ಗ್ರಾಮ ಪಂಚಾಯ್ತಿಗಳಲ್ಲಿ ಕುಡಿಯುವ ನೀರು ಪೂರೈಸಲು ನಯಾಪೈಸೆ ಹಣವೂ ಇಲ್ಲ ಎಂದು ಆಳಂದ ಕ್ಷೇತ್ರದ ಶಾಸಕ ಬಿ.ಆರ್. ಪಾಟೀಲ್ ಆಕ್ರೋಶ ವ್ಯಕ್ತಪಡಿಸಿರುವುದು ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿಗೆ ಸಾಕ್ಷಿಯಾಗಿದೆ ಎಂದು ಜೆಡಿಎಸ್ ಕುಟುಕಿದೆ.
ಕಲಬುರಗಿ ಜಿಲ್ಲೆಯಲ್ಲಿ ಜನರು ಕುಡಿಯುವ ನೀರಿಗಾಗಿ ಕಿಲೊ ಮೀಟರ್ ಗಟ್ಟಲೇ ಅಲೆಯಬೇಕಾಗಿದೆ. ಬಿರು ಬೇಸಿಗೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ನೀರಿಗಾಗಿ ಜನ ಪರದಾಡುತ್ತಿದ್ದಾರೆ ಎಂದು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದೆ.
ಕುರ್ಚಿ ಆಸೆಗೆ ಸಿದ್ದರಾಮಯ ಮತ್ತು ಡಿ ಕೆ ಶಿವಕುಮಾರ್ ಬಣಗಳು ರಾಜ್ಯವನ್ನು ಸಂಕಷ್ಟಕ್ಕೆ ನೂಕಿದ್ದು, ಬಾಯಾರಿದ ಜನರಿಗೆ ಜೀವಜಲ ಒದಗಿಸಲು ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದೆ.


