ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಇಂದು ಎಲೆಕ್ಟ್ರಾನಿಕ್ ಸಿಟಿಯ ಕೃಷ್ಣ ಆರೋಗ್ಯ ವಿಜ್ಞಾನ ಸಂಸ್ಥೆಗೆ (kims) ಭೇಟಿ ನೀಡಿ ಸಚಿವ ಸುಧಾಕರ್ ಅವರ ಆರೋಗ್ಯ ವಿಚಾರಿಸಿದರು.
ಸುಧಾಕರ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ಕುರಿತು ಆಸ್ಪತ್ರೆಯ ವೈದ್ಯರಿಂದ ಮಾಹಿತಿ ಪಡೆದು, ಕುಟುಂಬದವರೊಂದಿಗೆ ಮಾತನಾಡಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಮಾನ್ಯ ಗೃಹ ಸಚಿವರಾದ ಜಿ.ಪರಮೇಶ್ವರ ಅವರು, ಸಚಿವ ಸುಧಾಕರ್ ಅವರ ಆರೋಗ್ಯ ಸ್ಥಿರವಾಗಿದ್ದು, ಗುಣರಾಗುತ್ತಾರೆ. ವೈದ್ಯರು ಪಾಸಿಟಿವ್ ಆಗಿ ಪ್ರತಿಕ್ರಿಯಿಸಿದ್ದಾರೆ. ಚೇತರಿಸಿಕೊಳ್ಳುವುದಕ್ಕೆ ಸಮಯ ತೆಗೆದುಕೊಳ್ಳುತ್ತದೆ. ಇದಕ್ಕೆ ಕಾಯಬೇಕು. ಸುಧಾಕರ್ ಅವರ ಆರೋಗ್ಯದ ವಿಚಾರದಲ್ಲಿ ಮುಚ್ಚಿಡುತ್ತಿದ್ದಾರೆ ಎಂಬುದಾಗಿ ಬಿಂಬಿಸುತ್ತಿರುವಂತೆ ಏನು ಇಲ್ಲ ಎಂದು ಹೇಳಿದರು.


