Homeಕರ್ನಾಟಕದಾವಣಗೆರೆ | ಪ್ರಯಾಸದ ಗೆಲುವು ಕಂಡ ಸಮರ್ಥ್‌ ಶಾಮನೂರು

ದಾವಣಗೆರೆ | ಪ್ರಯಾಸದ ಗೆಲುವು ಕಂಡ ಸಮರ್ಥ್‌ ಶಾಮನೂರು

ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್‌ ಶಾಮನೂರು ಕೊನೆಗೂ ಪ್ರಯಾಸದ ಗೆಲುವು ಕಂಡಿದ್ದಾರೆ.

ಐದು ರಾಜ್ಯಗಳ ಚುನಾವಣೆ ಫಲಿತಾಂಶದೊಂದಿಗೆ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಆಡಳಿತರೂಢ ಕಾಂಗ್ರೆಸ್ ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದೆ.

ತೀವ್ರ ಕುತೂಹಲ ಕೆರಳಿಸಿದ್ದ ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಶಾಮನೂರು ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರ ವಿರುದ್ಧ 4967 ಮತಗಳ ಅಂತರದಿಂದ ಗೆದ್ದಿದ್ದು, 20ನೇ ಸುತ್ತಿನ ಎಣಿಕೆ ಬಳಿಕ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಬೆಂಬಲಿಗರು ವಿಜಯೋತ್ಸವ ಆಚರಿಸಿದರು.

ಮತದಾನ ಆರಂಭಗೊಂಡ ಮೊದಲ 6 ಸುತ್ತಿನಲ್ಲಿಯೂ ಸಮರ್ಥ್ ಶಾಮನೂರು ಹಿನ್ನಡೆ ಕಾಯ್ದುಕೊಂಡಿದ್ದು, 7ನೇ ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಮುನ್ನಡೆಯಲ್ಲಿದ್ದರು. ಆದರೆ 8 ಹಾಗೂ 9ನೇ ಸುತ್ತಿನಲ್ಲಿ ಅಂಕಿ-ಸಂಖ್ಯೆ ಉಲ್ಟಾ ಆಗಿದೆ. ಕೊನೆಗೆ ಈ ರಣಕಣದಲ್ಲಿ ಗೆಲುವು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್​ ಶಾಮನೂರು ಪಾಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments