Homeಕರ್ನಾಟಕSSLC Result | ಬಾಲಕಿಯರೇ ಮೇಲುಗೈ, ಮೂವರು ರಾಜ್ಯಕ್ಕೆ ಪ್ರಥಮ

SSLC Result | ಬಾಲಕಿಯರೇ ಮೇಲುಗೈ, ಮೂವರು ರಾಜ್ಯಕ್ಕೆ ಪ್ರಥಮ

2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ (SSLC Result 2026) ಬುಧವಾರ (ಏಪ್ರಿಲ್ 23) ಶಿಕ್ಷಣ ಇಲಾಖೆಯ ವೆಬ್​ಸೈಟ್​ನಲ್ಲಿ ಪ್ರಕಟವಾಗಿದೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶದ ವಿವರ ನೀಡಿದರು.

ಈ ಬಾರಿ SSLC ಪರೀಕ್ಷೆಯಲ್ಲಿ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ದಾಖಲೆಯ ಫಲಿತಾಂಶ ಬಂದಿದೆ ಎಂದು ಸಚಿವರು ತಿಳಿಸಿದರು.

ಮೂವರು ವಿದ್ಯಾರ್ಥಿಗಳು 625ರಲ್ಲಿ 625 ಅಂಕ ಪಡೆದಿದ್ದಾರೆ. ದಾವಣಗೆರೆಯ ಭರತ್​, ಚಿಕ್ಕಮಗಳೂರಿನ ಬೃಂದಾ, ಬೆಂಗಳೂರು ಉತ್ತರದ ಧನುಷ್​, ಉಡುಪಿಯ ಪ್ರೀತಂ, ಚಿಕ್ಕೋಡಿಯ ಪ್ರಾರ್ಥನಾ, ವಿಜಯಪುರದ ಸೌಜನ್ಯಾ, ರಾಯಚೂರಿನ ಸುಖದೇವ್ 625ರಲ್ಲಿ 625 ಅಂಕ ಪಡೆದವರಾಗಿದ್ದಾರೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧಿಕೃತ ಪೋರ್ಟಲ್ https://karresults.nic.in ಮೂಲಕವೂ ಫಲಿತಾಂಶ ವೀಕ್ಷಿಸಬಹುದಾಗಿದೆ. ಹಾಗೇಯೇ ‘KarnatakaOne’ ಮೊಬೈಲ್ ಆ್ಯಪ್ ಮೂಲಕವೂ ಫಲಿತಾಂಶ ಪರಿಶೀಲಿಸಿಕೊಳ್ಳಬಹುದು. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗೆ ಮಂಡಳಿ ವತಿಯಿಂದಲೇ ನೇರವಾಗಿ ಫಲಿತಾಂಶದ ವಿವರಗಳು ಎಸ್‌ಎಂಎಸ್ ಅಥವಾ ವಾಟ್ಸಾಪ್ ಮೂಲಕ ರವಾನೆಯಾಗುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments