್‌ ಅವರು ರಾಜೀನಾಮೆಯನ್ನು ಅಂಗೀಕಾರ ಮಾಡಿದ್ದರು.

ಇದಕ್ಕೂ ಮುನ್ನ ಸುರ್ಜೇವಾಲಾ ಅವರು ಸಚಿವರಾದ ಜಮೀರ್ ಅಹಮದ್, ಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್ ಹಾಗೂ ನಸೀರ್ ಅಹಮದ್ ವಿರುದ್ಧ ಎರಡು ಪುಟಗಳ ಸಂಪೂರ್ಣ ವರದಿ ಸಮೇತ ಹೈಕಮಾಂಡ್‌ಗೆ ದೂರು ಸಲ್ಲಿಸಿ, ಮೂವರ ವಿರುದ್ಧ ಕ್ರಮವಹಿಸುವಂತೆ ಉಲ್ಲೇಖಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments